ಗದಗ

ಡಾ. ಆರ್.ಟಿ. ಕುಲಕರ್ಣಿ ನಿಧನ: ಸಂತಾಪ

Published On :

ಗದಗ: ಮಂಗಳವಾರ ನಿಧನರಾದ ಡಾ. ಆರ್.ಟಿ. ಕುಲಕರ್ಣಿ ನಿಸ್ವಾರ್ಥ ಸೇವೆ ತ್ಯಾಗದ ಮೂಲಕ ಅಂತಾರಾಷ್ಟ್ರೀಯ ಮಟ್ಟದ ವ್ಯಕ್ತಿಯಾಗಿದ್ದು, ಅವರ ನಿಧನದಿಂದಾಗಿ ಸಮಾಜಕ್ಕೆ ತುಂಬಲಾರದ ಹಾನಿಯಾಗಿದೆ ಎಂದು ಡಾ. ಸಿದ್ಧಲಿಂಗ ಶ್ರೀ ಹೇಳಿದರು.
ಈ ಕುರಿತು ಪ್ರಕಟಣೆ ನೀಡಿರುವ ಶ್ರೀಗಳು, ಡಾ. ಆರ್.ಟಿ. ಕುಲಕರ್ಣಿ 1974 ರಿಂದ ಗದುಗಿನಲ್ಲಿ ವೈದ್ಯಕೀಯ ಸೇವೆ ಪ್ರಾರಂಭಿಸಿ ಲಕ್ಷಾಂತರ ರೋಗಿಗಳನ್ನು ಶಸ್ತ್ರ ಚಿಕಿತ್ಸೆಯಿಂದ ಗುಣಪಡಿಸಿದ್ದಾರೆ. ರೋಟರಿ ಇಂಟರ್‌ನ್ಯಾಶನಲ್ ಕ್ಲಬ್ ಮೂಲಕ ಅಂಧಮಕ್ಕಳಿಗೆ ಗದುಗಿನ ಗವಾಯಿಗಳವರ ಮಠದಲ್ಲಿ ಕಟ್ಟಡ ನಿರ್ಮಿಸಿದ್ದು ಅವರ ಪ್ರಮುಖ ಸಾಧನೆಯಲ್ಲಿ ಒಂದಾಗಿದೆ. ನಮ್ಮ ಶ್ರೀ ತೋಂಟದ ಸಿದ್ಧಲಿಂಗೇಶ್ವರ ಕಲ್ಯಾಣ ಕೇಂದ್ರದ ಚೇರ್‌ಮನರಾಗಿ ಅನುಪಮ ಸೇವೆ ಸಲ್ಲಿಸಿದ್ದಾರೆ. ಲಿಂಗಾಯತ ಸಮಾಜದ ಒಬ್ಬ ಶ್ರೇಷ್ಠ ವ್ಯಕ್ತಿಯಾಗಿ, ವೈದ್ಯರಾಗಿ ಜನಮಾನಸದಲ್ಲಿ ಉಳಿದಿದ್ದಾರೆ. ಅವರ ಅಗಲಿಕೆ ಸಮಾಜ, ನಮ್ಮ ಸಂಸ್ಥೆಗೆ ತುಂಬಲಾರದ ನಷ್ಟವಾಗಿದೆ. ಅವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಶ್ರೀಗಳು ಸಂತಾಪ ಸೂಚಿಸಿದ್ದಾರೆ. ಡಾ. ಆರ್.ಟಿ. ಕುಲಕರ್ಣಿ ನಿಧನರಾದ ಹಿನ್ನೆಲೆಯಲ್ಲಿ ಮಂಗಳವಾರ ಮಧ್ಯಾಹ್ನ ತೋಂಟದಾರ್ಯ ತಾಂತ್ರಿಕ ಮಹಾವಿದ್ಯಾಲಯ, ಪಾಲಿಟೆಕ್ನಿಕ್ ಕಾಲೇಜುಗಳಿಗೆ ರಜೆ ಘೋಷಿಸಲಾಯಿತು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.