ಅಕ್ರಮ ಗಾಂಜಾ ವಶ
ಗದಗ: ಜಿಲ್ಲೆಯ ಶಿರಹಟ್ಟಿ ತಾಲೂಕಿನ ಯಳವತ್ತಿ ಗ್ರಾಮದ ಹೊರವಲಯದಲ್ಲಿರುವ ಮೆಣಸಿನಕಾಯಿ ಹೊಲದಲ್ಲಿ ಅಕ್ರಮವಾಗಿ ಬೆಳೆಯಲಾಗಿದ್ದ ರು. 1 ಲಕ್ಷ ಮೌಲ್ಯದ 10 ಕೆಜಿ ಗಾಂಜಾವನ್ನು ವಶ ಪಡಿಸಿಕೊಂಡ ಘಟನೆ ಸೋಮವಾರ ಸಂಜೆ ನಡೆದಿದೆ. ಯಳವತ್ತಿ ಗ್ರಾಮದ ಶರೀಫಸಾಬ್ ಅತ್ತಿಗೇರಿ ಎಂಬಾತ ಮೆಣಸಿನಕಾಯಿ ಗಿಡದಲ್ಲಿ ಅಕ್ರಮವಾಗಿ ಈ ಗಾಂಜಾ ಬೆಳೆದಿದ್ದ ಎನ್ನಲಾಗಿದ್ದು, ಈ ಕುರಿತು ಖಚಿತ ಮಾಹಿತಿ ಪಡೆದ ಪೊಲೀಸರು ದಾಳಿ ಮಾಡಿದ್ದಾರೆ. ಸುದ್ದಿ ತಿಳಿಯುತ್ತಿದ್ದಂತೆ ಆರೋಪಿ ಶರೀಫಸಾಬ್ ಗ್ರಾಮದಿಂದ ನಾಪತ್ತೆಯಾಗಿದ್ದಾನೆ. ಆರೋಪಿ ಪತ್ತೆಗಾಗಿ ಮುಳಗುಂದ ಪೊಲೀಸರು ಜಾಲ ಬೀಸಿದ್ದಾರೆ.
ಕಾಲುವೆಯಲ್ಲಿ ಶವ ಪತ್ತೆ
ಹೊಸಪೇಟೆ: ತಾಲೂಕಿನ ಕಮಲಾಪುರದ ಎಚ್ಪಿಟಿ ಕಾಲುವೆಯಲ್ಲಿ ವ್ಯಕ್ತಿಯೋರ್ವನ ಮೃತದೇಹ ಪತ್ತೆಯಾಗಿದೆ. ಮೃತ ವ್ಯಕ್ತಿಯನ್ನು ಗದಗಿನ ಬ್ಯಾಂಕ್ ಆಫ್ ಇಂಡಿಯಾ ಶಾಖೆಯ ಮ್ಯಾನೇಜರ್ ನಾಗೇಂದ್ರ ಕುಲಕರ್ಣಿ (53) ಎಂದು ಗುರುತಿಸಲಾಗಿದೆ. ಈ ಕುರಿತು ಕಮಲಾಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟ್ರ್ಯಾಕ್ಟರ್-ಟಂಟಂ ಡಿಕ್ಕಿ: ಇಬ್ಬರ ಸಾವು
ಗದಗ: ಜಿಲ್ಲೆಯ ನರಗುಂದ ತಾಲೂಕಿನ ಕೊಣ್ಣೂರ-ಬೆಳ್ಳೇರಿ ರಸ್ತೆಯಲ್ಲಿ ಸೋಮವಾರ ತಡರಾತ್ರಿ ಟ್ರ್ಯಾಕ್ಟರ್ ಹಾಗೂ ಟಂಟಂ ವಾಹನ ಮಧ್ಯೆ ನಡೆದ ಅಪಘಾತದಲ್ಲಿ ಇಬ್ಬರು ಸಾವನ್ನಪ್ಪಿದ ಘಟನೆ ನಡೆದಿದೆ. ಕೊಣ್ಣೂರ ಕಡೆಯಿಂದ ರಾಮದುರ್ಗ ಕಡೆಗೆ ಹೋಗುತ್ತಿದ್ದ ಟ್ರ್ಯಾಕ್ಟರ್ ಹಾಗೂ ಆ ಕಡೆಯಿಂದ ಬರುತ್ತಿದ್ದ ಟಂಟಂ ಮಧ್ಯೆ ಅಪಘಾತ ಸಂಭವಿಸಿದೆ. ಮೃತರನ್ನು ಬದಾಮಿ ತಾಲೂಕಿನ ಕರಡಿಗುಡ್ಡ ಗ್ರಾಮದ ಸಕ್ರವ್ವ ಮಣ್ಣೂರ (65) ಲಕ್ಷ್ಮವ್ವ ಕಮಲದಿನ್ನಿ (50) ಎಂದು ಗುರುತಿಸಲಾಗಿದೆ. ಈ ಕುರಿತು ನರಗುಂದ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಅಪಘಾತ: ಓರ್ವ ಸಾವು
ಲಕ್ಷ್ಮೇಶ್ವರ: ಸಮೀಪದ ರಾಮಗೇರಿ ಹತ್ತಿರ ಲಕ್ಷ್ಮೇಶ್ವರ-ಹುಬ್ಬಳ್ಳಿ ರಸ್ತೆಯ ಮೇಲೆ ಭಾನುವಾರ ತಡರಾತ್ರಿ ಬೈಕ್ ಅಪಘಾತದಲ್ಲಿ ವ್ಯಕ್ತಿಯೋರ್ವ ಮೃತಪಟ್ಟ ಘಟನೆ ಜರುಗಿದೆ. ಮೃತನನ್ನು ಕುಂದಗೋಳ ತಾಲೂಕಿನ ಸುಲ್ತಾನಪುರ ಗ್ರಾಮದ ಪರಶುರಾಮ ಬಸಪ್ಪ ಹೊನ್ನಪ್ಪನವರ (30) ಎಂದು ಗುರುತಿಸಲಾಗಿದೆ. ಈ ಕುರಿತು ಲಕ್ಷ್ಮೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಯುವಕ ಆತ್ಮಹತ್ಯೆ
ಗದಗ: ಮನೆಯಲ್ಲಿ ಪಾಲಕರು ಮದುವೆ ಮಾಡಲಿಲ್ಲ ಎಂದು ಮಾನಸಿಕಗೊಂಡು ಯುವಕನೋರ್ವ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಜಿಲ್ಲೆಯ ಶಿರಹಟ್ಟಿ ಪಟ್ಟಣದಲ್ಲಿ ಸಂಭವಿಸಿದೆ. ಪಟ್ಟಣದ ನಿವಾಸಿ ಸೋಮಣ್ಣ ದೇವಪ್ಪ ಘಂಟಿ (25) ಮೃತ ದುರ್ದೈವಿಯಾಗಿದ್ದಾನೆ. ಈ ಕುರಿತು ಶಿರಹಟ್ಟಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

