ಗದಗ

ಹೆದ್ದಾರಿ ತಡೆದ 450 ರೈತರ ಬಂಧನ, ಬಿಡುಗಡೆ

Published On :

ರಾಣಿಬೆನ್ನೂರು: ಕಬ್ಬಿಗೆ ಯೋಗ್ಯ ಬೆಲೆ ನೀಡಬೇಕು ಹಾಗೂ ಕಳಪೆ ಬಿತ್ತನೆ ಬೀಜ ವಿತರಿಸಿದ ಮಹಿಕೋ ಕಂಪನಿ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿ ತಾಲೂಕಿನ ಮಾಕನೂರು ಗ್ರಾಮದ ಹತ್ತಿರ ರಾಷ್ಟ್ರೀಯ ಹೆದ್ದಾರಿ ತಡೆ ನಡೆಸಿದ 450 ರೈತರನ್ನು ಪೊಲೀಸರು ಮಂಗಳವಾರ ಬಂಧಿಸಿ, ಬಳಿಕ ಬಿಡುಗಡೆ ಮಾಡಿದರು.
ಕಬ್ಬಿಗೆ ಯೋಗ್ಯ ಬೆಲೆ ನೀಡದೆ, ಸಕ್ಕರೆ ಬೆಲೆಯನ್ನು ಗಗನಕ್ಕೇರಿಸಿ ಹಾವೇರಿ ಜಿಲ್ಲೆಯ ಸಂಗೂರು ಹಾಗೂ ದಾವಣಗೆರೆ ಜಿಲ್ಲೆಯ ಹಳೆಬಾತಿ ಗ್ರಾಮದಲ್ಲಿರುವ ಕಬ್ಬು ನುರಿಸುವ ಕಾರ್ಖಾನೆಗಳು ರೈತರಿಗೆ ಮೋಸ ಮಾಡುತ್ತಿವೆ. ಮಹಿಕೋ ಕಂಪನಿ, ಬಿಟಿ ತಳಿಯ ಕಳಪೆ ಹತ್ತಿ ಬೀಜಗಳನ್ನು ವಿತರಿಸಿದೆ. ಇದರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಹಾವೇರಿ ಹಾಗೂ ದಾವಣಗೆರೆ ಜಿಲ್ಲೆಗಳ ರೈತರು ಆಗ್ರಹಿಸಿದರು.
ಉತ್ತರ ಕರ್ನಾಟಕದ ಹೆಬ್ಬಾಗಿಲು ಎಂದು ಕರೆಯಲಾಗುವ ತಾಲೂಕಿನ ಕುಮಾರಪಟ್ಟಣಂ ಪೊಲೀಸ್ ಠಾಣೆ ವ್ಯಾಪ್ತಿಗೆ ಒಳಪಡುವ ಮಾಕನೂರು ಗ್ರಾಮದ ಪಕ್ಕದಲ್ಲಿ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಮಂಗಳವಾರ ಜಮಾಯಿಸಿದ ಹಾವೇರಿ ಜಿಲ್ಲೆಯ ರಾಣಿಬೆನ್ನೂರು, ಹಿರೇಕೆರೂರು, ಹಾನಗಲ್ಲ, ಬ್ಯಾಡಗಿ ತಾಲೂಕಿನಿಂದ ಆಗಮಿಸಿದ್ದ ಹತ್ತಿ ಬೆಳೆಗಾರರು ಮತ್ತು ದಾವಣಗೆರೆ ಜಿಲ್ಲೆಯ ಹರಿಹರ, ಮಲೆಬೆನ್ನೂರು, ಕುಂಬಳೂರು, ಕೊಂಡಜ್ಜಿ, ಹೊಳೆಸಿರಿಗೇರಿ, ರಾಜನಹಳ್ಳಿ, ನಂದಿಗಾವಿ ಗ್ರಾಮಗಳ ಕಬ್ಬು ಬೆಳೆಗಾರರು ಹೆದ್ದಾರಿ ತಡೆ ನಡೆಸಿದರು.
ಹಾವೇರಿ ಜಿಲ್ಲೆಯ ಸಂಗೂರು, ದಾವಣಗೆರೆ ಜಿಲ್ಲೆಯ ಹಳೆಬಾತಿ (ಕುಂದುವಾಡ) ಸಕ್ಕರೆ ಕಾರ್ಖಾನೆ ಹಾಗೂ ಕಮದೋಡ ಗ್ರಾಮದ ಹತ್ತಿರವಿರುವ ಮಹಿಕೋ ಬೀಜ ಕಂಪನಿಯ ಅಧಿಕಾರಿಗಳ ಜತೆ ದೂರವಾಣಿಯಲ್ಲಿ ಮಾತನಾಡಿ, ಸ್ಥಳಕ್ಕೆ ಬಂದು ರೈತರ ಸಮಸ್ಯೆಗೆ ಉತ್ತರಿಸಬೇಕು ಎಂದು ಅಧಿಕಾರಿಗಳಿಗೆ ತಿಳಿಸಿದರು.
ಇದಕ್ಕೆ ಒಪ್ಪಿದ ಸಕ್ಕರೆ ಕಾರ್ಖಾನೆ ಹಾಗೂ ಬೀಜ ಕಂಪನಿ ಅಧಿಕಾರಿಗಳು ಎರಡು ತಾಸು ಕಳೆದರೂ ಸ್ಥಳಕ್ಕೆ ಬಾರದೇ ಇದ್ದಾಗ ತಾಳ್ಮೆ ಕಳೆದುಕೊಂಡ ರೈತರು ಘೋಷಣೆ ಕೂಗಲಾರಂಭಿಸಿದರು. ಆಗ 450 ರೈತರನ್ನು ಬಂಧಿಸಿದ ಪೊಲೀಸರು, ಕುಮಾರಪಟ್ಟಣಂ ಪೊಲೀಸ್ ಠಾಣೆಗೆ ಕರೆದೊಯ್ದು ಬಿಡುಗಡೆಗೊಳಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.