ಗದಗ

ಮೋದಿ ಪ್ರಧಾನಿಯಾದರೆ ಸಮೃದ್ಧ ಭಾರತ: ಬಂಡಿ

Published On :

ಶಿರಹಟ್ಟಿ: ಬರಲಿರುವ ಲೋಕಸಭಾ ಚುನಾವಣೆ ದೃಷ್ಟಿಯಲ್ಲಿಟ್ಟುಕೊಂಡು ಪಕ್ಷದ ಪ್ರಗತಿಗೆ ಒತ್ತು ನೀಡಲಾಗುತ್ತಿದೆ ಎಂದು ಮಾಜಿ ಸಚಿವ, ಗದಗ ಜಿಲ್ಲಾ ಬಿಜೆಪಿ ಅಧ್ಯಕ್ಷ ಕಳಕಪ್ಪ ಬಂಡಿ ಹೇಳಿದರು.
ಅವರು ಭಾನುವಾರ ತಾಲೂಕಿನ ಶ್ರೀಕ್ಷೇತ್ರ ವರವಿ ಮೌನೇಶ್ವರ ಮಠದ ಸಭಾಂಗಣದಲ್ಲಿ ಏರ್ಪಡಿಸಿದ್ದ ಶಿರಹಟ್ಟಿ ಮತಕ್ಷೇತ್ರದ ಬಿಜೆಪಿ ಕಾರ್ಯಕರ್ತರ ಸಭೆ ಉದ್ಘಾಟಿಸಿ ಮಾತನಾಡಿದರು. ದೇಶದ ರಾಜಕೀಯ ವ್ಯವಸ್ಥೆ ಹದಗೆಟ್ಟಿದ್ದು, ಯುಪಿಎ ಸರ್ಕಾರ ಹಗರಣಗಳಲ್ಲಿ ಸಿಲುಕಿದೆ. ಪ್ರಧಾನಮಂತ್ರಿಯೇ ಹಗರಣಗಳಲ್ಲಿ ಭಾಗಿಯಾಗಿರುವ ಶಂಕೆಯಿದ್ದು, 10 ವರ್ಷಗಳಲ್ಲಿ ಲಕ್ಷಾಂತರ ಅವ್ಯವಹಾರ ನಡೆದಿದೆ ಎಂದು ಆರೋಪಿಸಿದರು. ಸಮೃದ್ಧ ಭಾರತ ನಿರ್ಮಾಣಕ್ಕಾಗಿ ನರೇಂದ್ರ ಮೋದಿ ನೇತೃತ್ವದಲ್ಲಿನ ಬಿಜೆಪಿ ಅಧಿಕಾರಕ್ಕೆ ಬಂದರೆ ಮಾತ್ರ ದೇಶ ಉಳಿಯುತ್ತದೆ. ರಾಜ್ಯದಲ್ಲಿ ಕಾಂಗ್ರೆಸ್ ಆಡಳಿತಕ್ಕೆ ಬಂದು 5 ತಿಂಗಳಾಗಿದ್ದರೂ ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ಮಂಜೂರಾದ ಕಾಮಗಾರಿಗಳಿಗೆ ಅಡಿಗಲ್ಲು ಸಮಾರಂಭ ಹಾಗೂ ಉದ್ಘಾಟನೆ ಮಾಡುತ್ತಿದ್ದಾರೆಯೇ ಹೊರತು ಹೊಸ ಯೋಜನೆಗಳೇನೂ ಇಲ್ಲ. ಕನಕ ಬಿಟಿ ಹತ್ತಿ ಮತ್ತು ಸೂರ್ಯಕಾಂತಿ ಕಳಪೆ ಬೀಜ ಮಾರಾಟ ಮಾಡುತ್ತಿದ್ದು, ಇವನ್ನು ಖರೀದಿಸಿ ಬಿತ್ತನೆ ಮಾಡಿದ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಜಿಲ್ಲಾ ಉಸ್ತುವಾರಿ ಸಚಿವ ಎಚ್.ಕೆ. ಪಾಟೀಲ ಆಗಲಿ ಅಥವಾ ಜಿಲ್ಲಾ ಆಡಳಿತವಾಗಲಿ ಈ ಬಗ್ಗೆ ಸ್ಪಂದಿಸದಿರುವುದನ್ನು ಖಂಡಿಸಿದ ಅವರು, ಬರುವ ದಿನಗಳಲ್ಲಿ ರೈತರನ್ನು ಸಂಘಟಿಸಿ ಪ್ರತಿಭಟನೆ ಹಮ್ಮಿಕೊಳ್ಳುವುದಾಗಿ ಎಚ್ಚರಿಸಿದರು. ಬಿಜೆಪಿ ರಾಜ್ಯ ಮಹಿಳಾ ಮೋರ್ಚಾದ ಕಾರ್ಯದರ್ಶಿ ಭಾರತಿ ಜಂಬಗಿ, ಮಾಜಿ ಶಾಸಕ ರಾಮಣ್ಣ ಲಮಾಣಿ, ಡಾ. ವೈ.ಎಫ್. ಹಂಜಿ, ಜಿಪಂ ಉಪಾಧ್ಯಕ್ಷ ರಮೇಶ ಮುಂದಲಮನಿ, ತಾಪಂ ಅಧ್ಯಕ್ಷೆ ಸುನಂದ ಬಿದರಳ್ಳಿ, ಪಪಂ ಅಧ್ಯಕ್ಷ ನಾಗರಾಜ ಲಕ್ಕುಂಡಿ, ಜಿಪಂ ಸದಸ್ಯ ನಿರ್ಮಲಾ ಬರದೂರ, ಕಮಲವ್ವ ಸಜ್ಜನರ, ಹೇಮಗಿರೀಶ ಹಾವಿನಾಳ, ಎಂ.ಎಸ್. ದೊಡಗೌಡ್ರ, ಬಸವರಾಜ ತಳವಾರ, ಗ್ರಾಪಂ ಅಧ್ಯಕ್ಷ ತಿಮ್ಮರಡ್ಡಿ ಮರಡ್ಡಿ, ರಾಮಣ್ಣ ಡಂಬಳ, ಜಾನು ಲಮಾಣಿ, ಮೋಹನ್ ಗುತ್ತೆಮ್ಮನವರ, ವಿರೇಂದ್ರ ಪಾಟೀಲ, ಚೆಂಬಣ್ಣ ಬಾಳಿಕಾಯಿ, ಲೆಂಕೆಪ್ಪ ಶರಸೂರಿ ಮುಂತಾದವರು ಉಪಸ್ಥಿತರಿದ್ದರು. ಶಿದ್ರಾಮಪ್ಪ ಮೊರಬದ ಸ್ವಾಗತಿಸಿದರು. ನಿಂಬಣ್ಣ ಮಡಿವಾಳರ ನಿರೂಪಿಸಿದರು. ವೈ.ಡಿ. ಪಾಟೀಲ ವಂದಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.