ಗದಗ

ಗ್ರಾಮೀಣ ಪ್ರದೇಶದಲ್ಲಿ ಉತ್ತಮ ಸೇವೆ ನೀಡಿ: ಡಾ. ಬಿ.ಎಫ್. ದಂಡಿನ

Published On :

ಗದಗ: ಪ್ರತಿಯೊಬ್ಬರೂ ಉತ್ತಮ ಸ್ಥಾನ ಪಡೆಯಬೇಕಾದರೆ ಗ್ರಾಮೀಣ ಪ್ರದೇಶದಲ್ಲಿ ಅತ್ಯುತ್ತಮ ಸೇವೆ ನೀಡಬೇಕೆಂದು ಕನಕದಾಸ ಶಿಕ್ಷಣ ಸಮಿತಿ ಅಧ್ಯಕ್ಷ ಡಾ. ಬಿ.ಎಫ್. ದಂಡಿನ ಹೇಳಿದರು.  ಅವರು ತಾಲೂಕಿನ ಅಡವಿಸೋಮಾಪುರ ಗ್ರಾಮದ ಗೋಣಿ ಬಸವೇಶ್ವರ ದೇವಸ್ಥಾನದಲ್ಲಿ ಈಚೆಗೆ ಗದಗನ ಕನಕದಾಸ ಶಿಕ್ಷಣ ಸಮಿತಿಯ ಕೆವಿಎಸ್ಆರ್ ಸಂಯುಕ್ತ ಪದವಿ ಪೂರ್ವ ಮಹಾವಿದ್ಯಾಲಯದ ವತಿಯಿಂದ ಜರುಗಿದ ರಾಷ್ಟ್ರೀಯ ಸೇವಾ ಯೋಜನೆ ವಿಶೇಷ ಶಿಬಿರ ಉದ್ಘಾಟಿಸಿ ಮಾತನಾಡಿದರು. ದೇಶವು ಆರ್ಥಿಕವಾಗಿ ಮುಂದುವರಿಯಬೇಕಾದರೆ ಹಳ್ಳಿಗಳು ಪ್ರಗತಿಯತ್ತ ಸಾಗಬೇಕು. ರಾಷ್ಟ್ರೀಯ ಸೇವಾ ಯೋಜನೆ ಮಹಾತ್ಮಾ ಗಾಂಧೀಜಿ ಅವರ ಕನಸಿನ ಕೂಸಾಗಿದೆ. ರಾಷ್ಟ್ರೀಯ ಸೇವಾ ಯೋಜನೆಯ ಶಿಬಿರದ ಮೂಲಕ ಹಳ್ಳಿಗಳ ಉದ್ಧಾರವಾಗಬೇಕು. ಹಳ್ಳಿಗಳಲ್ಲಿ ಉತ್ತಮ ಸೇವೆ ನೀಡಬೇಕು. ಎಲ್ಲರೂ ಉತ್ತಮ ಕಾರ್ಯಗಳಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡು ಇತರರಿಗೆ ಮಾದರಿಯಾಗಬೇಕು ಎಂದರು.  ಪಪೂ ಶಿಕ್ಷಣ ಇಲಾಖೆ ಉಪನಿರ್ದೇಶಕ ಬಿ.ಎಸ್. ಗೌಡರ ಮಾತನಾಡಿದರು. ಪ್ರಾ. ಬಿ.ಆರ್. ಜಾಲಿಹಾಳ, ತಾಪಂ ಸದಸ್ಯ ಪ್ರಹ್ಲಾದ ಹೊಸಳ್ಳಿ, ವೀರಣ್ಣ ಅಂಗಡಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಗ್ರಾಪಂ ಅಧ್ಯಕ್ಷ ರಮೇಶ ಲಮಾಣಿ ಅಧ್ಯಕ್ಷತೆ ವಹಿಸಿದ್ದರು. ಗ್ರಾಪಂ ಸದಸ್ಯ ಮಲ್ಲಪ್ಪ ಹೊಸಳ್ಳಿ, ಆರ್.ಎನ್. ಭಂಡಾರಿ ಉಪನ್ಯಾಸಕರು, ಗ್ರಾಮಸ್ಥರು ಇದ್ದರು. ಶಿಬಿರಾಧಿಕಾರಿ ವಿ.ಎಸ್. ದಲಾಲಿ ಸ್ವಾಗತಿಸಿದರು. ಎಸ್.ಐ. ಚವಡಿ ನಿರೂಪಿಸಿದರು. ಯಲ್ಲಪ್ಪ ಗುದಗಿ ವಂದಿಸಿದರು.  

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.