ಗದಗ

ದೇವಸ್ಥಾನಕ್ಕೆ ಮೀಸಲಿಟ್ಟ ಜಾಗ ಮಾರಾಟ

Published On :

ಕನ್ನಡಪ್ರಭ ವಾರ್ತೆ, ಶಿರಹಟ್ಟಿ, ಅ. 28
ತಾಲೂಕಿನ ಛಬ್ಬಿ ಗ್ರಾಮದಲ್ಲಿ ಕರಿಯಮ್ಮ ದೇವಸ್ಥಾನಕ್ಕೆ ಮೀಸಲಿಟ್ಟ ಬಯಲು ಜಾಗವನ್ನು ಛಬ್ಬಿ ಗ್ರಾಪಂ ಅಧ್ಯಕ್ಷ ಹನುಮಂತಗೌಡ ಪಾಟೀಲ ತಮ್ಮ ಅಧಿಕಾರ ದುರ್ಬಳಕೆ ಮಾಡಿಕೊಂಡು ಖಾಸಗಿ ವ್ಯಕ್ತಿಗಳಿಂದ ಸರ್ವೆ ಮಾಡಿಸಿ, ರು. 50-60 ಸಾವಿರಕ್ಕೆ ಮಾರಾಟ ಮಾಡುತ್ತಿದ್ದಾರೆಂದು ಬಿಜೆಪಿ ಎಸ್ಸಿ ಮೋರ್ಚಾದ ಜಿಲ್ಲಾ ಅಧ್ಯಕ್ಷ ಜಾನು ಲಮಾಣಿ ಆರೋಪಿಸಿದ್ದಾರೆ.
ಈ ಕುರಿತು ಪ್ರಕಟಣೆ ನೀಡಿರುವ ಅವರು, ತಮ್ಮ ಅಧಿಕಾರ ಬಳಕೆ ಮಾಡಿಕೊಂಡು ದೇವಸ್ಥಾನದ ಆಸ್ತಿಯನ್ನು ಕಬಳಿಸುವ ಸಂಚು ರೂಪಿಸಿದ್ದಾರೆ. ಈಗಾಗಲೇ ಕೆಲವರಿಂದ ಹಣ ಪಡೆದಿದ್ದು ಬೆಳಕಿಗೆ ಬಂದಿದೆ. ಗ್ರಾಮಸ್ಥರು ಅನೇಕ ಬಾರಿ ವಿರೋಧ ವ್ಯಕ್ತಪಡಿಸಿದರೂ ಅಧ್ಯಕ್ಷರು ಗಣನೆಗೆ ತೆಗೆದುಕೊಳ್ಳುತ್ತಿಲ್ಲ ಎಂದು ದೂರಿದ್ದಾರೆ.
ಸಂಬಂಧಪಟ್ಟ ಅಧಿಕಾರಿಗಳು ಇವರ ಮೇಲೆ ಸೂಕ್ತ ಕಾನೂನು ಕ್ರಮ ಜರುಗಿಸುವುದರೊಂದಿಗೆ ಈ ಪ್ರಕರಣದಲ್ಲಿ ಭಾಗಿಯಾಗಿದ್ದಾರೆ ಎನ್ನಲಾದ ಮಲ್ಲನಗೌಡ ಪಾಟೀಲ, ಆನಂದಗೌಡ ಪಾಟೀಲ ಇವರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಲುಆಗ್ರಹಿಸಿದ್ದಾರೆ.
ಈ ಕುರಿತು ಸಿಇಒ ವೀರಣ್ಣ ತುರಮರಿಗೆ ಮನವಿ ನೀಡಲಾಗಿದೆ. ಕೂಡಲೇ ಛಬ್ಬಿ ಗ್ರಾಪಂಗೆ ಭೇಟಿ ನೀಡಿ ಎಲ್ಲ ಮೂಲ ದಾಖಲೆಗಳನ್ನು ಪರಿಶೀಲನೆ ನಡೆಸಿ, ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಮುಂದಾಗಬೇಕು ಎಂದು ಒತ್ತಾಯಿಸಿದ್ದಾರೆ. ಅಧಿಕಾರಿಗಳಿಂದ ವಿಳಂಬ ನೀತಿ ಕಂಡು ಬಂದರೆ ಗ್ರಾಮಸ್ಥರೆಲ್ಲರೂ ಸೇರಿ ಕಾರ್ಯಾಲಯದ ಎದುರು ಉಗ್ರ ಪ್ರತಿಭಟನೆಗೆ ಮುಂದಾಗಬೇಕಾಗುತ್ತದೆ ಎಂದು ಎಚ್ಚರಿಸಿದ್ದಾರೆ.

ಇಂದು ಬಿಜೆಪಿ ಪ್ರತಿಭಟನೆ
ಗದಗ:  ಪಟನಾದಲ್ಲಿ ಬಿಜೆಪಿ ಪ್ರಧಾನಿ ಅಭ್ಯರ್ಥಿ ನರೇಂದ್ರ ಮೋದಿ ಬಹಿರಂಗ ಸಭೆಯ ವೇಳೆ ನಡೆದ ಬಾಂಬ್ ಸ್ಫೋಟ ಖಂಡಿಸಿ, ಬಿಹಾರ ರಾಜ್ಯ ಸರ್ಕಾರ ಹಾಗೂ ಕೇಂದ್ರ ಸರ್ಕಾರದ ನಿರ್ಲಕ್ಷ್ಯದ ವಿರುದ್ಧ ಗದಗ ಜಿಲ್ಲಾ ಬಿಜೆಪಿ ವತಿಯಿಂದ ಅ. 29ರ ಬೆಳಗ್ಗೆ 11.30 ಗಂಟೆಗೆ ನಗರದ ಮಹಾತ್ಮಾಗಾಂಧಿ ವೃತ್ತದಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ. ಜಿಲ್ಲಾ ಬಿಜೆಪಿ ಅಧ್ಯಕ್ಷ ಹಾಗೂ ಮಾಜಿ ಸಚಿವ ಕಳಕಪ್ಪ ಬಂಡಿ, ಮಾಜಿ ಶಾಸಕ ಶ್ರೀಶೈಲಪ್ಪ ಬಿದರೂರ, ರಾಮಣ್ಣ ಲಮಾಣಿ, ಸಿ.ಸಿ. ಪಾಟೀಲ ಮುಂತಾದವರು ಪಾಲ್ಗೊಳ್ಳಲಿದ್ದು, ಎಂದು ಪ್ರಕಟಣೆ  ತಿಳಿಸಿದೆ.

ನಾಳೆ ಶಿಕ್ಷಕರಿಗಾಗಿ ಸ್ಪರ್ಧೆ
ಗದಗ: ಕರ್ನಾಟಕ ರಾಜ್ಯೋತ್ಸವ ಅಂಗವಾಗಿ ಬೆಟಗೇರಿಯ ಬಾಶೆಲ್ಮಿಷನ್ ಪ್ರೌಢಶಾಲೆಯಲ್ಲಿ ಅ. 30ರ ಮಧ್ಯಾಹ್ನ 2 ಗಂಟೆಗೆ ಶಿಕ್ಷಕರಿಗಾಗಿ ನಿಧಾನಗತಿಯ ದ್ವಿಚಕ್ರ ವಾಹನ ಸ್ಪರ್ಧೆ ಹಾಗೂ ಶಿಕ್ಷಕಿಯರಿಗಾಗಿ ಸಂಗೀತ ಖುರ್ಚಿ(ಮ್ಯೂಜಿಕಲ್ ಚೇರ್) ಸ್ಪರ್ಧೆ ಏರ್ಪಡಿಸಲಾಗಿದೆ. ಸ್ಪರ್ಧೆಯಲ್ಲಿ ಪಾಲ್ಗೊಂಡು ಯಶಸ್ವಿಗೊಳಿಸಬೇಕು ಎಂದು ಪ್ರಕಟಣೆ ತಿಳಿಸಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.