ಗದಗ

ಹಿಂದುಳಿದವರ ಪ್ರಗತಿಗೆ ಹಲವಾರು ಯೋಜನೆ

Published On :

ಲಕ್ಷ್ಮೇಶ್ವರ: ಸರ್ಕಾರ ಪರಿಶಿಷ್ಟ ಜಾತಿ ಮತ್ತು ಪಂಗಡದ ಅಭಿವೃದ್ಧಿಗೆ ಅನೇಕ ಯೋಜನೆ ಹಮ್ಮಿಕೊಂಡಿದ್ದು, ಹಿಂದುಳಿದ ವರ್ಗಗಳ ಜನರು ತಮ್ಮ ಜೀವನಮಟ್ಟ ಸುಧಾರಣೆಗೆ ಸರ್ಕಾರದ ಯೋಜನೆಗಳನ್ನು ಸದುಪಯೋಗ ಪಡಿಸಿಕೊಳ್ಳಬೇಕು ಎಂದು ಶಾಸಕ ರಾಮಕೃಷ್ಣ ದೊಡ್ಡಮನಿ ಹೇಳಿದರು.  ಅವರು ಸಮೀಪದ ಒಡೆಯರ ಮಲ್ಲಾಪುರ ಗ್ರಾಮದಲ್ಲಿ ಈಚೆಗೆ ಸಮಾಜ ಕಲ್ಯಾಣ ಇಲಾಖೆ ಅಡಿಯಲ್ಲಿ ಪರಿಶಿಷ್ಟ ಪಂಗಡದ ಓಣಿಯಲ್ಲಿ ನಿರ್ಮಿಸಲಾಗುತ್ತಿರುವ ಸಿ.ಸಿ. ರಸ್ತೆ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿ ಮಾತನಾಡಿದರು.  ಮುಂದಿನ 2 ವರ್ಷಗಳಲ್ಲಿ ಎಲ್ಲ ಗ್ರಾಮಗಳಲ್ಲಿ ಉತ್ತಮ ರಸ್ತೆಗಳನ್ನು ನಿರ್ಮಿಸಲು ಯೋಜನೆ ಹಾಕಿಕೊಳ್ಳಲಾಗುತ್ತಿದೆ. ಸರ್ಕಾರ ನಿರ್ಮಿಸುವ ಅಭಿವೃದ್ಧಿ ಕಾಮಗಾರಿಗಳಿಗೆ ಜನರ ಸಹಭಾಗಿತ್ವ ಹಾಗೂ ಕಾಳಜಿ ಅವಶ್ಯವಾಗಿದೆ. ಇದರಿಂದ ಕಾಮಗಾರಿಗಳ ಗುಣಮಟ್ಟ ಕಾಪಾಡಿಕೊಳ್ಳಲು ಸಾಧ್ಯವಾಗುತ್ತದೆ. ಕೇಂದ್ರ ಸರ್ಕಾರದ ನರೇಗಾ ಹಾಗೂ ನಿರ್ಮಲ ಭಾರತ ಯೋಜನೆಯ ಲಾಭ ಪಡೆದು ಪ್ರತಿಯೊಂದು ಕುಟುಂಬವು ಶೌಚಾಲಯವನ್ನು ನಿರ್ಮಾಣ ಮಾಡಿಕೊಳ್ಳುವ ಮೂಲಕ ಬಯಲು ಶೌಚ ಮುಕ್ತ ಭಾರತವನ್ನು ಮಾಡುವಲ್ಲಿ ತಮ್ಮ ಸಹಕಾರ ಅಗತ್ಯ ಎಂದರು.  ಗ್ರಾಪಂ ಸದಸ್ಯ ಪದ್ಮರಾಜ ಪಾಟೀಲ, ಗ್ರಾಪಂ ಸದಸ್ಯ ನೀಲಪ್ಪ ಪಶುಪತಿಹಾಳ, ಭರತರಾಜ ಬಳಿಗಾರ, ದೊಡ್ಡೂರು ಗ್ರಾಪಂ ಸದಸ್ಯ ಅಮರಪ್ಪ ಗುಡಗುಂಟಿ, ಸುರೇಶ ಮಾಳಗೇರ, ನೀಲಪ್ಪ ಸೆರಸೂರಿ, ಬಸಣ್ಣ ಮಜ್ಜಿಗುಡ್ಡ, ಮಲ್ಲಪ್ಪ ಪಶುಪತಿಹಾಳ, ವಿಜಯ ಕುಂಬಿ,  ರಾಜು ಶಿರೋಳ ಅನೇಕರು ಹಾಜರಿದ್ದರು. ತಾಲೂಕು ಸಮಾಜ ಕಲ್ಯಾಣಾಧಿಕಾರಿ ಬಿ.ಎನ್. ರಾಟಿ ಸ್ವಾಗತಿಸಿ, ವಂದಿಸಿದರು.


Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.