ಯುವಶಕ್ತಿ ಎಚ್ಚೆತ್ತುಕೊಳ್ಳಲಿ: ಅನಿಲ ವೈದ್ಯ
ಕನ್ನಡಪ್ರಭ ವಾರ್ತೆ, ಗದಗ, ಅ. 28
ಯುವಶಕ್ತಿಯು ಸದೃಢ ಭಾರತ ಕಟ್ಟಲು ಮುಂದಾಗಬೇಕು ಎಂದು ಕೆವಿಎಸ್ಆರ್ ಕಾಲೇಜಿನ ಉಪನ್ಯಾಸಕ ಅನಿಲ ವೈದ್ಯ ಹೇಳಿದರು.
ಅವರು ಜಿಲ್ಲಾಡಳಿತ, ಜಿಲ್ಲಾಪಂಚಾಯತ್, ಯುವಜನಸೇವಾ ಮತ್ತು ಕ್ರೀಡಾ ಇಲಾಖೆ, ನೆಹರು ಯುವಕೇಂದ್ರ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಜಿಲ್ಲಾಯುವ ಸಂಘಗಳ ಒಕ್ಕೂಟ ಗದಗ ಹಾಗೂ ವೀರೇಶ್ವರ ಪುಣ್ಯಾಶ್ರಮ ಗದಗ ಇವುಗಳ ಆಶ್ರಯದಲ್ಲಿ ನಗರದ ವೀರೇಶ್ವರ ಪುಣ್ಯಾಶ್ರಮದಲ್ಲಿ 2013-14ನೇ ಸಾಲಿನ ಗದಗ ಜಿಲ್ಲಾಮಟ್ಟದ ಯುವಜನೋತ್ಸವದಲ್ಲಿ ಮಾತನಾಡಿದರು.
ಪ್ರತಿಯೊಬ್ಬರಲ್ಲಿ ಪ್ರತಿಭೆ ಇದ್ದೇ ಇರುತ್ತದೆ. ಆದರೆ, ಅದನ್ನು ಹೊರಹಾಕಲು ಉತ್ತಮ ವೇದಿಕೆ ಇಲ್ಲದೇ ಇರುವುದರಿಂದ ಪ್ರತಿಭೆಗಳು ಹೊರಬರಲು ಸಾಧ್ಯವಾಗುವುದಿಲ್ಲ. ಸರ್ಕಾರ ಹಾಗೂ ಇಲಾಖೆಗಳ ಸಹಯೋಗದಲ್ಲಿ ಯುವಜನೋತ್ಸವದಂತಹ ವಿಶೇಷ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವುದರೊಂದಿಗೆ ಮಕ್ಕಳಲ್ಲಿ ಅಡಕವಾಗಿರುವ ಪ್ರತಿಭೆ ಹೊರಹಾಕಲು ಪ್ರಯತ್ನಿಸಲಾಗುತ್ತಿದೆ ಎಂದರು.
ವೀರೇಶ್ವರ ಪುಣ್ಯಾಶ್ರಮದ ವ್ಯವಸ್ಥಾಪಕ ಬಸವರಾಜ ಹಿಡ್ಕಿಮಠ ಮಾತನಾಡಿ, ಗ್ರಾಮೀಣ ಭಾಗದ ಯುವಕರು ಗ್ರಾಮೀಣ ಕಲೆ, ಸಂಗೀತ, ನಾಟಕ ಬೆಳೆಸಬೇಕು ಎಂದರು. ಯುವಜನಸೇವಾ ಮತ್ತು ಕ್ರೀಡಾಧಿಕಾರಿ ಕೆ. ಶಂಕರ, ಗುಡ್ಡರಾಜ ಹಲಗೇರಿ, ಕೆ.ಸಿ. ನಂಗರಜ್ಜಿ, ವಿಷ್ಣುಮೂರ್ತಿ ಗುಂಗೇರ, ಐ.ಕೆ. ಕಮ್ಮಾರ, ದತ್ತಪ್ರಸನ್ನ ಪಾಟೀಲ ಮುಂತಾದವರು ಭಾಗವಹಿಸಿದ್ದರು. ಬಿ.ಎಚ್. ಚಕ್ರಣ್ಣವರ ನಿರೂಪಿಸಿದರು.
ಯುವಜನೋತ್ಸವದಲ್ಲಿ ಜಾನಪದ ನೃತ್ಯ, ಜಾನಪದ ಗೀತೆ, ಏಕಾಂತ ನಾಟಕ, ಭರತನಾಟ್ಯ, ಒಡಿಸ್ಸಿ, ಕೂಚಪುಡಿ, ಕಥಕ್, ಮೃದಂಗ, ಗಿಟಾರ್, ಹಾರ್ಮೋನಿಯಂ, ವೀಣೆ, ಸಿತಾರ್, ಹಿಂದೂಸ್ಥಾನಿ ಸಂಗೀತ, ಕರ್ನಾಟಕ ಸುಗಮ ಸಂಗೀತ, ಆಶುಭಾಷಣ, ತಬಲಾ, ಕೊಳಲು, ಮಣಿಪುರಿ ಮುಂತಾದ ವಿಭಾಗಗಳಲ್ಲಿ ಜಿಲ್ಲೆಯ ಎಲ್ಲ ತಾಲೂಕುಗಳಿಂದ 200ಕ್ಕೂ ಹೆಚ್ಚು ಯುವಕ ಹಾಗೂ ಯುವತಿಯರು ಮತ್ತು ಕಲಾ ತಂಡಗಳು ಭಾಗವಹಿಸಿದ್ದವು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

