ಗದಗ

ರಾಜ್ಯೋತ್ಸವ ಅದ್ಧೂರಿ ಆಚರಣೆಗೆ ಸಜ್ಜು

Published On :

ಗದಗ: ನ. 1 ರಂದು ಬೆಟಗೇರಿಯಲ್ಲಿ 58ನೇ ಕನ್ನಡ ರಾಜ್ಯೋತ್ಸವವನ್ನು ಅದ್ಧೂರಿಯಾಗಿ ಆಚರಿಸಲು ಸಿದ್ಧತೆ ಕೈಗೊಳ್ಳಲಾಗಿದೆ ಎಂದು ಕರ್ನಾಟಕ ರಾಜ್ಯೋತ್ಸವ ಉಸ್ತುವಾರಿ ಕಮಿಟಿ ಅಧ್ಯಕ್ಷ ಗಣೇಶಸಿಂಗ್ ಬ್ಯಾಳಿ ಹೇಳಿದರು. ಅವರು ಬುಧವಾರ ಸಂಜೆ ಬೆಟಗೇರಿಯ ತಮ್ಮ ನಿವಾಸದಲ್ಲಿ ಕರೆದ ರಾಜ್ಯೋತ್ಸವ ಸಮಿತಿಯ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಬೆಟಗೇರಿ ಭಾಗದಲ್ಲಿ ಹಲವು ವರ್ಷಗಳಿಂದಲೂ ಸಂಭ್ರಮದ ರಾಜ್ಯೋತ್ಸವ ಆಚರಿಸಿಕೊಂಡು ಬರಲಾಗುತ್ತಿದ್ದು, ಇನ್ನೂ ಹೆಚ್ಚಿನ ರೀತಿಯಲ್ಲಿ ರಾಜ್ಯೋತ್ಸವ ಆಚರಿಸುವ ಉದ್ದೇಶದಿಂದ ಸೂಕ್ತ ಅನುದಾನಕ್ಕಾಗಿ ಜಿಲ್ಲಾಧಿಕಾರಿಗೆ ಈಗಾಗಲೇ ಮನವಿ ಸಲ್ಲಿಸಲಾಗಿದೆ. ಅಲ್ಲದೇ ಬೆಟಗೇರಿ ಭಾಗದ ಶಾಲಾ ಶಿಕ್ಷಕರಿಗೆ ಹಾಗೂ ವಿದ್ಯಾರ್ಥಿಗಳಿಂದ ಜತೆಗೆ ವಿವಿಧ ಸಂಘ-ಸಂಸ್ಥೆಗಳಿಂದ ಹಲವಾರು ರಾಷ್ಟ್ರನಾಯಕರ ರೂಪಕಗಳೊಂದಿಗೆ ಮೆರವಣಿಗೆಯಲ್ಲಿ ಭಾಗವಹಿಸುವುದಕ್ಕೆ ಮನವಿ ಮಾಡಲಾಗಿದ್ದು, ನ. 1 ರಂದು ಜರುಗುವ ರಾಜ್ಯೋತ್ಸವನ್ನು ಯಶಸ್ವಿಗೊಳಿಸಲು ಎಲ್ಲರೂ ಸಹಕರಿಸುವಂತೆ ಕೋರಿದರು.
ಈ ಸಂದರ್ಭದಲ್ಲಿ ನಗರಸಭೆ ಸದಸ್ಯ ರಾಘವೇಂದ್ರ ಯಳವತ್ತಿ, ನಾಗಲಿಂಗ ಐಲಿ ಇವರು ನಗರಸಭೆಯಿಂದ ಅನುದಾನ ಹಾಗೂ ಮೆರವಣಿಗೆಗೆ ಬೇಕಾದ ಸೌಲಭ್ಯಗಳನ್ನು ನಗರ ಸಭೆಯ ಅಧಿಕಾರಿಗಳಿಂದ ಒದಗಿಸುವ ಭರವಸೆ ನೀಡಿದರು. ಈ ಸಂದರ್ಭದಲ್ಲಿ ಶ್ರೀನಿವಾಸ ಹುಬ್ಬಳ್ಳಿ, ಬಾಗಡೆ ಗುರುಗಳು, ಶಿವರಾಜ ಹಿರೇಮನಿ ಪಾಟೀಲ್, ಮುದುಗಲ್, ಮೈಲಾರಿ ತುರಕಾಣಿ, ಕೃಷ್ಣಾ ಲಕ್ಕುಂಡಿ, ಸಿದ್ದು ಪಿಂಡಕುರ, ಕೃಷ್ಣಾ ರಾಯಬಾಗಿ, ಯಲಪ್ಪ ಕಾಂಬಳೇಕರ ಮುಂತಾದವರು ಉಪಸ್ಥಿತರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.