ಸುದ್ದಿ ಸಂಕ್ಷೇಪ
22ರಂದು ಕೃತಿ ಲೋಕಾರ್ಪಣೆ
ಮುಂಡರಗಿ: ಚಿಲಿಪಿಲಿ-ಗುಬ್ಬಚ್ಚಿ ಗೂಡು ಬಳಗ ಧಾರವಾಡ, ಭಾರತ ಜ್ಞಾನ ವಿಜ್ಞಾನ ಸಮಿತಿ ಕರ್ನಾಟಕ ಬೆಂಗಳೂರು ಇವರ ಸಂಯುಕ್ತ ಸಂಘಟನೆಯಲ್ಲಿ ಮುಂಡರಗಿ ಸಾಹಿತಿ ಡಾ. ನಿಂಗು ಸೊಲಗಿಯವರ ಸಂಶೋಧನ ಕೃತಿ ಮಕ್ಕಳ ರಂಗಭೂಮಿ ಪ್ರದರ್ಶನ-ಪ್ರಕ್ರಿಯೆ ಲೋಕಾರ್ಪಣೆ ಹಾಗೂ ಶಾಲಾ ಅಂಗಳದಲ್ಲಿ ಮಕ್ಕಳ ರಂಗಭೂಮಿ ಸಂವಾದ ಗೋಷ್ಠಿ ಕಾರ್ಯಕ್ರಮವು ಅ. 22ರಂದು ಬೆಳಗ್ಗೆ 10.30 ಗಂಟೆಗೆ ಬೆಂಗಳೂರಿನ ನಯನ ಸಭಾಂಗಣದಲ್ಲಿ ಜರುಗಲಿದೆ. ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪುರಸ್ಕೃತ ಹಿರಿಯ ಸಾಹಿತಿ ಎಚ್.ಎಸ್. ವೆಂಕಟೇಶಮೂರ್ತಿ ಕೃತಿ ಲೋಕಾರ್ಪಣೆ ಮಾಡಲಿದ್ದಾರೆ. ಹೊಸತು ಪತ್ರಿಕೆಯ ಸಂಪಾದಕ ಡಾ. ಸಿದ್ದನಗೌಡ ಪಾಟೀಲ ಅಧ್ಯಕ್ಷತೆ ವಹಿಸಲಿದ್ದಾರೆ. ಚಲನಚಿತ್ರ ನಟ-ನಿರ್ದೇಶಕ ಬಿ. ಸುರೇಶ ಅತಿಥಿಯಾಗಿ ಪಾಲ್ಗೊಳ್ಳಲಿದ್ದಾರೆ. ಲೇಖಕ-ರಂಗನಿರ್ದೇಶಕ ಶಶಿಕಾಂತ ಯಡಹಳ್ಳಿ ಕೃತಿ ಪರಿಚಯ ಮಾಡಲಿದ್ದಾರೆ. ಮಧ್ಯಾಹ್ನ 2 ಗಂಟೆಗೆ ಶಾಲಾ ಅಂಗಳದಲ್ಲಿ ಮಕ್ಕಳ ರಂಗಭೂಮಿ ಸಂವಾದ ಗೋಷ್ಠಿ ಜರುಗಲಿದ್ದು, ಮೈಸೂರಿನ ರಂಗನಿರ್ದೇಶಕ ನಾ. ಶ್ರೀನಿವಾಸ ವಿಷಯ ಮಂಡಣೆ ಮಾಡಲಿದ್ದಾರೆ. ಪುತ್ತೂರಿನ ರಂಗ ನಿರ್ದೇಶಕ ಐ.ಕೆ. ಬೋಳುವಾರು ಅಧ್ಯಕ್ಷತೆ ವಹಿಸಲಿದ್ದಾರೆ. ಸಾಹಿತ್ಯಾಸಕ್ತರು ಪಾಲ್ಗೊಳ್ಳಬೇಕೆಂದು ಚಿಲಿಪಿಲಿ ಗುಬ್ಬಚ್ಚಿಗೂಡು ಬಳಗದ ಶಂಕರ ಹಲಗತ್ತಿ ಹಾಗೂ ಭಾರತ ಜ್ಞಾನ ವಿಜ್ಞಾನ ಸಮಿತಿಯ ಕಾರ್ಯದರ್ಶಿ ಎಸ್. ವಜ್ರಮುನಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಇಂದು ವೀರಗಂಗಾಧರ ಶ್ರೀಗಳ ಪುಣ್ಯಾರಾಧನೆ
ಲಕ್ಷ್ಮೇಶ್ವರ: ಸಮೀಪದ ಮುಕ್ತಿಮಂದಿರ ಧರ್ಮ ಕ್ಷೇತ್ರದದಲ್ಲಿ ಲಿಂಗೈಕ್ಯ ರಂಭಾಪುರಿ ಜಗದ್ಗುರು ವೀರಗಂಗಾಧರ ಶ್ರೀಗಳ 31ನೇ ಪುಣ್ಯಾರಾಧನೆಯು ಕ್ಷೇತ್ರ ಮುಕ್ತಿಮಂದಿರದಲ್ಲಿ ಅ. 20ರಂದು ವಿವಿಧ ಧಾರ್ಮಿಕ ಕಾರ್ಯಗಳೊಂದಿಗೆ ಆರಂಭಗೊಂಡು ಮಧ್ಯಾಹ್ನ 3 ಗಂಟೆಗೆ ಧರ್ಮಸಭೆ ಜರುಗಲಿದೆ. ಧರ್ಮಸಭೆಯ ಸಾನ್ನಿಧ್ಯವನ್ನು ಬಾಳೇಹೊನ್ನೂರಿನ ರಂಭಾಪುರಿ ಪೀಠದ ಪ್ರಸನ್ನರೇಣುಕ ವೀರ ಸೋಮೇಶ್ವರ ಶ್ರೀ ವಹಿಸುವರು. ಶ್ರೀಮಠದ ಪಟ್ಟಾಧ್ಯಕ್ಷ ವಿಮಲ ರೇಣುಕ ವೀರ ಮುಕ್ತಿಮುನಿ ಶಿವಾಚಾರ್ಯರು ಹಾಗೂ ಕಲಾದಗಿಯ ಪಂಚಗ್ರಹ ಹಿರೇಮಠದ ಚಂದ್ರಶೇಖರ ಶಿವಾಚಾರ್ಯರು ಉಪಸ್ಥಿತರಿರುವರು. ತ್ರಿಕೋಟಿ ಶಿವಲಿಂಗ ಸ್ಥಾಪನೆಯ ವಿಶೇಷ ಸೇವೆ ಸಲ್ಲಿಸುತ್ತಿರುವ ಬೆಂಗಳೂರಿನ ಖ್ಯಾತ ಉದ್ಯಮಿ ಹರೀಸಾ ಎಲ್. ಖೋಡೆ, ಹಾವೇರಿ ಸಂಸದ ಶಿವಕುಮಾರ ಉದಾಸಿ, ಸಚಿವ ಎಚ್.ಕೆ. ಪಾಟೀಲ, ವಿಪ ಸದಸ್ಯ ಶ್ರೀನಿವಾಸ್ ಮಾನೆ, ಮಾಜಿ ಸಚಿವ ವಿಜಯಶಂಕರ, ಶಾಸಕ ರಾಮಕೃಷ್ಣ ದೊಡ್ಡಮನಿ, ಎಚ್.ಎಸ್. ಶಿವಶಂಕರ, ಸಿ.ಎಸ್. ಶಿವಳ್ಳಿ, ಮಾಜಿ ಶಾಸಕ ಜಿ.ಎಂ. ಮಹಾಂತಶೆಟ್ಟರ, ಜಿ.ಎಸ್. ಗಡ್ಡದೇವರಮಠ, ರಾಮಣ್ಣ ಲಮಾಣಿ, ಧಾರವಾಡ ಜಿಪಂ ಅಧ್ಯಕ್ಷ ಶಂಕ್ರಣ್ಣ ಅಂಗಡಿ, ಲಕ್ಷ್ಮೇಶ್ವರ ಎಪಿಎಂಸಿ ಅಧ್ಯಕ್ಷ ಕುಬೇರಪ್ಪ ಮಹಾಂತಶೆಟ್ಟರ, ಪುರಸಭೆ ಅಧ್ಯಕ್ಷೆ ಗಂಗಮ್ಮ ಫಕ್ಕೀರಸ್ವಾಮಿಮಠ, ಗದಗ ಜಿಪಂ ಅಧ್ಯಕ್ಷ ಎಂ.ಎಸ್. ಪಾಟೀಲ, ಧಾರವಾಡ ಜಿಪಂ ಸದಸ್ಯ ವೆಂಕನಗೌಡ ಹಿರೇಗೌಡರ, ಬಳ್ಳಾರಿಯ ಎಂಜಿನಿಯರ್ ಎ.ಎಂ. ಸೋಮಶೇಖರಯ್ಯ ಆಗಮಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

