ಗದಗ

ಶಿರಹಟ್ಟಿಯಲ್ಲಿ ವಾಲ್ಮೀಕಿ ಜಯಂತಿ ಸಮಾರಂಭ

Published On :

ಕನ್ನಡಪ್ರಭ ವಾರ್ತೆ, ಶಿರಹಟ್ಟಿ, ಅ. 18
ಪರಿವರ್ತನೆ ಜಗದ ನಿಯಮ ಎಂಬಂತೆ ಶೋಷಿತ ವರ್ಗದಲ್ಲಿ ಜನಿಸಿ ಕಾಡಿನಲ್ಲಿ ನೆಲೆಸಿ ದರೋಡೆಯನ್ನು ತನ್ನ ಕಾಯಕಮಾಡಿಕೊಂಡಿದ್ದ ಮಹರ್ಷಿ ವಾಲ್ಮೀಕಿ ರಾಮಾಯಣ ಮಹಾಕಾವ್ಯವನ್ನು ಬರೆಯುವ ಮಟ್ಟಿಗೆ ಬದಲಾದ. ಹೀಗೆ ಬದಲಾವಣೆ ಮನುಷ್ಯನ ಸ್ಥಾನವನ್ನು ಎತ್ತರಕ್ಕೇರಿಸುತ್ತದೆ. ಅವರ ಅನುಯಾಯಿಗಳಾದ ನಾವುಗಳು ಅವರ ತತ್ವ, ಆದರ್ಶಗಳನ್ನು ಹಾಗೂ ಅವರ ವಿಚಾರಧಾರೆಗಳನ್ನು ದಿನ ನಿತ್ಯದ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಶಾಸಕ ರಾಮಕೃಷ್ಣ ದೊಡ್ಡಮನಿ ಹೇಳಿದರು.
ಅವರು ಕಂದಾಯ ಇಲಾಖೆ, ತಾಪಂ, ಸಮಾಜ ಕಲ್ಯಾಣ ಇಲಾಖೆ, ಪಪಂ ಹಾಗೂ ತಾಲೂಕು ಮಹರ್ಷಿ ವಾಲ್ಮೀಕಿ ಸಂಘ ಸಂಯುಕ್ತವಾಗಿ ಶುಕ್ರವಾರ ಪಟ್ಟಣದ ವಾಲ್ಮೀಕಿ ವೃತ್ತದ ಆವರಣದಲ್ಲಿ ಹಮ್ಮಿಕೊಳ್ಳಲಾಗಿದ್ದ ವಾಲ್ಮೀಕಿ ಜಯಂತಿ ಸಮಾರಂಭ ಉದ್ಘಾಟಿಸಿ ಮಾತನಾಡಿದರು.
ಅಕ್ಷರ ದಾಸೋಹದ ಸಹಾಯಕ ನಿರ್ದೇಶಕ ಕೆ.ಎ. ಬಳಿಗೇರ ಉಪನ್ಯಾಸ ನೀಡಿ, ಹಿಂದೂ ಧರ್ಮಕ್ಕೆ ಪವಿತ್ರ ರಾಮಾಯಣವನ್ನು ಕೊಡುಗೆಯಾಗಿ ನೀಡಿದ ಮಹಾತಪಸ್ವಿ ಮಹರ್ಷಿ ವಾಲ್ಮೀಕಿ ಆದರ್ಶ ವಿಚಾರಗಳು ಸ್ಮರಣೀಯವಾಗಿವೆ ಎಂದರು.
ಎಂ.ಬಿ. ಕಗ್ಗಲಗೌಡ್ರ ಪ್ರಾಸ್ತಾವಿಕ ಮಾತನಾಡಿದರು. ಎಫ್.ಎಸ್. ಬೆಳವಗಿ ಉಪನ್ಯಾಸ ನೀಡಿದರು. ತಾಪಂ ಅಧ್ಯಕ್ಷೆ ಸುನಂದಾ ಬಿದರಳ್ಳಿ, ಪಪಂ ಅಧ್ಯಕ್ಷ ನಾಗರಾಜ ಲಕ್ಕುಂಡಿ, ತಾಪಂ ಉಪಾಧ್ಯಕ್ಷೆ ಶಾರದಾ ಕವಲೂರ, ಪಪಂ ಉಪಾಧ್ಯಕ್ಷೆ ಮೀನಾಕ್ಷಿ ತಳವಾರ, ಸದಸ್ಯ ಗೂಳಪ್ಪ ಕರಿಗಾರ, ಸಂತೋಷ ಕುರಿ, ಬುಡನಶ್ಯಾ ಮಕಾನದಾರ, ದೇವಪ್ಪ ತಳವಾರ, ಉಡಚಪ್ಪ ತಳವಾರ, ಸಣ್ಣವೀರಪ್ಪ ಹಳ್ಳೆಪ್ಪನವರ, ವೈ.ಎಸ್. ಪಾಟೀಲ, ರಾಮಣ್ಣ ಡಂಬಳ, ವಿ.ವಿ. ಕಪ್ಪತ್ತನವರ, ಆರ್.ಡಿ. ಕೆಂಚಕ್ಕನವರ, ಬಸಣ್ಣ ನಾಯ್ಕರ ಪಾಲ್ಗೊಂಡಿದ್ದರು. ತಾಲೂಕು ವಾಲ್ಮೀಕಿ ಸಮಾಜದ ಅಧ್ಯಕ್ಷ ಶಿವನಗೌಡ ಪಾಟೀಲ ಸ್ವಾಗತಿಸಿದರು. ಎಸ್.ಯು. ಬಟ್ಟೂರ ನಿರೂಪಿಸಿದರು. ಕೆ.ಓ. ಹುಲಿಕಟ್ಟಿ ವಂದಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.