ಗದಗ

ವಾಲ್ಮೀಕಿಯಿಂದ ಹಿಂದುಳಿದ ಸಮುದಾಯಕ್ಕೆ ಗೌರವ

Published On :

ಕನ್ನಡಪ್ರಭ ವಾರ್ತೆ, ಗಜೇಂದ್ರಗಡ, ಅ. 18
ಹಿಂದುಳಿದ ಸಮುದಾಯಗಳ ಗೌರವ ಹೆಚ್ಚಿಸಿದ ವಾಲ್ಮೀಕಿ ಮಹರ್ಷಿಗಳ ತತ್ವಾದರ್ಶದ ಜತೆಗೆ ಅವರ ಕೃತಿಗಳು ವಿಶ್ವಕ್ಕೆ ಮಾದರಿ ಎಂದು ಪುರಸಭೆ ಅಧ್ಯಕ್ಷೆ ಕವಿತಾ ಜಾಲಿಹಾಳ ಹೇಳಿದರು.
ಸ್ಥಳೀಯ ಪುರಸಭಾ ಭವನದಲ್ಲಿ ಶುಕ್ರವಾರ ನಡೆದ ವಾಲ್ಮೀಕಿ ಜಯಂತಿ ಪ್ರಯುಕ್ತ ವಾಲ್ಮೀಕಿ ಮಹರ್ಷಿಗಳ ಭಾವ ಚಿತ್ರಕ್ಕೆ ಪೂಜೆ ಸಲ್ಲಿಸಿ ಮಾತನಾಡಿದರು.
ಸಮಾಜದ ಕಟ್ಟಕಡೆಯ ಹಂತದಲ್ಲಿ ಜೀವಿಸುತ್ತಿದ ಬೇಡ ಜನಾಂಗ ಇಂದು ಸಮಾಜದ ಮುಖ್ಯವಾಹಿನಿಗೆ ಬರಲು ವಾಲ್ಮೀಕಿ ಮಹರ್ಷಿಗಳ ಕೊಡುಗೆ ಅಪಾರ. ಈ ಜನಾಂಗದ ಅಭಿವೃದ್ಧಿಗಾಗಿ ಸರ್ಕಾರ ಹಲವಾರು ಯೋಜನೆ ರೂಪಿಸಿದೆ. ಪುರಸಭೆ ಶೇಕಡಾ 22.75ರ ಮೀಸಲಾತಿ ಎಸ್.ಎಫ್.ಸಿ ಅನುದಾನವನ್ನು ಪಜಾ, ಪಪಂ ಜನಾಂಗದ ಅಭಿವೃದ್ಧಿಗಾಗಿ ಮೀಸಲಿಡುವ ಮೂಲಕ ಜನಾಂಗದ ಕಲ್ಯಾಣಕ್ಕೆ ಶ್ರಮಿಸಲಾಗುವುದು ಎಂದರು. ಮುಖ್ಯಾಧಿಕಾರಿ ಕೆ.ಐ. ನಾಗನೂರ ಮಾತನಾಡಿದರು. ಉಪಾಧ್ಯಕ್ಷೆ ಅಕ್ಕಮ್ಮ ಜಾನಾಯಿ, ಸ್ಥಾಯಿ ಸಮಿತಿ ಚೇರ್‌ಮನ್ ಅಶೋಕ ವನ್ನಾಲ, ವಿಪಕ್ಷ ನಾಯಕ ಶಿವರಾಜ ಘೋರ್ಫಡೆ, ಶರಣಪ್ಪ ರೇವಡಿ, ಎಂ.ಎಸ್. ಹಡಪದ, ರವಿ ಕಲಾಲ, ಮಂಜುನಾಥ ಬಡಿಗೇರ, ಷಣ್ಮುಕಪ್ಪ ಚಿಲಝರಿ, ಕಳಕಪ್ಪ ಗುಳೇದ, ಮಕ್ತುಂಬಿ ಹಣಗಿ, ಶಾರದಾ ರಾಠೋಡ, ಶಾರವ್ವ ತಳವಾರ, ಸ್ಥಳೀಯ ವಾಲ್ಮೀಕಿ ಸಮುದಾಯದ ಶರಣಪ್ಪ ಉಪ್ಪಿನಬೆಟಗೇರಿ, ಪ್ರಕಾಶ ತಳವಾರ, ಸಿ.ವಿ. ಕುಲಕರ್ಣಿ, ಎನ್.ಎಚ್. ಖುದಾನವರ, ಜಿ.ಎನ್. ಕಾಳೆ, ಪಿ.ಎನ್.ದೊಡ್ಡಮನಿ, ಮಹೇಶ ನಿಡಶೇಶಿ, ಎಂ.ಬಿ. ಒಂಟಿ ಮುಂತಾದವರು ಹಾಜರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.