ಪಡಿತರ ಚೀಟಿ ಹಂಚಿಕೆ: ಗ್ರಾಮಲೆಕ್ಕಾಧಿಕಾರಿಗಳನ್ನು ಕೈ ಬಿಡಿ
ಗದಗ: ಜಿಲ್ಲಾ ಆಹಾರ ಇಲಾಖೆ ಪಡಿತರ ಚೀಟಿ ಜಂಟಿ ಸಮೀಕ್ಷೆ ಕಾರ್ಯದಿಂದ ಗ್ರಾಮ ಲೆಕ್ಕಾಧಿಕಾರಿಗಳನ್ನು ಮುಕ್ತಗೊಳಿಸಬೇಕು ಎಂದು ಸೋಮವಾರ ರಾಜ್ಯ ಗ್ರಾಮ ಲೆಕ್ಕಾಧಿಕಾರಿ ಸಂಘದಿಂದ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಲಾಯಿತು.
ಅ. 7ರಂದು ಜಿಲ್ಲಾಧಿಕಾರಿ ಕಾರ್ಯಾಲಯದಲ್ಲಿ ನಡೆದ ಸಭೆಯಲ್ಲಿ ಗ್ರಾಮಲೆಕ್ಕಾಧಿಕಾರಿಗಳಿಂದ ಪಡಿತರ ಚೀಟಿ ಕಾರ್ಯವನ್ನು ನಿರ್ವಹಿಸಲು ತಿಳಿಸಲಾಗಿದೆ. ಆದರೆ, ಕೇಂದ್ರ ಗ್ರಾಮಲೆಕ್ಕಾಧಿಕಾರಿಗಳ ಸಂಘ ಈಗಾಗಲೇ ಕಂದಾಯ ಕಾರ್ಯದರ್ಶಿಮಟ್ಟದಲ್ಲಿ ಚರ್ಚೆ ನಡೆಸಿದ್ದು, ಅದು ಅಂತಿಮವಾಗುವ ವರೆಗೆ ಗ್ರಾಮ ಲೆಕ್ಕಾಧಿಕಾರಿಗಳು ಈ ಕಾರ್ಯವನ್ನು ಕೈಬಿಟ್ಟಿರುತ್ತೇವೆ. ಏಕೆಂದರೆ ಸಕಾಲದಲ್ಲಿ ಕಾರ್ಯನಿರ್ವಹಿಸುವುದು ಮತ್ತು ಹೆಚ್ಚಿನ ವಸೂಲಿ ಇರುವುದರಿಂದ ತೊಂದರೆಯಾಗುತ್ತದೆ. ಈಗಾಗಲೇ ಅತಿವೃಷ್ಟಿಯಿಂದ ಬಿದ್ದ ಮನೆಗಳ ಸಮೀಕ್ಷೆಯನ್ನು ಸಂಪೂರ್ಣ ನಮಗೆ ವಹಿಸಿರುವುದರಿಂದ ನಮ್ಮ ಬಳಿ ದಾಖಲಾತಿ ಇರುವುದಿಲ್ಲ. ಆದ್ದರಿಂದ ಈ ಕಾರ್ಯಕ್ಕೆ ತೊಂದರೆಯಾಗುತ್ತದೆ.
3 ವರ್ಷಗಳ ಹಿಂದೆ ರಾಜ್ಯ ಸರ್ಕಾರ ಆದೇಶ ಹೊರಡಿಸಿ ಗ್ರಾಮ ಪಂಚಾಯಿತು ವ್ಯಾಪ್ತಿಯ ಪಡಿತರ ಕಾರ್ಯವನ್ನು ಗ್ರಾಪಂ ಸಿಬ್ಬಂದಿಯೇ ನಿರ್ವಹಿಸಬೇಕೆಂದು ತಿಳಿಸಿತ್ತು. ಪ್ರಸ್ತುತ ಹಿಂದಿನ ಸರ್ಕಾರದ ಆದೇಶವನ್ನು ಪುರಸ್ಕರಿಸಿ ಈಗಿನ ಸರ್ಕಾರ ಪಡಿತರ ಚೀಟಿ ನಿರ್ವಹಣೆ ಸಮೀಕ್ಷೆ ಕಾರ್ಯದಿಂದ ಗ್ರಾಮ ಲೆಕ್ಕಾಧಿಕಾರಿಗಳನ್ನು ಮುಕ್ತಗೊಳಿಸಬೇಕೆಂದು ಮನವಿಯಲ್ಲಿ ತಿಳಿಸಿದೆ.
ಈ ಸಂದರ್ಭದಲ್ಲಿ ಸಂಘದ ಜಿಲ್ಲಾ ಉಪಾಧ್ಯಕ್ಷ ಎಸ್.ಎಸ್.ಪಾಟೀಲ, ಪ್ರಧಾನ ಕಾರ್ಯದರ್ಶಿ ಎಸ್.ಎಲ್. ಪಾಟೀಲ, ಖಜಾಂಚಿ ಎಸ್.ವಿ. ವಾಯಿ, ಎ.ವೈ. ಹಾದಿಮನಿ, ಬಿ.ಎಂ. ಕಾತರಾಳ, ಜೆ.ಎಂ. ಜೋಷಿ, ಎಂ.ಆರ್. ಕುದರಿ, ಬಾರಕೇರ ಮುಂತಾದವರು ಉಪಸ್ಥಿತರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

