ಗದಗ

ಇಂದು ಗದುಗಿಗೆ ಸಿಎಂ

Published On :

ಗದಗ:  ಮುಖ್ಯಮಂತ್ರಿ ಸಿದ್ದರಾಮಯ್ಯನವರು ಅ. 28ರಂದು ಬೆಳಗ್ಗೆ 10.45 ಗಂಟೆಗೆ ಹೆಲಿಕಾಪ್ಟರ್ ಮೂಲಕ ನಗರಕ್ಕೆ ಆಗಮಿಸಿ ಸ್ಥಳೀಯ ಎಪಿಎಂಸಿಯ ವಿವೇಕಾನಂದ ಸಭಾಂಗಣದಲ್ಲಿ ಜರುಗುವ ಗದಗ ಕೃಷಿ ಮಾರುಕಟ್ಟೆಯ 70ನೇ ವರ್ಷಾಚರಣೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವರು. ನಂತರ ಹೆಲಿಕಾಪ್ಟರ್ ಮೂಲಕ ಮಧ್ಯಾಹ್ನ 1 ಗಂಟೆಗೆ ನರಗುಂದ ತಾಲೂಕಿನ ಬೆನಕನಕೊಪ್ಪ ಗ್ರಾಮಕ್ಕೆ ತೆರಳಿ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ನೂತನ ಕಟ್ಟಡ ಉದ್ಘಾಟಿಸುವರು. ನಂತರ 3.30 ಗಂಟೆಗೆ ಹೆಲಿಕಾಪ್ಟರ್ ಮೂಲಕ ಬೆಂಗಳೂರಿಗೆ ಮರಳುವರು ಎಂದು ಪ್ರಕಟಣೆ ತಿಳಿಸಿದೆ.
ಶಾಲಾ ಕಟ್ಟಡ ಉದ್ಘಾಟನೆ
ನರಗುಂದ: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘ ಬೆಂಗಳೂರು ವತಿಯಿಂದ ತಾಲೂಕಿನ ಬೆನಕನಕೊಪ್ಪ ಮೊರಾರ್ಜಿ ದೇಸಾಯಿ ವಸತಿ ಶಾಲಾ ಕಟ್ಟಡದ ಉದ್ಘಾಟನಾ ಸಮಾರಂಭವು ಅ. 28ರಂದು ಮಧ್ಯಾಹ್ನ 2.15 ಗಂಟೆಗೆ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಆವರಣದಲ್ಲಿ ಜರುಗಲಿದೆ. ಸಿಎಂ ಸಿದ್ದರಾಮಯ್ಯ ನೂತನ ವಸತಿ ಶಾಲೆ ಕಟ್ಟಡದ ಸಂಕೀರ್ಣ ಉದ್ಘಾಟಿಸುವರು. ಶಾಸಕ ಬಿ.ಆರ್. ಯಾವಗಲ್ ಅಧ್ಯಕ್ಷತೆ ವಹಿಸುವರು. ಸಚಿವ ಎಚ್.ಕೆ. ಪಾಟೀಲ,  ಸಚಿವ ಎಸ್.ಆರ್. ಪಾಟೀಲ, ಸಚಿವ ಎಚ್.ಆಂಜನೇಯ, ಸಚಿವ ಎಂ.ಬಿ. ಪಾಟೀಲ, ಅಬಕಾರಿ ಸಚಿವ ಜಾರಕಿಹೊಳಿ, ಕೃಷಿ ಸಚಿವ ಕೃಷ್ಣಬೈರೇಗೌಡ, ಸಚಿವ ಸಂತೋಷ್ ಲಾಡ, ಹಾಗೂ ಜಿಲ್ಲೆಯ ಸಂಸದರು, ಶಾಸಕರು, ವಿಪ ಸದಸ್ಯರು, ಜಿಪಂ ಉಪಾಧ್ಯಕ್ಷರು, ಸದಸ್ಯರು, ನರಗುಂದ ತಾಪಂ ಅಧ್ಯಕ್ಷ, ಉಪಾಧ್ಯಕ್ಷರು, ಚಿಕ್ಕನರಗುಂದ ಗ್ರಾಪಂ ಅಧ್ಯಕ್ಷ, ಉಪಾಧ್ಯಕ್ಷರು ಜನಪ್ರತಿನಿಧಿಗಳು, ಗಣ್ಯರು ಹಾಗೂ ಹಿರಿಯ ಅಧಿಕಾರಿಗಳು ಸಮಾರಂಭದಲ್ಲಿ ಭಾಗವಹಿಸುವರು ಎಂದು ಪ್ರಕಟಣೆ ತಿಳಿಸಿದೆ.

ತಿರಕಪ್ಪ ಕವಲೂರ ನಿಧನ  
ಲಕ್ಷ್ಮೇಶ್ವರ:  ಸಮೀಪದ ಬಾಲೆಹೊಸೂರು ಗ್ರಾಮದ ತಿರಕಪ್ಪ ಕವಲೂರ (70) ಭಾನುವಾರ ಬೆಳಗ್ಗೆ ನಿಧನರಾಗಿದ್ದಾರೆ. ಮೃತರು ಪತ್ನಿ, ಮೂವರು ಪುತ್ರರು ಹಾಗೂ ಅಪಾರ ಬಂಧು ಬಳಗ ಹೊಂದಿದ್ದರು. ಮೃತರು ಶಿರಹಟ್ಟಿ ತಾಪಂ ಉಪಾಧ್ಯಕ್ಷೆ ಶಾರದಾ ಕವಲೂರ ಅವರ ಮಾವನವರಾಗಿದ್ದರು.
ಸಂತಾಪ: ಬಾಲೆಹೊಸೂರಿನ ದಿಂಗಾಲೇಶ್ವರ ಶ್ರೀಗಳು, ಶಾಸಕ ರಾಮಕೃಷ್ಣ ದೊಡ್ಡಮನಿ, ಮಾಜಿ ಶಾಸಕ ಗಂಗಣ್ಣ ಮಹಾಂತಶೆಟ್ಟರ, ರಾಮಣ್ಣ ಲಮಾಣಿ, ಜಿ.ಎಸ್. ಗಡ್ಡದೇವರಮಠ, ಎಸ್.ಎನ್. ಪಾಟೀಲ ಮುಂತಾದವರು ಸಂತಾಪ ಸೂಚಿಸಿದ್ದಾರೆ.
ಬಸಪ್ಪ ಬೆಟಗೇರಿ ನಿಧನ
ನರೇಗಲ್ಲ: ಸ್ಥಳೀಯ ಪ್ರಗತಿಪರ ರೈತ ಬಸಪ್ಪ ಬೆಟಗೇರಿ (75) ಭಾನುವಾರ ನಿಧನ ಹೊಂದಿದರು. ಮೃತರು ಪತ್ನಿ, ಇಬ್ಬರು ಪುತ್ರರು, ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ. ಮೃತರ ನಿಧನಕ್ಕೆ ನರೇಗಲ್ಲ ಹಿರೇಮಠದ ಮಲ್ಲಿಕಾರ್ಜುನ ಶಿವಾಚಾರ್ಯ ಶ್ರೀಗಳು ಸಂತಾಪ ಸೂಚಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.