ಇಂದು ಉಪನ್ಯಾಸ
ಗದಗ: ಗದಗ ಜಿಲ್ಲಾ ಕಸಾಪ ವತಿಯಿಂದ ಶನಿವಾರ ಸಾಹಿತ್ಯ ಸಂಜೆ ಉಪನ್ಯಾಸ ಅ. 26ರಂದು ಸಂಜೆ 6 ಗಂಟೆಗೆ ತಾಪಂ ಆವರಣದಲ್ಲಿರುವ ಜಿಲ್ಲಾ ಕಸಾಪ ಕಚೇರಿಯಲ್ಲಿ ನಡೆಯಲಿದೆ. ಕೆವಿಎಸ್ಆರ್ ಕಾಲೇಜಿನ ಪ್ರಾಚಾರ್ಯ ಬಿ.ಆರ್.ಜಾಲಿಹಾಳ ಅವರು ಕರ್ನಾಟಕ ಏಕೀಕರಣ ಕುರಿತು ಉಪನ್ಯಾಸ ನೀಡಲಿದ್ದಾರೆ. ಸೀಮಾ ಪಾವಸ್ಕರ ಕವನ ವಾಚನ ಮಾಡಲಿದ್ದಾರೆ. ಜಿಲ್ಲಾ ಕಸಾಪ ಅಧ್ಯಕ್ಷ ಡಾ. ಶಿವಪ್ಪ ಕುರಿ ಅಧ್ಯಕ್ಷತೆ ವಹಿಸುವರು. ಕಾರ್ಯಕ್ರಮದಲ್ಲಿ ಗದುಗಿನ ಸಾಹಿತಿಗಳು, ಕಲಾವಿದರು, ಕಸಾಪ ಆಜೀವ ಸದಸ್ಯರು, ಕನ್ನಡಾಭಿಮಾನಿಗಳು, ಶಾಲಾಕಾಲೇಜುಗಳ ಪ್ರಾಧ್ಯಾಪಕರು ಹಾಗೂ ವಿದ್ಯಾರ್ಥಿಗಳು ಪಾಲ್ಗೊಳ್ಳಬೇಕೆಂದು ಜಿಲ್ಲಾ ಕಸಾಪ ಗೌರವ ಕಾರ್ಯದರ್ಶಿ ಶರಣು ಗೋಗೇರಿ, ಡಾ. ಸಂಗಮೇಶ ತಮ್ಮನಗೌಡರ ಹಾಗೂ ಕೋಶಾಧ್ಯಕ್ಷ ಮಲ್ಲೇಶ ಡಿ.ಎಚ್. ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಮಹಿಳೆ ಕೊಲೆ
ರೋಣ: ತಾಲೂಕಿನ ಶಾಂತಗೇರಿ ಗ್ರಾಮದಲ್ಲಿ ಆಡು ಮೇಯಿಸಲು ತೆರಳಿದ್ದ ಮಹಿಳೆಯೋರ್ವಳು ಕೊಲೆಯಾಗಿರುವ ಘಟನೆ ಶುಕ್ರವಾರ ನಡೆದಿದೆ. ಕೊಲೆಯಾದ ಮಹಿಳೆಯನ್ನು ಶಾಂತವ್ವ ಹನಮಂತಪ್ಪ ಜಾಡರ ಊರ್ಫ್ ಪದ್ಮಸಾಲಿ (65) ಎಂದು ಗುರುತಿಸಲಾಗಿದೆ. ಕೊಲೆಗೆ ಯಾವುದೇ ಸ್ಪಷ್ಟ ಕಾರಣ ತಿಳಿದು ಬಂದಿಲ್ಲ. ಮಹಿಳೆಯ ಶವದ ತಲೆ ಹಾಗೂ ಕುತ್ತಿಗೆ ಭಾಗದಲ್ಲಿ ಗಂಭೀರವಾದ ಗಾಯಗಳಾಗಿರುವುದು ಪತ್ತೆಯಾಗಿದೆ ಎಂದು ಪಿಎಸ್ಐ ಡಿ.ಬಿ. ಪಾಟೀಲ ತಿಳಿಸಿದ್ದು, ಈ ಕುರಿತು ಪ್ರಕರಣ ದಾಖಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

