ಗದಗ

ವಾಲ್ಮೀಕಿ ಸಂದೇಶ ಪಾಲಿಸಿ: ಪಾಟೀಲ್

Published On :

ರೋಣ: ದೇಶದ ಮಹಾನ್ ಗ್ರಂಥಗಳಲ್ಲಿ ರಾಮಾಯಣವು ಅತ್ಯಂತ ಶ್ರೇಷ್ಠ ಗ್ರಂಥವಾಗಿದ್ದು, ರಾಮಾಯಣ ರಚಿಸಿದ ವಾಲ್ಮೀಕಿ ಮಹರ್ಷಿಗಳ ತತ್ವ, ಸಂದೇಶ ಸತ್ವಯುತವಾಗಿವೆ. ಅವುಗಳನ್ನು ಪ್ರತಿಯೊಬ್ಬರೂ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಶಾಸಕ ಜಿ.ಎಸ್. ಪಾಟೀಲ ಹೇಳಿದರು.  ಅವರು ಪಟ್ಟಣದ ಹಳೇ ತಹಸೀಲ್ದಾರ್ ಕಚೇರಿ ಆವರಣದಲ್ಲಿ ಶುಕ್ರವಾರ ತಾಲೂಕು ಆಡಳಿತ, ತಾಪಂ, ಪುರಸಭೆ ಮತ್ತು ವಾಲ್ಮೀಕಿ ಸಮುದಾಯದ ಆಶ್ರಯದಲ್ಲಿ ಜರುಗಿದ ಮಹರ್ಷಿ ವಾಲ್ಮೀಕಿ ಜಯಂತ್ಯುತ್ಸವ ಉದ್ಘಾಟಿಸಿ ಮಾತನಾಡಿದರು. ಸ್ಪರ್ಧಾತ್ಮಕ ಯುಗದಲ್ಲಿ ಪ್ರತಿಯೊಂದು ಸಮುದಾಯಗಳು ಅಭಿವೃದ್ಧಿ ಪಥದಲ್ಲಿ ಸಾಗಲು ಬಯಸುತ್ತವೆ. ಈ ಹಿನ್ನೆಲೆಯಲ್ಲಿ ಸಮುದಾಯದ ಬಂಧುಗಳು ಮಕ್ಕಳಿಗೆ ಉತ್ತಮ ಶಿಕ್ಷಣ ಒದಗಿಸುವತ್ತ ಚಿಂತಿಸಬೇಕು. ನಾಡಿನಲ್ಲಿ ಸೌಹಾರ್ದತೆಯನ್ನು ಬಿತ್ತಿದ ಯಾವುದೇ ಧರ್ಮಗಳ ಮಹಾನ್ ಪುರುಷರ ಜನ್ಮ ದಿನಾಚರಣೆಗಳು, ಒಂದೇ ಸಮುದಾಯಕ್ಕೆ ಸೀಮಿತವಾಗದೇ ಪ್ರತಿ ಸಮುದಾಯಕ್ಕೂ ಅನ್ವಯಿಸಬೇಕು. ಅಂದಾಗ ಜನರಲ್ಲಿ ಸೌಹಾರ್ದತೆ ಬೆಳೆಯಲು ಸಹಕಾರಿಯಾಗುತ್ತದೆ ಎಂದರು. ಬಸವಂತಪ್ಪ ತಳವಾರ, ಪುರಸಭೆ ಅಧ್ಯಕ್ಷ ಮುತ್ತಣ್ಣ ಸಂಗಳದ, ವೈ.ಬಿ.ಚೋಳಣ್ಣವರ, ಎಂ.ಸಿ. ಹುಲ್ಲಣ್ಣವರ ಮಾತನಾಡಿದರು. ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಪಡೆದ ವಾಲ್ಮೀಕಿ ಸಮುದಾಯದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು. ತಾಪಂ ಸದಸ್ಯೆ ರೇಣುಕಾ ಹಟ್ಟಿಮನಿ, ಪುರಸಭೆ ಉಪಾಧ್ಯಕ್ಷೆ ಲಕ್ಷ್ಮೀ ಗಡಗಿ, ಎನ್.ಎಸ್. ಕೂಡಲ್, ಎಸ್.ಎ. ಸೂಡಿಶೆಟ್ಟರ, ಜಿಪಂ ಎಇಇ ಕೆ.ಎಲ್. ಕಟ್ಟಿಮನಿ, ಕುಮಾರ ಗೌಡಣ್ಣವರ, ಪಿ.ಎಚ್. ಕಡಿವಾಲ, ಲಕ್ಷ್ಮಣ ಗೌಡಣ್ಣವರ, ಖಾದೀರಸಾಬ್ ಸಂಕನೂರ, ಮಂಜುನಾಥ ಹಾಳಕೇರಿ, ಬಸವರಾಜ ನಾಯಕ ಮುಂತಾದವರು ಉಪಸ್ಥಿತರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.