ಗದಗ

ಕ್ರೀಡೆಯಿಂದ ರೋಗ ನಿವಾರಕ ಶಕ್ತಿ: ಸಂಗಳದ

Published On :

ರೋಣ: ದೈಹಿಕ ಮತ್ತು ಮಾನಸಿಕ ವೃದ್ಧಿಗೆ ಕ್ರೀಡೆ ಅತ್ಯಂತ ಸಹಕಾರಿಯಾಗಿದ್ದು, ಕ್ರೀಡೆಯಲ್ಲಿ ರೋಗ ನಿವಾರಕ ಶಕ್ತಿಯಿದೆ. ಆದ್ದರಿಂದ ಪ್ರತಿಯೊಬ್ಬರೂ ಒಂದಿಲ್ಲೊಂದು ಕ್ರೀಡಾ ಚಟುವಟಿಕೆಯಲ್ಲಿ ಭಾಗವಹಿಸಬೇಕು ಎಂದು ಪುರಸಭೆ ಅಧ್ಯಕ್ಷ ಮುತ್ತಣ್ಣ ಸಂಗಳದ ಹೇಳಿದರು.
ಪಟ್ಟಣದ ಗ್ರೀನ್‌ವುಡ್ ಇಂಟರ್‌ನ್ಯಾಶನಲ್ ಪ್ರಾಥಮಿಕ ಶಾಲೆ ಮೈದಾನದಲ್ಲಿ ಫ್ರೆಂಡ್ಸ್ ಕ್ಲಬ್ ಆಶ್ರಯದಲ್ಲಿ ಜರುಗಿದ ರಾಜ್ಯ ಮಟ್ಟದ ವಾಲಿಬಾಲ್ ಪಂದ್ಯಾವಳಿ ಉದ್ಘಾಟಿಸಿ ಮಾತನಾಡಿದರು.
ಇತ್ತೀಚಿನ ದಿನಗಳಲ್ಲಿ ಕಬಡ್ಡಿ, ಕುಸ್ತಿ, ಕೋಕೋ ಸೇರಿದಂತೆ ಮುಂತಾದ ಗ್ರಾಮೀಣ ಕ್ರೀಡೆಗಳು ಅವನತಿ ಹೊಂದುತ್ತಿರುವುದು ವಿಷಾದನೀಯ. ಆದ್ದರಿಂದ ಕ್ರಿಕೆಟ್‌ನಂತೆ ಇತರ ಕ್ರೀಡೆಗಳನ್ನೂ ಪ್ರೋತ್ಸಾಹಿಸಬೇಕು ಎಂದರು. ಪುರಸಭೆ ಸದಸ್ಯ ಅಜ್ಜಪ್ಪ ರಡ್ಡೇರ ಮಾತನಾಡಿ, ಕ್ರೀಡೆಗಳಿಂದ ಶಾರೀರಿಕ, ಮಾನಸಿಕವಾಗಿ ಸದೃಢರಾಗುತ್ತಾರೆ. ಉತ್ತಮ ಆರೋಗ್ಯ ಹೊಂದಲು ಉತ್ತಮ ಆಹಾರ ಎಷ್ಟು ಮುಖ್ಯವೋ ಅಷ್ಟೇ ಕ್ರೀಡೆಗಳು ಮುಖ್ಯ ಎಂದರು. ಮಹಾದೇವಪ್ಪ ಲಿಂಗನಗೌಡ್ರ, ಅವಿನಾಶ ಸಾಲಿಮನಿ, ಜಗ್ಗು ಅಳ್ಳೊಳ್ಳಿ, ವಿನಯ ಸಂಗಳದ, ಗಿರೀಶ ಸಂಗಳದ, ಈರಣ್ಣ ಮುರನಾಳ, ಜಗದೀಶ ಭಜಂತ್ರಿ, ಶಶಿಧರ ಕಿರೇಸೂರ, ಅಭಿ ನವಲಗುಂದ, ಸಚಿನ್ ಹಿರೇಮನಿ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.