ಪಿಂಚಣಿ ಅದಾಲತ್ನಲ್ಲಿ 280 ಅರ್ಜಿ ವಿಲೇವಾರಿ
ನರೇಗಲ್ಲ: ಪಟ್ಟಣದ ಕನ್ನಡ ಗಂಡು ಮಕ್ಕಳ ಶಾಲೆಯಲ್ಲಿ ಈಚೆಗೆ ಜರುಗಿದ ಪಿಂಚಣಿ ಅದಾಲತ್ ಕಾರ್ಯಕ್ರಮದಲ್ಲಿ ಒಟ್ಟು 280 ಅರ್ಜಿಗಳನ್ನು ವಿಲೇವಾರಿ ಮಾಡಲಾಯಿತು. ಅದರಲ್ಲಿ 169 ವೃದ್ಧಾಪ್ಯ ವೇತನ, 48 ಸಂಧ್ಯಾ ಸುರಕ್ಷಾ, 38 ವಿಧವಾ ಮತ್ತು 25 ಅಂಗವಿಕಲ ಪಿಂಚಣಿ ಅರ್ಜಿಗಳು ಸೇರಿದ್ದವು. ಅದಾಲತ್ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಜಿಲ್ಲಾಧಿಕಾರಿ ಎನ್.ಎಸ್.ಪ್ರಸನ್ನಕುಮಾರ ಮಾತನಾಡಿ, ಸರ್ಕಾರ ಅಂಗವಿಕಲರಿಗೆ, ವಿಧವೆಯರಿಗೆ, ವೃದ್ಧರಿಗೆಂದು ಪಿಂಚಣಿಗಳನ್ನು ಮಂಜೂರು ಮಾಡುತ್ತಿದೆ. ಕೆಲವೊಂದು ಸಂದರ್ಭಗಳಲ್ಲಿ ಅನರ್ಹರೂ ಕೂಡ ಪಿಂಚಣಿ ಪಡೆಯುವಲ್ಲಿ ಸಫಲರಾಗುತ್ತಾರೆ. ಇದಕ್ಕೆ ಕಾರಣರಾಗುವ ಎಲ್ಲರಿಗೂ ಶಿಕ್ಷೆ ಕಟ್ಟಿಟ್ಟ ಬುತ್ತಿ. ಪಿಂಚಣಿಗಳು ಅರ್ಹರಿಗೆ ಸಲ್ಲಿಕೆಯಾಗಬೇಕು. ಅಂದಾಗ ಮಾತ್ರ ಸರ್ಕಾರದ ಯೋಜನೆಗಳು ಯಶಸ್ಸು ಕಾಣಲು ಸಾಧ್ಯವಾಗುತ್ತದೆ ಎಂದರು. ಈ ಸಂದರ್ಭದಲ್ಲಿ ತಹಸೀಲ್ದಾರ್ ಎ.ಜಿ. ಪಂಡಿತ, ಪಿಂಚಣಿ ವಿಭಾಗದ ಸಹಾಯಕ ನಿರ್ದೇಶಕ ಎ.ಎ. ಕಂಬಾಳಿಮಠ, ತಾಲೂಕು ಪ್ರಭಾರಿ ವೈದ್ಯಾಧಿಕಾರಿ ಡಾ. ಬಿ.ಎಸ್. ಭಜಂತ್ರಿ, ಪ್ರಭಾರಿ ಉಪಖಜಾನಾಧಿಕಾರಿ ಆರ್.ಎನ್. ಜೋಗೇರ ಉಪಸ್ಥಿತರಿದ್ದರು. ನರೇಗಲ್ಲ ಹೋಬಳಿಯ ಕಂದಾಯ ನಿರೀಕ್ಷಕ ಪಿ.ಬಿ. ಮಾಲಿಪಾಟೀಲ ಸ್ವಾಗತಿಸಿ, ವಂದಿಸಿದರು.
ಪುಟ್ಟರಾಜ ನೇಮಕ
ಗದಗ: ಕನ್ನಡ ಜನಾಭಿವೃದ್ಧಿ ವೇದಿಕೆಯ ಗದಗ ಜಿಲ್ಲಾ ಯುವಘಟಕದ ಅಧ್ಯಕ್ಷರಾಗಿ ಪುಟ್ಟರಾಜ ಕನಕೆ ಅವರನ್ನು ನೇಮಕ ಮಾಡಲಾಗಿದೆ ಎಂದು ಕನ್ನಡ ಜನಾಭಿವೃದ್ಧಿ ವೇದಿಕೆಯ ರಾಜ್ಯಾಧ್ಯಕ್ಷ ಹುಲ್ಲೇಶ ಭಜಂತ್ರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

