ಗದಗ

ವಾಹನ ಕಳ್ಳನ ಬಂಧನ: 14 ಬೈಕ್ ವಶ

Published On :

ರೋಣ:  ಗದಗ ಜಿಲ್ಲೆ ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ದ್ವಿ-ಚಕ್ರ ವಾಹನಗಳ ಕಳ್ಳತನ ಮಾಡುತ್ತಿದ್ದ ಕಳ್ಳನನ್ನು ಬಂಧಿಸುವಲ್ಲಿ ರೋಣ ಪೊಲೀಸರು ಯಶಸ್ವಿಯಾಗಿದ್ದಾರೆ.
ಬಸವರಾಜ ಗಂಗಲ (33) ಬಂಧಿತ ವ್ಯಕ್ತಿಯಾಗಿದ್ದು, ಈತನಿಂದ ರು. 3 ಲಕ್ಷ ಮೌಲ್ಯದ ಒಟ್ಟು 14 ದ್ವಿ-ಚಕ್ರ ವಾಹನಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಎಸ್ಪಿ ಡಾ. ಶರಣಪ್ಪ ಎಸ್.ಡಿ. ಹೇಳಿದರು. ಅವರು ಶನಿವಾರ ಸಂಜೆ ಠಾಣೆಯ ಆವರಣದಲ್ಲಿ ಸುದ್ಗಿಗೋಷ್ಠಿಯಲ್ಲಿ ಮಾತನಾಡಿದರು. ಬಂಧಿತ ಆರೋಪಿ ಬದಾಮಿ ತಾಲೂಕಿನ ಯಂಕಂಚಿಮಣಿನಾಗರ ಗ್ರಾಮದವನಾಗಿದ್ದು, ನಾಲ್ಕೈದು ವರ್ಷಗಳಿಂದ ಬೈಕ್ ಕಳ್ಳತನ ಮಾಡುತ್ತಿದ್ದ ಎನ್ನಲಾಗಿದ್ದು, ಆರೋಪಿಯು ಕಳ್ಳತನ ಮಾಡಿದ್ದ ಬೈಕ್‌ಗಳನ್ನು ರೋಣ ತಾಲೂಕಿನ ಬೆಳವಣಿಕೆ ಗ್ರಾಮದಲ್ಲಿ ಮಾರಾಟ ಮಾಡುತ್ತಿದ್ದ ಸಂದರ್ಭದಲ್ಲಿ ರೋಣ ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದಾನೆ. ಕಳ್ಳನನ್ನು ಬಂಧಿಸುವಲ್ಲಿ ಶ್ರಮಿಸಿದ ಸಿಪಿಐ ವೆಂಕಟಪ್ಪನಾಯಕ, ಪಿಎಸ್‌ಐ ಡಿ.ಬಿ. ಪಾಟೀಲ ಹಾಗೂ 15 ಜನ ಸಿಬ್ಬಂದಿಗೆ ರು. 10 ಸಾವಿರ ನಗದು ಬಹುಮಾನ ಘೋಷಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.