ಗದಗ

ಕಾಮಗಾರಿ ಗುಣಮಟ್ಟದ್ದಿರಲಿ

Published On :

ಕನ್ನಡಪ್ರಭ ವಾರ್ತೆ, ಲಕ್ಷ್ಮೇಶ್ವರ, ಅ. 20
ಹಿಂದುಳಿದ ಗ್ರಾಮಾಂತರ ಪ್ರದೇಶಗಳ ಅಭಿವೃದ್ಧಿಗೆ ಆದ್ಯತೆ ನೀಡುತ್ತೇನೆ. ಅಲ್ಲದೇ ಮುಂದೆ ನಡೆಯುವ ಕಾಮಗಾರಿಗಳ ಗುಣಮಟ್ಟದಲ್ಲಿ ಯಾವುದೇ ರಾಜಿ ಇಲ್ಲವೆಂದು ಶಾಸಕ ರಾಮಕೃಷ್ಣ ದೊಡ್ಡಮನಿ ಹೇಳಿದರು.
ಅವರು ಸಮೀಪದ ಕೋಗನೂರ ಗ್ರಾಮದಲ್ಲಿ ಬುಧವಾರ ನಡೆದ ಲೋಕೋಪಯೋಗಿ ಇಲಾಖೆಯ ವತಿಯಿಂದ ಸೇತುವೆ, ಚರಂಡಿ ಕಾಮಗಾರಿಗಳಿಗೆ ಭೂಮಿಪೂಜೆ ನೆರವೇರಿಸಿ ಮಾತನಾಡಿದರು.
ಗ್ರಾಮೀಣ ಪ್ರದೇಶದ ರಸ್ತೆ ಸುಧಾರಣೆಗೆ ಹೆಚ್ಚು ಒತ್ತು ನೀಡುವುದು ತಮ್ಮ ಗುರಿಯಾಗಿದ್ದು, ಗ್ರಾಮಾಂತರ ಪ್ರದೇಶದ ಜನರು ಅನೇಕ ಸಮಸ್ಯೆಗಳನ್ನು ಎದುರಿಸುತ್ತಿದ್ದು ಅವುಗಳನ್ನು ಹೋಗಲಾಡಿಸಲು ಶೀಘ್ರ ಕ್ರಮ ಕೈಗೊಳ್ಳಲಾಗುವುದು. ಗ್ರಾಮಾಂತರ ಪ್ರದೇಶದ ರಸ್ತೆಯ ಮೇಲೆ ಹೆಚ್ಚು ಭಾರವುಳ್ಳ ವಾಹನಗಳು ಸಂಚರಿಸುವುದರಿಂದ ಈ ರಸ್ತೆಗಳು ಬೇಗನೆ ಹಾಳಾಗಿ ಹೋಗುತ್ತವೆ. ಅದಕ್ಕಾಗಿ ಈ ನಿಟ್ಟಿನಲ್ಲಿ ತಾಲೂಕಿನ ಎಲ್ಲ ರಸ್ತೆಗಳನ್ನು ಹಾಗೂ ರಾಜ್ಯ ಹೆದ್ದಾರಿಯಾದ ಕಲ್ಮಲಾ-ಶಿಗ್ಗಾಂವಿ ಹಾಗೂ ಶಿರಹಟ್ಟಿ-ಇಟಗಿ ರಸ್ತೆಗಳನ್ನು ಮೇಲ್ದರ್ಜೆಗೆ ಏರಿಸುವಂತೆ ಪ್ರಸ್ತಾವನೆಯನ್ನು ಸರ್ಕಾರಕ್ಕೆ ಸಲ್ಲಿಸಲಾಗಿದೆ. ಶೀಘ್ರದಲ್ಲಿ ಅದಕ್ಕೆ ಅನುಮತಿ ದೊರೆಯುತ್ತದೆ. ತಾಲೂಕಿನ ಎಲ್ಲ ರಸ್ತೆಗಳು ಕಿತ್ತು ಹೋಗಿದ್ದು, ರಸ್ತೆಗಳಲ್ಲಿ ದೊಡ್ಡ ಗುಂಡಿಗಳು ಬಿದ್ದಿವೆ. ಈ ಗುಂಡಿಗಳನ್ನು ಮುಚ್ಚಿಸಲು ತುರ್ತಾಗಿ ಕ್ರಮ ಕೈಗೊಳ್ಳುವಂತೆ ಪಿಡಬ್ಲ್ಯೂಡಿ ಇಲಾಖೆ ಅಭಿಯಂತರಿಗೆ ಸೂಚಿಸಿದರು.
ಈ ಸಂದರ್ಭದಲ್ಲಿ ಕೋಗನೂರ ಗ್ರಾಪಂ ಅಧ್ಯಕ್ಷ ಮುದಕಪ್ಪ ಸೂರಣಗಿ, ಡಿ.ಕೆ. ಹೊನ್ನಪ್ಪನವರ, ಗ್ರಾಪಂ ಸದಸ್ಯ ಟಿ.ಎಂ. ಹೊಸಮನಿ, ಚೆಂದ್ರಪ್ಪ ಬಡಿಗೇರ, ಹನುಮವ್ವ ತಳವಾರ, ರಾಜು ಹತ್ತಿಕಾಳ, ಶರಣಬಸವ ಚೆನ್ನೂರ, ಭರತರಾಜ ಗುಡಗೇರಿ, ಫಕ್ಕಿರೇಶ ಮ್ಯಾಟಣ್ಣವರ, ಅಭಿಯಂತರ ಮಾಳೋದೆ, ಬಾಲಕೃಷ್ಣ ನಾಯಕ್ ಮುಂತಾದವರು ಉಪಸ್ಥಿತರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.