ಗದಗ

ಕೊನೆಗೂ ಮೆಡಿಕಲ್ ಕಾಲೇಜಿಗೆ ಮಹೂರ್ತ

Published On :

-ಸೋಮರಡ್ಡಿ ಅಳವಂಡಿ
ಕನ್ನಡಪ್ರಭ ವಾರ್ತೆ, ಕೊಪ್ಪಳ, ಅ. 16
ಬಹುದಿನಗಳ ಕನಸು ನನಸಾಗುವ ಕಾಲ ಕೂಡಿ ಬಂದಿದೆ. ಕೊಪ್ಪಳದಲ್ಲಿ ಮೆಡಿಕಲ್ ಕಾಲೇಜ್ ಪ್ರಾರಂಭಕ್ಕೆ ಭಾರತೀಯ ವೈದ್ಯಕೀಯ ಮಂಡಳಿ ಹಸಿರು ನಿಶಾನೆ ತೋರಿಸಿರುವ ಬೆನ್ನಲ್ಲೇ ಕಾಲೇಜು ನಿರ್ಮಾಣಕ್ಕೆ ಸಿಎಂ ಸಿದ್ದರಾಮಯ್ಯ ಅವರು ಅಡಿಗಲ್ಲು ಹಾಕುವುದಕ್ಕೂ ಮಹೂರ್ತ ಫಿಕ್ಸ್ ಮಾಡಲಾಗುತ್ತಿದೆ. ಈಗ ಲಭ್ಯ ಮಾಹಿತಿಯ ಪ್ರಕಾರ ಅ. 30 ಅಥವಾ ನವಂಬರ್ 4ರಂದು ದಿನಾಂಕ ನಿಗದಿಯಾಗುವ ಸಾಧ್ಯತೆ ಇದೆ.
ಹಿಂದಿನ ಸರ್ಕಾರದ ಕೊನೆ ಅವಧಿಯಲ್ಲಿ ಮುಖ್ಯಮಂತ್ರಿಯಾಗಿದ್ದ ಜಗದೀಶ ಶೆಟ್ಟರ್ ಅವರು ಘೋಷಣೆ ಮಾಡಿ, ಮಂಜೂರಿ ಮಾಡಿದ ಮೆಡಿಕಲ್  ಕಾಲೇಜ್ ಈಗಿನ ಸರ್ಕಾರ ಭೂಮಿಯನ್ನು ನೀಡಿರುವುದರಿಂದ ಕಾಲೇಜು ಪ್ರಾರಂಭಕ್ಕೆ ಭಾರತೀಯ ವೈದ್ಯಕೀಯ ಮಂಡಳಿ ಒಪ್ಪಿಗೆ ನೀಡಿದೆ. ಹೀಗಾಗಿ, ರಾಜ್ಯದಲ್ಲಿ ನೂತನವಾಗಿ ಪ್ರಾರಂಭವಾಗುವ ಆರು ವೈದ್ಯಕೀಯ ಕಾಲೇಜುಗಳ ಪೈಕಿ ಕೊಪ್ಪಳವೂ ಒಂದು.
ಮೊದಲ ಬಾರಿಗೆ ಕೊಪ್ಪಳಕ್ಕೆ ಸಿಎಂ
ಸಿದ್ದರಾಮಯ್ಯ ಅವರು ಸಿಎಂ ಆದ ಮೇಲೆ ಮೊದಲ ಬಾರಿಗೆ ಕೊಪ್ಪಳಕ್ಕೆ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಇನ್ನು ಅನೇಕ ಯೋಜನೆಗಳಿಗೆ ಚಾಲನೆ ಕೊಡಿಸುವುದಕ್ಕಾಗಿ ತೆರೆಮರೆಯಲ್ಲಿ ಕಸರತ್ತು ಜೋರಾಗಿ ಸಾಗಿದೆ.
ಇದರಲ್ಲಿ ಕೊಪ್ಪಳ ನಗರದಲ್ಲಿ ರಾಷ್ಟ್ರೀಯ ಹೆದ್ದಾರಿ ಪುನರ್ ನಿರ್ಮಾಣವನ್ನು ಪೂರ್ಣಗೊಳಿಸುವುದು ಹಾಗೂ ವೃತ್ತಗಳ ಅಭಿವೃದ್ಧಿಯ ರು. 17 ಕೋಟಿ ಯೋಜನೆಗೂ ಚಾಲನೆ ನೀಡಲಿದ್ದಾರೆ.
ಇದಲ್ಲದೆ ಅಳವಂಡಿ, ಬೆಟಗೇರಿ ಗ್ರಾಮದ ಏತ ನೀರಾವರಿ ಯೋಜನೆಗಳಿಗೂ ಶಂಕುಸ್ಥಾಪನೆ ನೆರವೇರಿಸುವರು. ಹಲಿಗೇರಿ ಕೆಸಲಾಪುರ ರಸ್ತೆಯ ದುರಸ್ತಿಯ ರು. 8.5 ಕೋಟಿ ಯೋಜನೆಗೆ ಚಾಲನೆ ನೀಡಲಿದ್ದಾರೆ. ಅಲ್ಲದೆ ಕೊಪ್ಪಳಕ್ಕೂ ಹೊಸ ಎಂಜಿನಿಯರಿಂಗ್ ಕಾಲೇಜ್ ಘೋಷಣೆ ಮಾಡುವ ಸಾಧ್ಯತೆ ಇದೆ ಎಂದೇ ಹೇಳಲಾಗುತ್ತಿದೆ.
ಇದಲ್ಲದೆ ಇನ್ನು ಕಾರ್ಯಕ್ರಮಗಳನ್ನು  ಘೋಷಿಸುವಂತೆ ಸ್ಥಳೀಯ ಶಾಸಕರು,     ಸಚಿವರು ಮನವಿ ಮಾಡುತ್ತಿದ್ದಾರೆ ಎಂದು ಗೊತ್ತಾಗಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.