ಮುಡಿಯಪ್ಪ ಅಗಲಿಕೆ ನೋವುಂಟು ಮಾಡಿದೆ: ವಿದ್ಯಾಧರ ದೊಡ್ಡಮನಿ
ಗದಗ: ಮುಡಿಯಪ್ಪ ಶಿಂಗ್ಟಾಲಕೇರಿ ಅವರು ತಮ್ಮ ಕಿರಿಯ ವಯಸ್ಸಿನಲ್ಲಿಯೇ ಹೃದಯಾಘಾತದಿಂದ ನಿಧನರಾಗಿದ್ದು, ಅವರ ಅಗಲಿಕೆ ತುಂಬಾ ನೋವುಂಟು ಮಾಡಿದೆ ಎಂದು ಪಿಎಲ್ಡಿ ಬ್ಯಾಂಕ್ ಮಾಜಿ ಅಧ್ಯಕ್ಷ ಹಾಗೂ ಕೋಟುಮಚಗಿ ಗ್ರಾಪಂನ ಮಾಜಿ ಅಧ್ಯಕ್ಷ ವಿದ್ಯಾಧರ ದೊಡ್ಡಮನಿ ಹೇಳಿದರು. ಕೋಟುಮಚಗಿ ಗ್ರಾಪಂ ಸದಸ್ಯ ಹಾಗೂ ಬಿಜೆಪಿಯ ಗದಗ ಜಿಲ್ಲಾ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸುತ್ತಿದ್ದ ಮುಡಿಯಪ್ಪ ಶಿಂಗ್ಟಾಲಕೇರಿ ಗುರುವಾರ ನಿಧನರಾದ ಹಿನ್ನೆಲೆಯಲ್ಲಿ ಶುಕ್ರವಾರ ಕೋಟುಮಚಗಿ ಗ್ರಾಪಂ ಕಾರ್ಯಾಲಯದಲ್ಲಿ ನಡೆದ ಸಂತಾಪ ಸಭೆಯಲ್ಲಿ ಮಾತನಾಡಿದರು. ಮುಡಿಯಪ್ಪ ಶಿಂಗ್ಟಾಲಕೇರಿ 9 ವರ್ಷಗಳಿಂದ ಗ್ರಾಪಂ ಸದಸ್ಯರಾಗಿ ಸೇವೆ ಸಲ್ಲಿಸುತ್ತಿದ್ದರು. ಸರ್ಕಾರದಿಂದ ಬಿಡುಗಡೆಯಾದ ಅಭಿವೃದ್ಧಿ ಯೋಜನೆಗಳನ್ನು ಸಾರ್ವಜನಿಕರಿಗೆ ತಲುಪಿಸುವಲ್ಲಿ ಹಾಗೂ ಗ್ರಾಮದ ಅಭಿವೃದ್ಧಿಗೆ ಅವರ ಪಾತ್ರ ಪ್ರಮುಖವಾಗಿತ್ತು. ಯಾವುದೇ ಪಕ್ಷವಿರಲಿ ಎಲ್ಲರೊಂದಿಗೆ ಉತ್ತಮ ಒಡನಾಟ ಹೊಂದಿದ್ದ ಅವರು, ಗ್ರಾಪಂನ ಯಾವುದೇ ಸಾರ್ವಜನಿಕರ ಹಾಗೂ ಸಮಾಜದ ಕೆಲಸಗಳಿರಲಿ ತಾವೇ ಮುಂದೆ ನಿಂತು ಜವಾಬ್ದಾರಿಯಿಂದ ನಿರ್ವಹಿಸುವ ಮನೋವೃತ್ತಿ ಹೊಂದಿದ್ದರು ಎಂದರು.ಗ್ರಾಪಂ ಮಾಜಿ ಅಧ್ಯಕ್ಷ ಪಾಲಾಕ್ಷಯ್ಯ ಬಳಿಗೇರಮಠ, ಸದಸ್ಯ ಪ್ರಕಾಶ ಕುಲಕರ್ಣಿ, ಮಲ್ಲಿಕಾರ್ಜುನ ಕಿತ್ತೂರ, ಕೆವಿಜಿ ಬ್ಯಾಂಕ್ನ ವ್ಯವಸ್ಥಾಪಕ ಡಿಪೋ, ಮಲ್ಲಿಕಾರ್ಜುನ ಅಣ್ಣಿಗೇರಿ, ಜ್ಯೋತಿ ಗೌಡ ಮಾತನಾಡಿದರು. 2 ನಿಮಿಷಗಳ ಕಾಲ ಮೌನಾಚರಣೆ ಜರುಗಿಸಲಾಯಿತು. ಗ್ರಾಪಂ ಅಧ್ಯಕ್ಷೆ ಸುಮಂಗಲಾ ಜಗ್ಗಲ, ಎಪಿಎಂಸಿ ಸದಸ್ಯ ರಾಮಣ್ಣ ಶಿಂಗ್ಟಾಲಕೇರಿ, ಗ್ರಾಪಂ ಉಪಾಧ್ಯಕ್ಷೆ ಶಾಂತಮ್ಮ ಹರ್ಲಾಪುರ, ಸದಸ್ಯ ಎಂ.ಆರ್.ಬೂದಿಹಾಳ, ಯಲ್ಲಪ್ಪ ಗೆಜ್ಜಿ, ಮಹೇಶ ನೀರಲಗಿ, ದೇವಪ್ಪ ಬಡಿಗೇರ, ಅಶೋಕ ಮ್ಯಾಗೇರಿ, ಆರ್.ಎಚ್. ನದಾಫ, ಬಸವರಾಜ ನೀರಲಗಿ, ಬಾಳಪ್ಪ ಮಾಲಿಪಾಟೀಲ, ಜೌತುನಬಿ ಮೀರಾನಾಯ್ಕ, ಮರಿತಂಗೆವ್ವ ನವಲಗುಂದ, ಯಲ್ಲಪ್ಪ ಶಿಂಗ್ಟಾಲಕೇರಿ, ಕಮಲಸಾಬ ಮೀರಾನಾಯ್ಕ, ಶಿವಪ್ಪ ಗಂಗಪ್ಪನವರ ಹಾಗೂ ಸಿಬ್ಬಂದಿ ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

