ವೀರೇಶ್ವರ ಪುಣ್ಯಾಶ್ರಮದಲ್ಲಿ ನೇತ್ರ ತಪಾಸಣೆ: ಪ್ರಶಂಸೆ
ಗದಗ: ವೀರೇಶ್ವರ ಪುಣ್ಯಾಶ್ರಮದ ಅಂಧ ವಿದ್ಯಾರ್ಥಿಗಳ ನೇತ್ರ ತಪಾಸಣಾ ಶಿಬಿರ ನಡೆಸುವ ಮೂಲಕ ಸಾಧ್ಯತೆ ಇರುವವರಿಗೆ ದೃಷ್ಟಿ ಭಾಗ್ಯ ಕಲ್ಪಿಸುವ ನಿಟ್ಟಿನಲ್ಲಿ ಹುಬ್ಬಳ್ಳಿಯ ರೋಟರಿ ಸಂಸ್ಥೆ ಹಾಗೂ ಎಂ.ಎಂ. ಜೋಶಿ ನೇತ್ರ ವಿಜ್ಞಾನ ಸಂಸ್ಥೆ ಆಯೋಜಿಸಿರುವ ಕಾರ್ಯ ಮನುಷ್ಯತ್ವಕ್ಕೆ ಗೌರವ ತರುವ ಘನತೆವೆತ್ತ ಕಾರ್ಯಕ್ರಮವಾಗಿದೆ ಎಂದು ಜ. ತೋಂಟದ ಡಾ. ಸಿದ್ಧಲಿಂಗ ಶ್ರೀಗಳು ಹೇಳಿದರು.
ನಗರದ ವೀರೇಶ್ವರ ಪುಣ್ಯಾಶ್ರಮದಲ್ಲಿ ರೋಟರಿ ಕ್ಲಬ್ ಆಫ್ ಹುಬ್ಬಳ್ಳಿ ಹಾಗೂ ಎಂ.ಎಂ. ಜೋಶಿ ನೇತ್ರ ವಿಜ್ಞಾನ ಸಂಸ್ಥೆ ಹುಬ್ಬಳ್ಳಿ ಸಹಯೋಗದಲ್ಲಿ ಗುರುವಾರ ವೀರೇಶ್ವರ ಪುಣ್ಯಾಶ್ರಮದ ಅಂಧ ವಿದ್ಯಾರ್ಥಿಗಳ ನೇತ್ರ ತಪಾಸಣಾ ಶಿಬಿರದ ಸಮಾರೋಪ ಸಮಾರಂಭದ ಸಾನ್ನಿಧ್ಯ ವಹಿಸಿ ಅವರು ಆಶೀರ್ವಚನ ನೀಡಿದರು.
ಅಜ್ಞಾನ, ಮೌಢ್ಯ, ಮೂಢನಂಬಿಕೆ ಹಾಗೂ ಅಶಿಕ್ಷಣ ಫಲವಾಗಿ ಗ್ರಾಮೀಣ ಭಾಗದಲ್ಲಿ ಹಲವಾರು ಮಕ್ಕಳು ಅಂಧರಾಗಿ ಅಸಹನೀಯ ಬಾಳು ಕಳೆಯುವಂತಾಗಿದ್ದು, ಅಂತಹವರಿಗೆ ಜಾಗೃತಿ ನೀಡುವ ಹಾಗೂ ತಪಾಸಣೆಯ ಮೂಲಕ ಔಷಧೋಪಚಾರ, ಉಪಕರಣಗಳ ಅಳವಡಿಕೆ ಮತ್ತು ಶಸ್ತ್ರಚಿಕಿತ್ಸೆಯ ಮೂಲಕ ಸಾಧ್ಯವಿರುವ ಮಕ್ಕಳಿಗೆ ಮರು ದೃಷ್ಟಿ ನೀಡುವ ನಿಟ್ಟಿನಲ್ಲಿ ಶಿಬಿರಗಳನ್ನು ಆಯೋಜಿಸುತ್ತಿರುವ ಕಾರ್ಯ ಶ್ಲಾಘನೀಯ ಎಂದರು.
ಅತಿಥಿಯಾಗಿ ಪಾಲ್ಗೊಂಡಿದ್ದ ಹುಬ್ಬಳ್ಳಿಯ ಎಂ.ಎಂ. ಜೋಶಿ ನೇತ್ರ ವಿಜ್ಞಾನ ಸಂಸ್ಥೆಯ ನೇತ್ರತಜ್ಞ ಡಾ. ಎಂ.ಎಂ. ಜೋಶಿ ಮಾತನಾಡಿ, ಶಿಬಿರಗಳ ಮೂಲಕ ಅಂಧತ್ವ ನಿವಾರಿಸಲು ನಮ್ಮ ಸಂಸ್ಥೆಗೆ ಸಹಾಯ ಸಹಕಾರದ ಫಲವಾಗಿ ಅನೇಕರು ದೃಷ್ಟಿ ಪಡೆಯುತ್ತಿದ್ದಾರೆ. ವೀರೇಶ್ವರ ಪುಣ್ಯಾಶ್ರಮದಲ್ಲಿ 168 ವಿದ್ಯಾರ್ಥಿಗಳನ್ನು ತಪಾಸಣೆ ಮಾಡಲಾಗಿ 10 ಜನರಿಗೆ ಭಾಗಶಃ ದೃಷ್ಟಿ ಲಭಿಸುವ ಸಾಧ್ಯತೆಯಿದೆ ಎಂದರು.
ಅಧ್ಯಕ್ಷತೆ ವಹಿಸಿದ್ದ ಹುಬ್ಬಳ್ಳಿಯ ರೋಟರಿ ಕ್ಲಬ್ ಅಧ್ಯಕ್ಷ ಎಂ.ವಿ. ಕರಮರಿ, ನೇತ್ರತಜ್ಞ ಡಾ. ಆರ್. ಕೃಷ್ಣಪ್ರಸಾದ ಮಾತನಾಡಿದರು. ಕಾರ್ಯಕ್ರಮ ಸಂಯೋಜಕ ಡಾ. ಎನ್.ಎ. ಚರಂತಿಮಠ, ನಿರ್ದೇಶಕ ಎಸ್.ಜಿ. ಕಮ್ಮಾರ, ಪುಣ್ಯಾಶ್ರಮದ ವ್ಯವಸ್ಥಾಪಕ ಬಸವರಾಜ ಹಿಡ್ಕಿಮಠ ಉಪಸ್ಥಿತರಿದ್ದರು. ಸಂಗಮೇಶ ಪಾಟೀಲ ಪ್ರಾರ್ಥಿಸಿದರು. ಡಾ. ಎನ್.ಎ. ಚರಂತಿಮಠ ಸ್ವಾಗತಿಸಿದರು. ಅನಗಾ ಲಿಮಯೆ ನಿರೂಪಿಸಿದರು. ಹುಬ್ಬಳ್ಳಿ ರೋಟರಿ ಕ್ಲಬ್ ಕಾರ್ಯದರ್ಶಿ ಅಚ್ಯುತ ಲಿಮಯೆ ವಂದಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

