ಗದಗ

ನೌಕರರು ಕರ್ತವ್ಯ ನಿಷ್ಠೆಯಿಂದ ಕಾರ್ಯನಿರ್ವಹಿಸಿ

Published On :

ರೋಣ: ತಾಲೂಕಿನ ಸಮಗ್ರ ಅಭಿವೃದ್ಧಿ ಹಾಗೂ ಜನತೆಯ ಆಶೋತ್ತರಗಳಿಗೆ ಸ್ಪಂದಿಸುವ ದಿಶೆಯಲ್ಲಿ ಕರ್ತವ್ಯ ನಿಷ್ಠೆಯಿಂದ ಕಾರ್ಯನಿರ್ವಹಿಸುವ ನೌಕರರಿಗೆ ಪ್ರೋತ್ಸಾಹವಿದೆ ಎಂದು ಶಾಸಕ ಜಿ.ಎಸ್. ಪಾಟೀಲ ಹೇಳಿದರು.
ಅವರು ಸೋಮವಾರ ಸಂಜೆ ಪಟ್ಟಣದ ಕರ್ನಾಟಕ ರಾಜ್ಯ ನೌಕರರ ಸಂಘ ತಾಲೂಕು ಘಟಕ ಆಶ್ರಯದಲ್ಲಿ ನೂತನವಾಗಿ ನಿರ್ಮಿಸಿದ ಮಾರುತಿ ದೇವಸ್ಥಾನದ ಮೂರ್ತಿ ಪ್ರತಿಷ್ಠಾಪನೆ, ಕಳಸಾರೋಹಣ ಹಾಗೂ ಡಿ ದರ್ಜೆಯ ನೌಕರರ ಭವನ, ಮತ್ತು ವಾಣಿಜ್ಯ ಮಳಿಗೆ ಉದ್ಘಾಟನೆ ನೆರವೇರಿಸಿ ಮಾತನಾಡಿದರು. ತಾಲೂಕಿನಲ್ಲಿ ಕಾರ್ಯನಿರ್ವಹಿಸುತ್ತಿರುವ ನೌಕರರಲ್ಲಿ ವರ್ಗಾವಣೆ ಭಯ ಆವರಿಸಿದ್ದನ್ನು ನಾನು ಕೇಳಿದ್ದು, ನೌಕರರಲ್ಲಿ ಆ ಭಯ ಬೇಡಾ, ನೌಕರರೊಂದಿಗೆ ನಾನು ಇದ್ದೇನೆ. ಯಾವುದೇ ಕಾರಣಕ್ಕೂ ಯಾವುದೇ ಇಲಾಖೆಯ ಸಿಬ್ಬಂದಿ ನನ್ನ ಅಧಿಕಾರದ ಅವಧಿಯಲ್ಲಿ ಬೆರೆ ಕಡೆಗೆ ವರ್ಗಾವಣೆ ಮಾಡುವುದಿಲ್ಲಾ. ಹಿಗಾಗಿ ತಾವು ನನ್ನ ಮೇಲೆ ನಂಬಿಕೆ ಇಟ್ಟು ರೋಣ ತಾಲೂಕು ಮತ್ತು ಮತಕ್ಷೇತ್ರದ ಜನರೊಂದಿಗೆ ಉತ್ತಮ ಬಾಂಧವ್ಯ ಹೊಂದುವ ಮೂಲಕ ಅವರ ಕೆಲಸ ಕಾರ್ಯಗಳಲ್ಲಿ ಪ್ರಾಮಾಣಿಕವಾಗಿ ಭಾಗಿಯಾಗಬೇಕು ಎಂದರು. ನರಗುಂದ ಶಾಸಕ ಬಿ.ಆರ್. ಯಾವಗಲ್ಲ ಮಾತನಾಡಿ, ಸಂಬಳಕ್ಕೆ ಪ್ರತಿಯಾಗಿ ಸಮಾಜ ಸೇವೆಯನ್ನು ಮಾಡುವ ದಿಶೆಯಲ್ಲಿ ಭಾವನೆ, ಕರ್ತವ್ಯ ಅತ್ಯಗತ್ಯವಾಗಿದೆ. ಜಡತ್ವ ವ್ಯವಸ್ಥೆಯಿಂದ ಹೊರ ಬನ್ನಿರಿ ಎಂದರು. ತಾಲೂಕು ನೌಕರರ ಸಂಘದ ಅಧ್ಯಕ್ಷ ಶಿವಪುತ್ರಪ್ಪ ದೊಡ್ಡಮನಿ ಅಧ್ಯಕ್ಷತೆ ವಹಿಸಿದ್ದರು. ಗುರುಪಾದ ದೇವರು, ಅಭಿನವ ಬಸವಲಿಂಗ ಶ್ರೀಗಳು, ಬೈರನಹಟ್ಟಿ ಶಾಂತಲಿಂಗ ಶ್ರೀಗಳು, ಸದಾಶಿವ ಮಹಾಂತ ಶಿವಾಚಾರ್ಯ ಶ್ರೀಗಳು ಮತ್ತು ಗಂಗಾಧರ ಶ್ರೀಗಳು ಸಾನ್ನಿಧ್ಯ ವಹಿಸಿದ್ದರು. ಮಾಜಿ ಸಂಸದ ಆರ್.ಎಸ್. ಪಾಟೀಲ, ದಶರಥ ಗಾಣಿಗೇರ, ಪುರಸಭೆ ಅಧ್ಯಕ್ಷ ಮುತ್ತಣ್ಣ ಸಂಗಳದ, ರಾಜಣ್ಣ ಹೂಲಿ, ಪ್ರೇಮನಾಥ ಗರಗ, ಪಿ.ಬಿ. ಪಾಟೀಲ, ರಾಜಶೇಖರ ಒಡೆಯರ, ಮಲ್ಲಿಕಾರ್ಜುನ ಹಿರೇಮಠ, ಎಂ.ವ್ಹಿ. ಪೂಜಾರ, ಮುಂತಾದವರು ಉಪಸ್ಥಿತರಿದ್ದರು. ಮಹೇಶ ಕುರಿಯವರ ನಿರೂಪಿಸಿದರು. ಚಂದ್ರಶೇಖರ ಸೂಡಿ ಸ್ವಾಗತಿಸಿ, ವಂದಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.