ಇಂದು ವಿಚಾರ ಸಂಕಿರಣ, ಸನ್ಮಾನ
ಗದಗ: ನಗರದ ಜ. ತೋಂಟದಾರ್ಯ ಕಲ್ಯಾಣ ಕೇಂದ್ರದಲ್ಲಿ ಅ. 30ರ ಬೆಳಗ್ಗೆ 10.30ಕ್ಕೆ ಗದಗ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ, ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ಬೆಂಗಳೂರು ಹಾಗೂ ಕರ್ನಾಟಕ ರಾಜ್ಯ ಸಂವಹನ, ಪತ್ರಿಕೋದ್ಯಮ ಶಿಕ್ಷಕರ ಸಂಘ ಬೆಂಗಳೂರು ಆಶ್ರಯದಲ್ಲಿ ಮಾಧ್ಯಮ ಮತ್ತು ಸಾಮಾಜಿಕ ಹೊಣೆಗಾರಿಕೆ ವಿಚಾರ ಸಂಕಿರಣ ಹಾಗೂ ಗದಗ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಉದ್ಘಾಟನೆ ಮತ್ತು ದತ್ತಿ ಪ್ರಶಸ್ತಿ ದಾನಿಗಳಿಗೆ ಸನ್ಮಾನ ಸಮಾರಂಭ ಆಯೋಜಿಸಲಾಗಿದೆ.
ಸಂಘದ ಉದ್ಘಾಟನೆಯನ್ನು ತೋಂಟದಾರ್ಯ ಮಠದ ಡಾ ತೋಂಟದ ಸಿದ್ಧಲಿಂಗ ಶ್ರೀಗಳು ನೆರವೇರಿಸುವರು. ಗ್ರಾಮೀಣಾಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಚ್.ಕೆ. ಪಾಟೀಲ ವಿಚಾರ ಸಂಕಿರಣ ಉದ್ಘಾಟಿಸುವರು. ಪತ್ರಕರ್ತರ ಸಂಘಕ್ಕೆ ರು. 1 ಲಕ್ಷ ಠೇವಣಿ ಇರಿಸಿ, ಬರುವ ಆದಾಯದಿಂದ ದತ್ತಿ ಪ್ರಶಸ್ತಿ ಕೊಡಲು ಒಪ್ಪಿದ ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ರಾಜ್ಯ ಉಪಾಧ್ಯಕ್ಷ ಮಂಜುನಾಥ ಅಬ್ಬಿಗೇರಿ, ಸಹಕಾರಿ ಪಿತಾಮಹ ಸಿದ್ಧನಗೌಡ ಪಾಟೀಲರ ಮೊಮ್ಮಗ, ಗುತ್ತಿಗೆದಾರ ನಿಂಗನಗೌಡ ಪಾಟೀಲ ಅವರನ್ನು ಸನ್ಮಾನಿಸಲಾಗುವುದು.
ಮೊದಲ ಗೋಷ್ಠಿ: ಅತಿಥಿಗಳಾಗಿ ಕರ್ನಾಟಕ ರಾಜ್ಯ ಸಂವಹನ ಮತ್ತು ಪತ್ರಿಕೋದ್ಯಮ ಶಿಕ್ಷಕರ ಸಂಘದ ರಾಜ್ಯಾಧ್ಯಕ್ಷ ಡಾ. ಬಿ.ಕೆ. ರವಿ, ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ರಾಜ್ಯಾಧ್ಯಕ್ಷ ಬಿ. ನಾರಾಯಣ ಆಗಮಿಸುವರು. ಜಿಲ್ಲಾ ಸಂಘದ ಅಧ್ಯಕ್ಷ ಎಂ. ಮಂಜುನಾಥ ಬಮ್ಮನಕಟ್ಟಿ ಅಧ್ಯಕ್ಷತೆ ವಹಿಸುವರು. ಮಧ್ಯಾಹ್ನ 12.30ಕ್ಕೆ ಮೊದಲ ಗೋಷ್ಠಿ ನಡೆಯಲಿದ್ದು ಆರ್. ಮೋಹನ್ ನಾಗಮ್ಮನವರ ಅಧ್ಯಕ್ಷತೆ ವಹಿಸುವರು. ಮುದ್ರಣ ಮಾಧ್ಯಮ ಸಾಮಾಜಿಕ ಹೊಣೆಗಾರಿಕೆ ಕುರಿತು ಕಾರ್ಯಾಗಾರದಲ್ಲಿ ವಿಷಯ ಮಂಡನೆಯಾಗಲಿದ್ದು, ಬಿಜಾಪುರ ಮಹಿಳಾ ವಿವಿ ಪತ್ರಿಕೋದ್ಯಮ ವಿಭಾಗದ ಮುಖ್ಯಸ್ಥ ಡಾ. ಓಂಕಾರ ಕಾಕಡೆ, ಧಾರವಾಡ ಅಂಜುಮನ್ ಡಿಗ್ರಿ ಕಾಲೇಜು ಪತ್ರಿಕೋದ್ಯಮ ವಿಭಾಗದ ಮುಖ್ಯಸ್ಥ ನಾಗರಾಜ ಹಳ್ಳಿಯವರ, ಬೆಂಗಳೂರು ಸರ್ಕಾರಿ ಕಾಲೇಜು ಪತ್ರಿಕೋದ್ಯಮ ವಿಭಾಗ ಮುಖ್ಯಸ್ಥ ಡಿ. ಮಹೇಶ ವಿಷಯ ಮಂಡಿಸುವರು. ನಂತರ ಮಧ್ಯಾಹ್ನ 3.30ಕ್ಕೆ 2ನೇ ಗೋಷ್ಠಿಯಲ್ಲಿ ವಿದ್ಯುನ್ಮಾನ ಮಾಧ್ಯಮ ಹಾಗೂ ಸಾಮಾಜಿಕ ಹೊಣೆಗಾರಿಕೆ ಕುರಿತ ಕಾರ್ಯಾಗಾರದ ಅಧ್ಯಕ್ಷತೆಯನ್ನು ಕರ್ನಾಟಕ ರಾಜ್ಯ ಸಂವಹನ ಮತ್ತು ಪತ್ರಿಕೋದ್ಯಮ ಶಿಕ್ಷಕರ ಸಂಘದ ರಾಜ್ಯಾಧ್ಯಕ್ಷ ಡಾ. ಬಿ.ಕೆ. ರವಿ ವಹಿಸುವರು. ಧಾರವಾಡ ಕವಿವಿ ಪತ್ರಿಕೋದ್ಯಮ ವಿಭಾಗದ ಮುಖ್ಯಸ್ಥ ಡಾ. ಗಂಗಾಧರಪ್ಪ, ಕರ್ನಾಟಕ ರಾಜ್ಯ ಸಂವಹನ ಮತ್ತು ಪತ್ರಿಕೋದ್ಯಮ ಶಿಕ್ಷಕರ ಸಂಘದ ಖಜಾಂಚಿ ಡಾ. ಎಂ.ಎನ್. ವಾಣಿ, ಮೈಸೂರು ವಿವಿ ಬಹುಮಾಧ್ಯಮ ಸಂಶೋಧನಾ ವಿಭಾಗದ ನಿರ್ಮಾಪಕ ಶ್ರೀಕಂಠಾಚಾರ್ ಹಾಗೂ ಶಿವಮೊಗ್ಗ ಸಹ್ಯಾದ್ರಿ ಕಾಲೇಜು ಸಹಾಯಕ ಪ್ರಾಧ್ಯಾಪಕ ಮಹಾದೇವಸ್ವಾಮಿ ವಿಷಯ ಮಂಡಿಸುವರು.
ಸಂಜೆ 5.30ಕ್ಕೆ ನಡೆವ ಸಮಾರೋಪದ ಅಧ್ಯಕ್ಷತೆಯನ್ನು ಜಿಲ್ಲಾ ಸಂಘದ ಅಧ್ಯಕ್ಷ ಎಂ. ಮಂಜುನಾಥ ಬಮ್ಮನಕಟ್ಟಿ ವಹಿಸುವರು. ಎಚ್.ಕೆ.ಇ.ಎಸ್. ವೀರೇಂದ್ರ ಪಾಟೀಲ, ಕಾಲೇಜು ಪತ್ರಿಕೋದ್ಯಮ ವಿಭಾಗ ಮುಖ್ಯಸ್ಥ ಡಾ. ಕೆ.ಜಿ. ಹಾಲಸ್ವಾಮಿ ಸಮಾರೋಪ ನುಡಿ ಹೇಳುವರು. ಜಿಲ್ಲಾಧಿಕಾರಿ ಎನ್.ಎಸ್. ಪ್ರಸನ್ನಕುಮಾರ, ಜಿಪಂ ಸಿಇಒ ವೀರಣ್ಣ ತುರುಮರಿ, ಎಸ್ಪಿ ಡಾ.ಶರಣಪ್ಪ ಎಸ್.ಡಿ., ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ರಾಜ್ಯ ಉಪಾಧ್ಯಕ್ಷ ಮಂಜುನಾಥ ಬಸಪ್ಪ ಅಬ್ಬಿಗೇರಿ ಅತಿಥಿಗಳಾಗಿ ಪಾಲ್ಗೊಳ್ಳುವರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

