ಗದಗ

ಅದ್ಧೂರಿಯಿಂದ ರಾಜ್ಯೋತ್ಸವ ಆಚರಣೆ: ಬಂಡಿವಡ್ಡರ

Published On :

ನರೇಗಲ್ಲ: ಸ್ಥಳೀಯ ಜಯಕರ್ನಾಟಕ ಸಂಘಟನೆ ವತಿಯಿಂದ ನವೆಂಬರ್ 1ರಂದು ನರೇಗಲ್ಲದಲ್ಲಿ ರಾಜ್ಯೋತ್ಸವವನ್ನು ಅದ್ದೂರಿಯಿಂದ ಆಚರಿಸಲಾಗುವುದೆಂದು ಸಂಘಟನೆಯ ನರೇಗಲ್ಲ ಘಟಕದ ಅಧ್ಯಕ್ಷ ಹುಲಗಪ್ಪ ಬಂಡಿವಡ್ಡರ ಹೇಳಿದರು. ಇತ್ತೀಚಿಗೆ ಸಂಘಟನೆಯ ಕಾರ್ಯಾಲಯದಲ್ಲಿ ರಾಜ್ಯೋತ್ಸವದ ಆಚರಣೆಯ ಹಿನ್ನೆಲೆಯಲ್ಲಿ ಕರೆದಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು. ಅಂದು ಮಧ್ಯಾಹ್ನ 2 ಗಂಟೆಗೆ ಪಟ್ಟಣದ ಪ್ರಮುಖ ಬೀದಿಗಳಲ್ಲಿ ತಾಯಿ ಭುವನೇಶ್ವರಿಯ ಭವ್ಯ ಮೆರವಣಿಗೆ ನಡೆಯಲಿದ್ದು, ಶಾಂತದುರ್ಗ ಹೆಜ್ಜೆ ಮೇಳ ಮೆರವಣಿಗೆಯ ಪ್ರಮುಖ ಆಕರ್ಷಣೆ ಆಗಲಿದೆ. ಸಂಜೆ 4ಕ್ಕೆ ಗಾಂಧಿ ಭವನದಲ್ಲಿ ನಡಯುವ ಸಮಾರಂಭದಲ್ಲಿ ಜಯ ಕರ್ನಾಟಕ ಸಂಘಟನೆಯ ವಾರ್ಷಿಕೋತ್ಸವ ಮತ್ತು ಪಪಂಗೆ ನೂತನವಾಗಿ ಆಯ್ಕೆಯಾದ ಪಪಂ ಸದಸ್ಯರುಗಳಿಗೆ ಸನ್ಮಾನ ಜರುಗಲಿದೆ. ರೋಣ ಗುಲಗಂಜಿಮಠದ ಗುರುಪಾದ ಶ್ರೀಗಳು, ಹಿರೇಮಠದ ಮಲ್ಲಿಕಾರ್ಜುನ ಶ್ರೀಗಳು, ನಿಡಗುಂದಿಕೊಪ್ಪದ ಶಿವಬಸವ ಶ್ರೀಗಳು ಮತ್ತು ದರಗಾದ ರೆಹಮಾನ್‌ಶಾವಲಿ ಅಜ್ಜನವರು ಸಾನ್ನಿಧ್ಯ ವಹಿಸುವರು. ಹಾವೇರಿ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಉಪಾಧ್ಯಕ್ಷ ಮಿಥುನ್ ಪಾಟೀಲ ಅಧ್ಯಕ್ಷತೆ ವಹಿಸಲಿದ್ದು, ಸಂಘಟನೆಯ ಜಿಲ್ಲಾ ಗೌರವಾಧ್ಯಕ್ಷ ಈಶಪ್ಪ ನಾಯ್ಕರ, ಜಿಲ್ಲಾ ಅಧ್ಯಕ್ಷ ಚಂದ್ರಕಾಂತ ಚೌಹಾಣ್, ಅಬಕಾರಿ ಪಿಎಸ್‌ಐ ಆನಂದ ಮಠಪತಿ, ನರೇಗಲ್ಲ ಪಿಎಸ್‌ಐ ಎನ್.ವಿ. ಬೇಲೂರ, ಮುಖ್ಯಾಧಿಕಾರಿ ಐ.ಕೆ. ಗುಡದಾರಿ, ಉಮೇಶ ಸಂಗನಾಳಮಠ, ತಾಲೂಕು ಅಧ್ಯಕ್ಷ ಸುರೇಶಗೌಡ ಪಾಟೀಲ ಅತಿಥಿಗಳಾಗಿ ಪಾಲ್ಗೊಳ್ಳಲಿದ್ದಾರೆ. ರವೀಂದ್ರನಾಥ ದೊಡ್ಡಮೇಟಿ, ರೋಣ ತಾಲೂಕು ಕಸಾಪ ಅಧ್ಯಕ್ಷ ಡಾ. ಶಿವರಾಜ ಗುರಿಕಾರ ಮತ್ತು ಅರುಣ ಕುಲಕರ್ಣಿ ವಿಶೇಷ ಉಪನ್ಯಾಸ ನೀಡಲಿದ್ದಾರೆ. ರಾಜಶ್ರೀ ಕುಲಕರ್ಣಿ ಸಂಗೀತ ಕಾರ್ಯಕ್ರಮವನ್ನು ನಡೆಸಿಕೊಡುವರು ಎಂದರು.


Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.