ಅಭಿವೃದ್ಧಿ ಕಾರ್ಯಕ್ಕೆ ಸಹಕರಿಸಿ
ಕನ್ನಡಪ್ರಭ ವಾರ್ತೆ, ಶಿರಹಟ್ಟಿ, ಅ. 17
ಸರ್ವರೂ ಪಕ್ಷಭೇದ ಮರೆತು ಪಪಂ ವತಿಯಿಂದ ಕೈಗೆತ್ತಿಕೊಂಡಿರುವ ಅಭಿವೃದ್ಧಿ ಕಾರ್ಯಗಳಿಗೆ ಸಹಕರಿಸಬೇಕು ಎಂದು ಪಪಂ ಅಧ್ಯಕ್ಷ ನಾಗರಾಜ ಲಕ್ಕುಂಡಿ ಹೇಳಿದರು.
ಅವರು ಪಟ್ಟಣದ ಕಚೇರಿ ರಸ್ತೆಯಲ್ಲಿ ಬುಧವಾರ ಸಂಜೆ 13ನೇ ಹಣಕಾಸು ಯೋಜನೆ ಅಡಿಯಲ್ಲಿ ಅಳವಡಿಸಲಾದ ಹೈಮಾಸ್ಟ್ ವಿದ್ಯುತ್ (ಕಂಬ) ದೀಪಕ್ಕೆ ಪೂಜೆ ನೆರವೇರಿಸಿ ಮಾತನಾಡಿದರು.
ಸರ್ಕಾರದ ಯೋಜನೆಗಳನ್ನು ಸದ್ಬಳಕೆ ಮಾಡಿಕೊಂಡು ಪಟ್ಟಣದಲ್ಲಿ ನಡೆಯುವ ಕಾಂಕ್ರಿಟ್ ರಸ್ತೆ, ಗಟಾರ ನಿರ್ಮಾಣ, ಸಮುದಾಯ ಭವನ ಕಾಮಗಾರಿಗಳನ್ನು ಗುಣಮಟ್ಟದ ಸಾಮಗ್ರಿಗಳನ್ನು ಬಳಸಿ ಕ್ರಿಯಾಯೋಜನೆಗೆ ತಕ್ಕಂತೆ ಕಾಮಗಾರಿ ಮಾಡಲು ಸಹಕರಿಸುವಂತೆ ಕೋರಿದರು.
ಪಟ್ಟಣದ ಎಲ್ಲ ವಾರ್ಡ್ಗಳ ನಾಗರಿಕರಿಗೆ ಅವಶ್ಯಕ ಸೌಕರ್ಯಗಳನ್ನು ಕಲ್ಪಿಸುವ ಉದ್ದೇಶದಿಂದ ಸರ್ಕಾರದಿಂದ ಹೆಚ್ಚಿಗೆ ಅನುದಾನ ಮಂಜೂರು ಮಾಡಿಸಿಕೊಡುವಂತೆ ಶಾಸಕರ ಗಮನಕ್ಕೆ ತರಲಾಗಿದೆ. ಸದ್ಯ ಲಭ್ಯವಿರುವ ಅನುದಾನದಲ್ಲಿ ಕ್ರಿಯಾಯೋಜನೆ ಸಿದ್ಧಪಡಿಸುತ್ತಿದ್ದು, ಪಟ್ಟಣ ಪಂಚಾಯಿತಿ ಠರಾವಿನಲ್ಲಿ ತೀರ್ಮಾನಿಸಿದ ಕ್ರಿಯಾ ಯೋಜನೆಯ ಪ್ರಕಾರ ಕಾಮಗಾರಿಗಳನ್ನು ಆರಂಭಿಸುವುದಾಗಿ ತಿಳಿಸಿದರು.
ಯಾವುದೇ ಅಭಿವೃದ್ಧಿ ಕಾಣದೇ ಮೂಲ ಸೌಲಭ್ಯಗಳು ಸಿಗದೇ ಸರ್ಕಾರದ ಸವಲತ್ತುಗಳಿಂದ ವಂಚಿತವಾದ ಬಡಾವಣೆಗಳಿದ್ದು, ಅಂತಹ ಸಮಸ್ಯೆಗಳಿಗೆ ಆದ್ಯತೆ ನೀಡುತ್ತಿದ್ದು, ಪಟ್ಟಣದ ಜನತೆಯೂ ತಮ್ಮ ಗಮನಕ್ಕೆ ಬಂದ ಸಮಸ್ಯೆಗಳ ಕುರಿತು ಪಟ್ಟಣ ಪಂಚಾಯಿತಿ ಗಮನಕ್ಕೆ ತರುವಂತೆ ತಿಳಿಸಿದರು.
ಪಪಂ ಸದಸ್ಯ ಹುಮಾಯೂನ ಮಾಗಡಿ ಮಾತನಾಡಿ, ಅನೇಕ ವಾರ್ಡ್ಗಳಲ್ಲಿ ರಸ್ತೆ, ಗಟಾರ್, ವಿದ್ಯುತ್, ಕುಡಿಯುವ ನೀರಿನ ಸಮಸ್ಯೆ ಇರುವ ಬಗ್ಗೆ ಗಮನಕ್ಕೆ ಬಂದಿದೆ. ಸರ್ಕಾರ ಗ್ರಾಮೀಣ ಪ್ರದೇಶಗಳ ಅಭಿವೃದ್ಧಿ ಕಾಮಗಾರಿಗಳಿಗೆ ಸಮರ್ಪಕ ಅನುದಾನವನ್ನು ಬಿಡುಗಡೆ ಮಾಡುತ್ತಿದೆ. ಹಾಗಿದ್ದರೂ ಕೆಲವರು ಅವೈಜ್ಞಾನಿಕ ಕಾಮಗಾರಿ ನಡೆಸಿ ವಂಚಿಸುತ್ತಿದ್ದಾರೆ ಎಂಬ ಆರೋಪ ಸಾರ್ವಜನಿಕರಿಂದ ಕೇಳಿಬರುತ್ತಿದ್ದು, ಗುಣಮಟ್ಟದ ಕಾಮಗಾರಿಗೆ ಎಲ್ಲರೂ ಸಹಕರಿಸುವಂತೆ ಕೋರಿದರು. ಪಪಂ ಸದಸ್ಯ ಜೆ.ಆರ್. ಕುಲಕರ್ಣಿ, ರಾಮಚಂದ್ರ ಗಡಾದ, ಶಫೀ ಹೆಸರೂರ, ವರವಿ, ಅಣ್ಣಿಗೇರಿ, ಪರಶುರಾಮ ಸರ್ಜಾಪುರ ಮುಂತಾದವರು ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

