ಕ್ಷೌರಿಕರ ಹಿತಕಾಯಲು ಬದ್ಧ: ಕೃಷ್ಣ
ಗದಗ: ಸಮಾಜದಲ್ಲಿನ ಬಡವರು ಹಾಗೂ ಕೆಳಸ್ತರದಲ್ಲಿರುವ ನೊಂದ ಕ್ಷೌರಿಕ ಬಂಧುಗಳ ಹಿತಕಾಯಲು ಕ್ಷೌರಿಕ ಹಿತರಕ್ಷಣಾ ವೇದಿಕೆ ನಿರಂತರ ಹೋರಾಟ ಮಾಡಲಿದೆ ಎಂದು ಗದಗ ಜಿಲ್ಲಾ ಕ್ಷೌರಿಕ ಹಿತರಕ್ಷಣಾ ವೇದಿಕೆಯ ಜಿಲ್ಲಾಧ್ಯಕ್ಷ ಹಾಗೂ ವೇದಿಕೆಯ ರಾಜ್ಯ ಜಂಟಿ ಕಾರ್ಯದರ್ಶಿ ಕೃಷ್ಣ ಹಡಪದ ಹೇಳಿದರು.
ಅವರು ಈಚೆಗೆ ನಗರದ ಸಂಘದ ಕಾರ್ಯಾಲಯದಲ್ಲಿ ನಡೆದ ಸಭೆಯಲ್ಲಿ ಶಂಕರ ಮಾನೆ ಅವರನ್ನು ಗದಗ ಜಿಲ್ಲಾ ಕ್ಷೌರಿಕ ಹಿತರಕ್ಷಣಾ ವೇದಿಕೆಯ ಜಿಲ್ಲಾ ಕಾರ್ಯಾಧ್ಯಕ್ಷರನ್ನಾಗಿ ನೇಮಕಗೊಳಿಸಿ ಮಾತನಾಡಿದರು.
ಸರ್ಕಾರದ ಸೌಲಭ್ಯಗಳಿಂದ ವಂಚಿತರಾದ ಅರ್ಹ ಕ್ಷೌರಿಕ ಬಂಧುಗಳಿಗೆ ಶಕ್ತಿ ಮೀರಿ ನ್ಯಾಯ ಕೊಡಿಸುವ ನಿಟ್ಟಿನಲ್ಲಿ ಕ್ಷೌರಿಕ ಹಿತರಕ್ಷಣಾ ವೇದಿಕೆ ಸುಮಾರು ವರ್ಷಗಳಿಂದಲೂ ಹೋರಾಟ ಮಾಡುತ್ತಾ ಬಂದಿದೆ. ಮುಂಬರುವ ದಿನಗಳಲ್ಲಿ ಗ್ರಾಮಮಟ್ಟದಿಂದ ಜಿಲ್ಲಾ ಹಾಗೂ ರಾಜ್ಯದ ಕ್ಷೌರಿಕ ಬಂಧುಗಳಿಗೆ ಸಿಗಬೇಕಾದ ಸರ್ಕಾರದ ಹಕ್ಕುಗಳಿಗಾಗಿ ಹಾಗೂ ಅಭಿವೃದ್ಧಿಗಾಗಿ ಜತೆಗೆ ಸಮಸ್ತ ಕ್ಷೌರಿಕ ಬಂಧುಗಳ ಸಮಸ್ಯೆ ಪರಿಹಾರಕ್ಕಾಗಿ ನಿರಂತರವಾಗಿ ವೇದಿಕೆಯಿಂದ ಹೋರಾಟ ನಡೆಯಲಿದೆ ಎಂದರು.
ಗದಗ ಜಿಲ್ಲಾ ಕ್ಷೌರಿಕ ಹಿತರಕ್ಷಣಾ ವೇದಿಕೆಯ ನೂತನ ಜಿಲ್ಲಾ ಕಾರ್ಯಾಧ್ಯಕ್ಷರಾಗಿ ಆಯ್ಕೆಗೊಂಡ ಶಂಕರ ಮಾನೆ ಸನ್ಮಾನ ಸ್ವೀಕರಿಸಿ ಮಾತನಾಡಿ, ತಮ್ಮ ಅಧಿಕಾರಾವಧಿಯಲ್ಲಿ ಗದಗ ಜಿಲ್ಲಾ ಕ್ಷೌರಿಕ ಹಿತರಕ್ಷಣಾ ವೇದಿಕೆಯ ಅಭಿವೃದ್ಧಿಗೆ ಹಿರಿಯರ ಮಾರ್ಗದರ್ಶನದ ಮೇರೆಗೆ ಪ್ರಾಮಾಣಿಕ ಪ್ರಯತ್ನ ಮಾಡುವುದಾಗಿ ತಿಳಿಸಿದರು. ಜಿಲ್ಲಾ ಗೌರವಾಧ್ಯಕ್ಷ ಪರಶುರಾಮ ಕೋಟೆಕಲ್ಲ, ಉಪಾಧ್ಯಕ್ಷ ಪಾಂಡು ಕಾಳೆ ಮಾತನಾಡಿದರು. ಸಭೆಯಲ್ಲಿ ವಿಷ್ಣು ಮಾನೆ, ಶಂಕರ ಮಧುಕರ ಮಾನೆ, ಸಂಗಯ್ಯ ಗಂಜಿಮಠ, ವಸಂತ ಮಾನೆ, ಗಾಳಪ್ಪ, ವಿಶಾಲ ಮಾನೆ, ಮೋಹನ, ರಾಜು ಮಾನೆ, ಜಂಬಣ್ಣ ಕಡಮೂರ, ಪ್ರಕಾಶ ಮಾನೆ, ಸುರೇಶ ಬೂದೂರು, ಮುರಳಿ ಬೂದೂರ ಮುಂತಾದವರು ಉಪಸ್ಥಿತರಿದ್ದರು. ದೀಪಕ ಮಾನೆ ಸ್ವಾಗತಿಸಿದರು. ಪಾಂಡು ಕಾಳೆ ನಿರೂಪಿಸಿ, ವಂದಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

