ಗದಗ

ಆಸ್ಪತ್ರೆಗಳಲ್ಲಿ ಸಿಬ್ಬಂದಿ ಭರ್ತಿಗೆ ಕ್ರಮ

Published On :

ನರೇಗಲ್ಲ: ನರೇಗಲ್ಲ ಸರ್ಕಾರಿ ಆಸ್ಪತ್ರೆಗೆ ಕಾಯಕಲ್ಪ ಬೇಕಿದ್ದು, ಒಂದು ತಿಂಗಳೊಳಗೆ ಇಲ್ಲಿಗೆ ಎಲ್ಲ ಸಿಬ್ಬಂದಿಯನ್ನು ಭರ್ತಿ ಮಾಡುವುದಾಗಿ ಜಿಲ್ಲಾಧಿಕಾರಿ ಎನ್.ಎಸ್. ಪ್ರಸನ್ನಕುಮಾರ ಹೇಳಿದರು.
ಈಚೆಗೆ ಪಟ್ಟಣದ ಸರ್ಕಾರಿ ಆಸ್ಪತ್ರೆಗೆ ಅನಿರೀಕ್ಷಿತ ಭೇಟಿ ನೀಡಿದ ಅವರು ಇಲ್ಲಿನ ವ್ಯವಸ್ಥೆ ಗಮನಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದರು.
ಈ ಆಸ್ಪತ್ರೆಯಲ್ಲಿ ಈಗ ಆಯುಷ್ ವೈದ್ಯಾಧಿಕಾರಿಗಳು ಕಾರ್ಯ ನಿರ್ವಹಿಸುತ್ತಿದ್ದು, ಇಲ್ಲಿ ಓರ್ವ ಎಂಬಿಬಿಎಸ್ ವೈದ್ಯರ ಅವಶ್ಯಕತೆ ಕಂಡು ಬರುತ್ತಿದೆ. ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿನ ಆಸ್ಪತ್ರೆಗಳಿಗೆ ಕನಿಷ್ಠ ಒಬ್ಬರಾದರೂ ಎಂಬಿಬಿಎಸ್ ವೈದ್ಯರನ್ನು ನೇಮಕ ಮಾಡುವುದು ಅವಶ್ಯಕವಾಗಿದೆ. ಈ ವ್ಯವಸ್ಥೆಯನ್ನು ಮಾಡುವತ್ತ ಶೀಘ್ರ ಗಮನ ಹರಿಸಲಾಗುವುದು. ಗದಗ ಜಿಲ್ಲೆಯಲ್ಲಿ ಬಹುತೇಕ ಆಸ್ಪತ್ರೆಗಳಲ್ಲಿ ಸಿಬ್ಬಂದಿ ಕೊರತೆ ಇರುವುದು ನನ್ನ ಗಮನಕ್ಕೆ ಬಂದಿದೆ. ಈ ಕೊರತೆಯನ್ನು ನೀಗಿಸಲು ಪ್ರಯತ್ನಿಸಲಾಗುವುದು.
ನರೇಗಲ್ಲ ಮತ್ತು ರೋಣ ತಾಲೂಕಿನ ಬಹುತೇಕ ಆಸ್ಪತ್ರೆಗಳಲ್ಲಿ ನರ್ಸ್‌ಗಳ ಕೊರತೆಯಿದ್ದು ಇದನ್ನು ಪರಿಹರಿಸಲಾಗುವುದು. ಆಸ್ಪತ್ರೆಯ ಫಲಕದ ಮೇಲೆ ಬರೆದಿರುವಂತೆ ಇಲ್ಲಿ ದಿನದ 24 ಘಂಟೆ ರೋಗಿಗಳಿಗೆ ಸೇವೆ ಸಿಗಬೇಕು. ಆದರೆ ಸಿಬ್ಬಂದಿ ಕೊರತೆಯಿಂದ ಇಲ್ಲಿ ಆ ವ್ಯವಸ್ಥೆಗೆ ಸ್ವಲ್ಪ ತೊಂದರೆ ಬಂದಿದ್ದು, ಅದನ್ನು ಶೀಘ್ರವಾಗಿ ಬಗೆಹರಿಸಿ ನರೇಗಲ್ಲ ಮತ್ತು ಸುತ್ತಲಿನ ಜನತೆಗೆ ಉತ್ತಮ ಆರೋಗ್ಯ ಭಾಗ್ಯ ಒದಗಿಸಲು ತಾವು ಶ್ರಮಿಸುವುದಾಗಿ ತಿಳಿಸಿದರು. ಆಸ್ಪತ್ರೆಯ ವ್ಯವಸ್ಥೆಗಳ ಬಗ್ಗೆ ಸ್ಥಳೀಯ ವೈದ್ಯಾಧಿಕಾರಿ ಮಹೇಶ ಹೊಸಕೇರಿ ಜಿಲ್ಲಾಧಿಕಾರಿಗಳಿಗೆ ವಿವರಿಸಿದರು. ನಂತರ ಜಿಲ್ಲಾಧಿಕಾರಿಗಳು ಇಲ್ಲಿನ ಪಟ್ಟಣ ಪಂಚಾಯಿತಿಗೂ ಭೇಟಿ ನೀಡಿ ಅಲ್ಲಿನ ವ್ಯವಸ್ಥೆಗಳನ್ನು ಗಮನಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.