ರಾಮಾಯಣ ಮೌಲ್ಯ ಸಾರ್ವಕಾಲಿಕ
ಮುಂಡರಗಿ: ರಾಮಾಯಣದ ತತ್ವಾದರ್ಶ, ಮೌಲ್ಯಗಳು ಸಾರ್ವಕಾಲಿಕ ಎಂದು ಶಿರಹಟ್ಟಿ ಶಾಸಕ ರಾಮಕೃಷ್ಣ ದೊಡ್ಡಮನಿ ಹೇಳಿದರು.
ಶುಕ್ರವಾರ ಪಟ್ಟಣದ ಪುರಸಭೆ ಪಕ್ಕದ ಪೊಲೀಸ್ ಪರೇಡ್ ಮೈದಾನದಲ್ಲಿ ತಾಲೂಕಾಡಳಿತ, ವಿವಿಧ ಸಮುದಾಯಗಳ ಸಂಘಟನೆಗಳು, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಗದಗ ಆಶ್ರಯದಲ್ಲಿ ಆಯೋಜಿಸಿದ್ದ ಮಹರ್ಷಿ ವಾಲ್ಮೀಕಿ ಜಯಂತಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ರಾಜ್ಯ ಸರ್ಕಾರ ವಾಲ್ಮೀಕಿ ಜನಾಂಗಕ್ಕಾಗಿ ಎಲ್ಲ ಸೌಲಭ್ಯಗಳನ್ನು ಒದಗಿಸಿದ್ದು, ಬರುವ ದಿನಗಳಲ್ಲಿ ಸರ್ಕಾರದ ಎಲ್ಲ ಸೌಲಭ್ಯಗಳನ್ನು ಮುಟ್ಟಿಸುವುದಾಗಿ ತಿಳಿಸಿದರು.
ಜಿಪಂ ಸದಸ್ಯ ಹೇಮಗಿರೀಶ ಹಾವಿನಾಳ ಕಾರ್ಯಕ್ರಮ ಉದ್ಘಾಟಿಸಿದರು. ಪ್ರೊ. ಆರ್.ಎಲ್. ಪೊಲೀಸ್ ಪಾಟೀಲ, ಜಯಲಕ್ಷ್ಮಿ ತಿಮ್ಮಾಪುರ, ಬಿ.ಎಂ. ತಿಮ್ಮಾಪುರ, ತಾರೂಬಾಯಿ ಚಹ್ವಾನ್, ಅಕ್ಕಮಹಾದೇವಿ ಹಾರೋಗೇರಿ, ಹೇಮಾವತಿ ನಾಯಕ, ಮುದಿಯಪ್ಪ ಕುಂಬಾರ, ಭಾರತಿ ಹಕ್ಕಿ, ರಾಮಣ್ಣ ಮಲ್ಲಾಪುರ, ಧ್ರುವಕುಮಾರ ಹೊಸಮನಿ, ಸುರೇಶ ಮಾಗಡಿ, ಸುರೇಶ ನಾಯಕ, ಪ್ರಕಾಶ ದೊಡ್ಡಮನಿ, ಶೇಖರಾಜ ಹೊಸಮನಿ, ಎಂ.ಡಿ. ಭಾವಿಮನಿ, ತಹಸೀಲ್ದಾರ್ ಎಸ್.ಆರ್. ಶಿರಕೋಳ, ಬಿ.ಆರ್. ಶಿವಶಂಕರಗೌಡ, ಡಿ. ಮೋಹನ್, ಎ.ಪಿ. ದಂಡಿನ, ಆರ್.ಬಿ. ತಿಮ್ಮಾಪುರ, ಎಂ.ಎ. ರಡ್ಡೇರ, ಅಧಿಕಾರಿಗಳು ಇದ್ದರು.
ವಾಲ್ಮೀಕಿ ಭಾವಚಿತ್ರ ಮೆರವಣಿಗೆ
ವಾಲ್ಮೀಕಿ ಜಯಂತಿ ನಿಮಿತ್ತ ಪಟ್ಟಣದ ಕೋಟೆ ಭಾಗದಲ್ಲಿರುವ ಹನುಮಂತ ದೇವರ ದೇವಸ್ಥಾನದಿಂದ ಮಹರ್ಷಿ ವಾಲ್ಮೀಕಿ ಭಾವಚಿತ್ರದ ಮೆರವಣಿಗೆ ಜರುಗಿತು. ತಹಸೀಲ್ದಾರ್ ಎಸ್.ಆರ್. ಶಿರಕೋಳ ಮೆರವಣಿಗೆಗೆ ಚಾಲನೆ ನೀಡಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

