ರಾಮಾಯಣ ಗ್ರಂಥಕ್ಕೆ ಪೂಜನೀಯ ಸ್ಥಾನ
ನರೇಗಲ್ಲ: ಮಹಾಕವಿ, ಋಷಿ, ಆದಿಕವಿ ಎಂದು ಹಲವಾರು ಹೆಸರುಗಳಿಂದ ಕರೆಯಲ್ಪಡುವ ಮಹರ್ಷಿ ವಾಲ್ಮೀಕಿ ರಚಿಸಿದ ರಾಮಾಯಣವು ಒಂದು ಆದಿ ಕಾವ್ಯ. ಈ ಕಾವ್ಯ ನಮ್ಮ ದೇಶದ ಸಂಸ್ಕೃತಿಯ ಮೇಲೆ ಗಾಢ ಪ್ರಭಾವ ಬೀರಿದೆ ಎಂದು ಅನ್ನದಾನೇಶ್ವರ ಪದವಿ ಮಹಾವಿದ್ಯಾಲಯದ ಉಪಪ್ರಾಚಾರ್ಯ ಸಿ.ಜಿ. ಹುಡೇದಗಡ್ಡಿ ಹೇಳಿದರು.
ಅವರು ಸ್ಥಳೀಯ ಅನ್ನದಾನೇಶ್ವರ ಮಹಾವಿದ್ಯಾಲಯದಲ್ಲಿ ಶುಕ್ರವಾರ ಆಯೋಜಿಸಿದ್ದ ವಾಲ್ಮೀಕಿ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದರು. ಸಾವಿರಾರು ವರ್ಷಗಳಿಂದ ನಮ್ಮ ನಿತ್ಯ ಜೀವನದಲ್ಲಿ ಭಾಗವಾಗಿರುವ ರಾಮಾಯಣ ಇಂದಿಗೂ ಮಸುಕಾಗದೇ ನಮ್ಮ ಮಧ್ಯದಲ್ಲಿ ಬೆಳಗುತ್ತಿದೆ. ವಾಲ್ಮೀಕಿ ಅವರ ರಾಮಾಯಣ ಗ್ರಂಥವು ಇಂದಿಗೂ ಪೂಜನೀಯ ಸ್ಥಾನ ಹೊಂದುವ ಮೂಲಕ ಜನಮನದ ಧ್ವನಿಯಾಗಿ ಕಾರ್ಯನಿರ್ವಹಿಸುತ್ತಿರುವುದು ಶ್ಲಾಘನೀಯ ಎಂದರು. ಭೂಗೋಳ ಶಾಸ್ತ್ರದ ಮುಖ್ಯಸ್ಥ ಎಸ್.ಎಸ್. ಕಂಠಿ ಮಾತನಾಡಿದರು. ಪ್ರೊ. ಜಿ.ಜಿ. ಕೋಟಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಎಂ.ಎಸ್. ಕುಲಕರ್ಣಿ, ಎನ್.ಕೆ. ಬೇವಿನಕಟ್ಟಿ, ಕೆ.ಎಸ್. ಕಳಕೊಣ್ಣವರ, ಪ್ರಭು ವಕ್ಕಾರ ಹಾಗೂ ಕಾಲೇಜಿನ ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಪ್ರವೀಣ ಬಾಳೆಕಲ್ಲ ಸ್ವಾಗತಿಸಿದರು. ಮುತ್ತು ಬಳಗೋಡ ನಿರೂಪಿಸಿದರು. ಶರಣು ತಳವಾರ ವಂದಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

