ಧರ್ಮಸ್ಥಳದ ಅವಹೇಳನ ನಿಲ್ಲಿಸಿ: ಅನ್ನದಾನ ಶ್ರೀ
ಮುಂಡರಗಿ: ಧರ್ಮಸ್ಥಳದಲ್ಲಿ ಕೊಲೆಯಾದ ಸೌಜನ್ಯಾ ಪ್ರಕರಣವನ್ನು ದುರ್ಬಳಕೆ ಮಾಡಿಕೊಂಡು ಧರ್ಮಸ್ಥಳದ ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗ್ಗಡೆ ಅವರ ಕುಟುಂಬಕ್ಕೆ ಮತ್ತು ಧರ್ಮಸ್ಥಳದ ಕ್ಷೇತ್ರದ ಬಗ್ಗೆ ಅವಹೇಳನ ಮಾಡುತ್ತಿರುವುದು ಸಲ್ಲದು ಎಂದು ಮುಂಡರಗಿ ಜ. ನಾಡೋಜ ಡಾ. ಅನ್ನದಾನೀಶ್ವರ ಶ್ರೀ ಹೇಳಿದರು.
ಅವರು ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿ, ವೀರೇಂದ್ರ ಹೆಗ್ಗಡೆ ಅವರು ಪ್ರಗತಿಪರ ಮನೋಭಾವನೆ ಹೊಂದಿದವರು. 40 ವರ್ಷದಿಂದ ಸಾಮಾಜಿಕ ಕ್ಷೇತ್ರದಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡು ಸರ್ಕಾರ ಮಾಡಲಾಗದ ಅನೇಕ ಯೋಜನೆಗಳನ್ನು, ಕೆಲಸಗಳನ್ನು ಮಾಡುತ್ತಾ ಬಂದಿದ್ದಾರೆ. ಕ್ರಿಯಾಶೀಲ ವ್ಯಕ್ತಿತ್ವ ಹೊಂದಿದ ಹೆಗ್ಗಡೆ ಅವರು ಸಮಾಜಕ್ಕೆ ಸಾಕಷ್ಟು ಕೊಡುಗೆ ನೀಡಿದ್ದಾರೆ. ವಿಕೃತ ಮನಸ್ಸಿನ ಪಟ್ಟಭದ್ರ ಹಿತಾಸಕ್ತಿಗಳು ಅವರ ಬೆಳವಣಿಗೆ ಮತ್ತು ಅವರು ಮಾಡುತ್ತಿರುವ ಸಮಾಜ ಸೇವೆ ಸಹಿಸದೆ ಅನಾವಶ್ಯಕವಾಗಿ ಆರೋಪ ಮಾಡುತ್ತಿರುವುದನ್ನು ನಿಲ್ಲಿಸಬೇಕು ಎಂದು ತಿಳಿಸಿದ್ದಾರೆ. ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗ್ಗಡೆ ಅವರು ಇಂತಹ ಮಾತುಗಳಿಗೆ ಕಿವಿಗೊಡದೆ ತಾವು ಮಾಡುತ್ತಿರುವ ಸಮಾಜಸೇವೆಯನ್ನು ಮುಂದುವರಿಸಬೇಕು. ನ್ಯಾಯಾಂಗ ತನಿಖೆ ಮುಕ್ತಾಯವಾಗಿ ಸತ್ಯ ಹೊರಬರುವವರೆಗೂ ಶ್ರೀಕ್ಷೇತ್ರದ ಅವಹೇಳನ ಮಾಡುವುದು ಸಲ್ಲದು. ಸಮಾಜ ಮತ್ತು ಸರ್ಕಾರ ಶ್ರೀಕ್ಷೇತ್ರದ ಘನತೆಗೆ ತಕ್ಕಂತೆ ನಡೆದುಕೊಳ್ಳಬೇಕೆಂದು ಅನ್ನದಾನೀಶ್ವರ ಶ್ರೀಗಳು ಸಲಹೆ ಮಾಡಿದ್ದಾರೆ. ಅಲ್ಲದೆ ಶಿಂಗಟಾಲೂರು ವೀರಭದ್ರೇಶ್ವರ ದೇವಸ್ಥಾನ್ ಟ್ರಸ್ಟ್ ಕಮಿಟಿ ಅಧ್ಯಕ್ಷ ಕರಬಸಪ್ಪ ಹಂಚಿನಾಳ ಹಾಗೂ ಸರ್ವ ಸದಸ್ಯರು, ತಾಲೂಕು ಯುವ ಸಂಘಟನೆ ಅಧ್ಯಕ್ಷ ಪವನ್ ಚೋಪ್ರಾ, ಕಾರ್ಯದರ್ಶಿ ಮಂಜುನಾಥ ಗೋಡಿ ಹಾಗೂ ಪದಾಧಿಕಾರಿಗಳು, ಕನ್ನಡಕ್ರಾಂತಿ ಸೇನೆಯ ಅಧ್ಯಕ್ಷ ಮಂಜುನಾಥ ಮುಧೋಳ ಹಾಗೂ ಪದಾಧಿಕಾರಿಗಳು ಈ ಘಟನೆಯನ್ನು ಖಂಡಿಸಿ, ಧರ್ಮಸ್ಥಳದ ಕುರಿತು ಹಾಗೂ ಅಲ್ಲಿನ ಧರ್ಮಾಧಿಕಾರಿಗಳ ಕುರಿತು ಅವಹೇಳನ ಮಾಡಬಾರದು ಎಂದು ಮನವಿ ಮಾಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

