ಸುದ್ದಿ ಸಂಕ್ಷೇಪ
ಇಂದು ವಾಲ್ಮೀಕಿ ಜಯಂತಿ
ನರಗುಂದ: ತಾಲೂಕು ಆಡಳಿತ, ಪುರಸಭೆ ಕಾರ್ಯಾಲಯ ಮತ್ತು ಸಮಾಜ ಕಲ್ಯಾಣ ಇಲಾಖೆ ಇವುಗಳ ಸಂಯುಕ್ತ ಆಶ್ರಯದಲ್ಲಿ ಅ. 18ರ ಬೆಳಗ್ಗೆ 11 ಗಂಟೆಗೆ ಪಟ್ಟಣದ ಹಳೇ ತಹಸೀಲ್ಧಾರ್ ಕಾರ್ಯಲಯದಲ್ಲಿ ವಾಲ್ಮೀಕಿ ಜಯಂತಿ ಜರುಗಲಿದೆ. ಶಾಸಕ ಬಿ.ಆರ್. ಯಾವಗಲ್, ಜಿಪಂ ಅಧ್ಯಕ್ಷ ಎಂ.ಎಸ್. ಪಾಟೀಲ, ಸಂಸದ ಪಿ.ಸಿ. ಗದ್ದಿಗೌಡರ, ವಿಪ ಸದಸ್ಯ ಬಸವರಾಜ ಹೊರಟ್ಟಿ, ನಾಗರಾಜ ಛಬ್ಬಿ, ಶ್ರೀನಿವಾಸ ಮಾನೆ, ತಾಪಂ ಅಧ್ಯಕ್ಷ ಗುರಪ್ಪ ಆದಪ್ಪನವರ, ಜಿಪಂ ಸದಸ್ಯ ಶಾಂತಾ ದಂಡಿನ, ತಾಪಂ ಉಪಾಧ್ಯಕ್ಷ ಗುರುದೇವಿ ಶ್ಯಾನವಾಡಮಠ, ಮಹರ್ಷಿ ವಾಲ್ಮೀಕಿ ಸಂಘದ ತಾಲೂಕು ಅಧ್ಯಕ್ಷ ಡಾ. ಎಲ್.ಎಚ್. ಕರಮಡಿ, ತಹಸೀಲ್ದಾರ್ ಬಿ.ಬಿ.ನೀಲಣ್ಣವರ, ಉಪತಹಸೀಲ್ದಾರ್ ಪಿ.ಎಂ. ದೊಡಮನಿ, ಉಪನ್ಯಾಸಕರಾಗಿ ಪಿ.ಬಿ. ಬಡಿಗೇರ, ತಾಪಂ, ಪುರಸಭೆ, ಎಪಿಎಂಸಿ, ಗ್ರಾಪಂ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು, ವಾಲ್ಮೀಕಿ ಸಮಾಜ ಬಾಂಧವರು ಭಾಗವಹಿಸುವರೆಂದು ಪ್ರಕಟಣೆ ತಿಳಿಸಿದೆ.
ನಾಳೆ ಸಾರ್ವಜನಿಕ ಕುಂದುಕೊರತೆ ಸಭೆ
ಗದಗ: ಸಾರ್ವಜನಿಕ ಕುಂದುಕೊರತೆಗಳ ವಿಷಯಕ್ಕೆ ಸಂಬಂಧಿಸಿದಂತೆ ಮುಖ್ಯವಾಗಿ ಸರ್ಕಾರದ ಆಹಾರ ಭದ್ರತೆ ಯೋಜನೆಯಡಿ ಸಾರ್ವಜನಿಕ ವಿತರಣಾ ಪದ್ಧತಿ, ಸಮಗ್ರ ಮಕ್ಕಳ ಅಭಿವೃದ್ಧಿ ಯೋಜನೆ ಹಾಗೂ ಮಧ್ಯಾಹ್ನದ ಬಿಸಿ ಊಟ ವಿಷಯಗಳ ಕುರಿತು ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಅ. 19ರ 3ನೇ ಶನಿವಾರದಂದು ಜಿಲ್ಲಾಧಿಕಾರಿಗಳ ಕಾರ್ಯಾಲಯದಲ್ಲಿ ಬೆಳಗ್ಗೆ 10.30 ಗಂಟೆಗೆ ಸಭೆ ಜರುಗಿಸಲಾಗುವುದು. ಜಿಲ್ಲೆಯ ಸಾರ್ವಜನಿಕರು ದೂರುಗಳು ಇದ್ದಲ್ಲಿ ಜಿಲ್ಲಾಧಿಕಾರಿಗಳಿಗೆ ಸಲ್ಲಿಸಬಹುದಾಗಿದೆ ಎಂದು ಗದಗ ಜಿಲ್ಲಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಇಂದು ವಾಲ್ಮೀಕಿ ಜಯಂತಿ
ಗದಗ: ಜಿಲ್ಲಾಆಡಳಿತ, ಜಿಪಂ, ಸಮಾಜ ಕಲ್ಯಾಣ ಇಲಾಖೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ನಗರಸಭೆ ಗದಗ-ಬೆಟಗೇರಿ ಹಾಗೂ ಗದಗ ಜಿಲ್ಲೆಯ ವಿವಿಧ ವಾಲ್ಮೀಕಿ ನಾಯಕ ಸಂಘಟನೆಗಳ ಸಂಯುಕ್ತ ಆಶ್ರಯದಲ್ಲಿ ಮಹರ್ಷಿ ವಾಲ್ಮೀಕಿ ಜಯಂತಿ ಆಚರಣೆಯನ್ನು ಅ. 18ರ ಬೆಳಗ್ಗೆ 11 ಗಂಟೆಗೆ ನಗರದ ನಗರಸಭೆ ಆವರಣದಲ್ಲಿ ಏರ್ಪಡಿಸಿದೆ. ಜಿಲ್ಲಾ ಉಸ್ತುವಾರಿ ಸಚಿವ ಎಚ್.ಕೆ. ಪಾಟೀಲ ಉದ್ಘಾಟಿಸುವರು. ಅತಿಥಿಗಳಾಗಿ ಸಂಸದರು, ಶಾಸಕರು, ಜಿಪಂ ಅಧ್ಯಕ್ಷ, ಉಪಾಧ್ಯಕ್ಷರು, ತಾಪಂ ಅಧ್ಯಕ್ಷ, ಉಪಾಧ್ಯಕ್ಷರು ಆಗಮಿಸುವರು. ಬದಾಮಿಯ ವೀರಪುಲಿಕೇಶಿ ಪಪೂ ಕಾಲೇಜಿನ ಡಾ. ಪಾರ್ವತಿ ಲಂಕೆಣ್ಣವರ ಅತಿಥಿ ಉಪನ್ಯಾಸಕರಾಗಿ ಆಗಮಿಸುವರು. ವಿಶೇಷ ಆಹ್ವಾನಿತರಾಗಿ ಮಾಜಿ ಶಾಸಕರು, ಕೆ.ಪಿ.ಸಿ.ಸಿ. ಪಪಂ ವಿಭಾಗದ ರಾಜ್ಯಾಧ್ಯಕ್ಷರು, ಗದಗ-ಬೆಟಗೇರಿ ನಗರಸಭೆಯ ಸದಸ್ಯರು ಆಗಮಿಸುವರು. ಇದೇ ಸಂದರ್ಭದಲ್ಲಿ ಕೆ.ಪಿ.ಟಿ.ಸಿ.ಎಲ್. ಅಭಿಯಂತರ ಡಾ. ಮನೋಜಕುಮಾರ ಪೂಜಾರ, ಹರ್ಷಕುಮಾರ ಚಿಕ್ಕನರಗುಂದ, ವನಶ್ರೀ ಹುಲ್ಲಣ್ಣವರ, ನಿವೃತ್ತ ಅಪರ ಜಿಲ್ಲಾಧಿಕಾರಿ ಬಿ.ಪಿ.ಆಡ್ನೂರ, ನಿವೃತ್ತ ಪ್ರಾಚಾರ್ಯ ಡಿ.ಕೆ. ಮಾದವನವರ ಅವರನ್ನು ಸನ್ಮಾನಿಸಲಾಗುವುದು ಎಂದು ಪ್ರಕಟಣೆ ತಿಳಿಸಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

