ಸಮಗ್ರ ಅಭಿವೃದ್ಧಿಗೆ ಬದ್ಧ: ಘೋರ್ಪಡೆ
ಗಜೇಂದ್ರಗಡ: ಸ್ಥಳೀಯ ಆಡಳಿತದಲ್ಲಿ ವಿರೋಧ ಪಕ್ಷ ಸದಸ್ಯರ ಜವಾಬ್ದಾರಿ ಅತ್ಯಂತ ಪ್ರಾಮುಖ್ಯವಾದದ್ದು, ಈ ನಿಟ್ಟಿನಲ್ಲಿ ಪಟ್ಟಣದ ಸರ್ವತೋಮುಖ ಅಭಿವೃದ್ಧಿಗಾಗಿ ಆಡಳಿತ ಪಕ್ಷಕ್ಕೆ ಸಂಪೂರ್ಣ ಸಹಕಾರ ನೀಡಿ ಮಾದರಿ ಆಡಳಿತಕ್ಕೆ ಮುಂದಾಗುತ್ತೇವೆ ಎಂದು ವಿಪಕ್ಷ ನಾಯಕ ಶಿವರಾಜ ಘೋರ್ಪಡೆ ಹೇಳಿದರು. ಪುರಸಭೆಯ ಕಾರ್ಯಾಲಯದಲ್ಲಿ ಸೋಮವಾರ ತಮ್ಮ ಕೊಠಡಿ ಪೂಜೆ ನೆರವೇರಿಸಿ ಬಳಿಕ ಸಭಾ ಭವನದಲ್ಲಿ ಸದಸ್ಯರನ್ನು ಉದ್ದೇಶಿಸಿ ಮಾತನಾಡಿದರು. ಸಾರ್ವಜನಿಕರು ತಮ್ಮ ಕೆಲಸ ಕಾರ್ಯಗಳಿಗೆ ಪುರಸಭೆ ಕಚೇರಿಗೆ ಪದೇ ಪದೇ ಅಲೆದಾಡುವುದನ್ನು ತಪ್ಪಿಸಿ ಅಧಿಕಾರಿಗಳು ನಿಷ್ಪಕ್ಷಪಾತದಿಂದ ಕರ್ತವ್ಯ ನಿರ್ವಹಿಸಬೇಕು. ಜತೆಗೆ ಪುರಸಭೆ ಆಡಳಿತಕ್ಕೆ ಸಹಕಾರ ನೀಡಬೇಕು. ಅಲ್ಲದೆ, ಆಡಳಿತ ಪಕ್ಷದವರು ಪಕ್ಷ ಭೇದ ಮರೆತು ಎಲ್ಲ ಪಕ್ಷದ ಸದಸ್ಯರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಸರ್ಕಾರದ ಅನುದಾನ ಅರ್ಹ ಫಲಾನುಭವಿಗಳಿಗೆ ತಲುಪಿಸಿ ಪಟ್ಟಣದ ಅಭಿವೃದ್ಧಿಗಾಗಿ ಶ್ರಮಿಸೋಣ ಎಂದರು. ಪುರಸಭೆ ಸದಸ್ಯ ಎಂ.ಎಸ್. ಹಡಪದ ಮಾತನಾಡಿ, ಪಟ್ಟಣದ ಎಲ್ಲ ಬಡಾವಣೆಗಳ ಸರ್ವಾಂಗೀಣ ಪ್ರಗತಿಗೆ ಜನ ಮೆಚ್ಚುವಂತೆ ಆಡಳಿತ ನಡೆಸುವ ನಿಟ್ಟಿನಲ್ಲಿ ಸರ್ವ ಸದಸ್ಯರು ಪಣತೊಡುವ ಅಗತ್ಯವಿದೆ. ಈ ದಿಸೆಯಲ್ಲಿ ಅಧಿಕಾರಿಗಳು ಹಾಗೂ ಸಾರ್ವಜನಿಕರು ಸಹಕರಿಸಬೇಕು ಎಂದರು. ಪುರಸಭೆ ಸದಸ್ಯೆ ಶಾರದಾ ರಾಠೋಡ, ಸುಜಾತಾ ಚುಂಚಾ, ಮುಕ್ತುಂಬಿ ಹಣಗಿ, ಶಾರವ್ವ ತಳವಾರ, ಶ್ರೀಕಾಂತ ಅವಧೂತ, ತಾನಾಜಿರಾವ್ ಸಿಂಧೆ, ಚಂಬಣ್ಣ ಚವಡಿ, ಶ್ರೀಧರ ಗಂಜಿಗೌಡ್ರ, ಮೋಹನಸಾ ರಾಯಬಾಗಿ, ಮುರ್ತುಜಾ ಡಾಲಾಯತ್, ಮಾರುತಿ ಕಲ್ಲೋಡ್ಡರ, ಹುವಾಜಿ ಚಂದೂಕರ, ಹಸನ ತಟಗಾರ, ರವಿ ಗಡೇದವರ, ದತ್ತು ಬಾಕಳೆ, ಭೀಮಶಿ ತಳವಾರ, ಬಸವರಾಜ ಚನ್ನಿ, ಪರಶುರಾಮ ಕಲಾಲ, ಪ್ರಶಾಂತ ರಾಠೋಡ, ಉಮೇಶ ರಾಠೋಡ, ಶ್ರೀಧರ ಚುಂಚಾ, ಷಣ್ಮುಕಪ್ಪ ನಿಡಗುಂದಿ, ಪ್ರೊ. ಎಫ್.ಎಸ್. ಕರಿದುರಗನವರ, ಕೊಟ್ರೇಶ ಚಿಲಕಾ ಮುಂತಾದವರು ಉಪಸ್ಥಿತರಿದ್ದರು.
--
ಪರಿಸರ ರಕ್ಷಿಸುವುದು ಅಗತ್ಯ: ಹೊಸಳ್ಳಿ
ಗದಗ: ಪ್ರತಿಯೊಬ್ಬರೂ ಗಿಡ-ಮರಗಳನ್ನು ಬೆಳೆಸುವಲ್ಲಿ ಮುಂದಾಗಬೇಕು ಎಂದು ತಾಪಂ ಸದಸ್ಯ ಪ್ರಹ್ಲಾದ ಹೊಸಳ್ಳಿ ಹೇಳಿದರು. ಅವರು ಈಚೆಗೆ ತಾಲೂಕಿನ ಅಡವಿಸೋಮಾಪುರ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಆವರಣದಲ್ಲಿ ಗದುಗಿನ ಕನಕದಾಸ ಶಿಕ್ಷಣ ಸಮಿತಿಯ ಕೆವಿಎಸ್ಆರ್ ಸಂಯುಕ್ತ ಪಪೂ ಮಹಾವಿದ್ಯಾಲಯದ ವತಿಯಿಂದ ನಡೆಯುತ್ತಿರುವ ರಾಷ್ಟ್ರೀಯ ಸೇವಾ ಯೋಜನೆ ವಿಶೇಷ ಶಿಬಿರದಲ್ಲಿ ವನಮಹೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು. ನಮ್ಮ ಸುತ್ತಲಿನ ಪರಿಸರ ಹಾಗೂ ವಾತಾವರಣ ಉತ್ತಮವಾಗಿರಲು ಹೆಚ್ಚೆಚ್ಚು ಗಿಡ-ಮರಗಳನ್ನು ಬೆಳೆಸಬೇಕು ಎಂದರು. ಶಿಬಿರಾಧಿಕಾರಿ ವಿ.ಎಸ್. ದಲಾಲಿ, ವಿ.ಎನ್. ಮರೆಗುದ್ದಿ ಸೇರಿದಂತೆ ಕಾಲೇಜಿನ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

