ನಾಳೆ ಮಹರ್ಷಿ ವಾಲ್ಮೀಕಿ ಜಯಂತಿ
ಮುಂಡರಗಿ: ತಾಲೂಕು ಆಡಳಿತ ಮುಂಡರಗಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸೇರಿದಂತೆ ವಿವಿಧ ಸಂಘಟನೆಗಳ ಆಶ್ರಯದಲ್ಲಿ ಅ. 18ರ ಬೆಳಗ್ಗೆ 9 ಗಂಟೆಗೆ ಮಹರ್ಷಿ ವಾಲ್ಮೀಕಿ ಜಯಂತಿ ಹಮ್ಮಿಕೊಳ್ಳಲಾಗಿದೆ. 11 ಗಂಟೆಗೆ ಪುರಸಭೆ ಪಕ್ಕದ ಪೊಲೀಸ್ ಪರೇಡ್ ಮೈದಾನದಲ್ಲಿ ಕಾರ್ಯಕ್ರಮದಲ್ಲಿ ಜರುಗಲಿದೆ. ರೋಣ ಶಾಸಕ ಜಿ.ಎಸ್. ಪಾಟೀಲ ಉದ್ಘಾಟಿಸುವರು. ಶಿರಹಟ್ಟಿ ಶಾಸಕ ರಾಮಕೃಷ್ಣ ದೊಡ್ಡಮನಿ ಅಧ್ಯಕ್ಷತೆ ವಹಿಸುವರು. ಸಂಸದ ಶಿವಕುಮಾರ ಉದಾಸಿ, ವಿಪ ಸದಸ್ಯ ಬಸವರಾಜ ಹೊರಟ್ಟಿ, ನಾಗರಾಜ ಛಬ್ಬಿ, ಶ್ರೀನಿವಾಸ ಮಾನೆ, ತಾಪಂ ಅಧ್ಯಕ್ಷ ತಾರೂಬಾಯಿ ಚವ್ಹಾಣ, ಉಪಾಧ್ಯಕ್ಷ ಅಕ್ಕಮಹಾದೇವಿ ಹಾರೋಗೇರಿ, ಎಪಿಎಂಸಿ ಅಧ್ಯಕ್ಷ ಶಿವಕುಮಾರಗೌಡ ಪಾಟೀಲ, ಜಿಪಂ ಸದಸ್ಯ ಬೀರಪ್ಪ ಬಂಡಿ, ಹೇಮಗಿರೀಶ ಹಾವಿನಾಳ, ಕಸ್ತೂರೆವ್ವ ಪಾಟೀಲ ಆಗಮಿಸಲಿದ್ದಾರೆ. ಪ್ರೊ. ವಿ.ಎಲ್. ಪಾಟೀಲ, ಉಪನ್ಯಾಸಕರಾಗಿ ಜಯಲಕ್ಷ್ಮೀ ತಿಮ್ಮಾಪುರ ಆಗಮಿಸಲಿದ್ದಾರೆ ಎಂದು ಮಹರ್ಷಿ ವಾಲ್ಮೀಕಿ ಜಯಂತ್ಯುತ್ಸವ ಸಮಿತಿ ಅಧ್ಯಕ್ಷ ಹಾಗೂ ತಹಸೀಲ್ದಾರ್ ಎಸ್.ಆರ್. ಶಿರಕೋಳ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
--
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

