ಗದಗ

ಕ್ರೀಡಾಪಟುಗಳು ಸೋಲು ಸವಾಲಾಗಿ ಸ್ವೀಕರಿಸಿ

Published On :

ಕನ್ನಡಪ್ರಭ ವಾರ್ತೆ, ಗದಗ, ಸೆ. 1
ಸೋಲನ್ನು ಸವಾಲಾಗಿ ಸ್ವೀಕರಿಸಿ ಗೆಲುವಿನತ್ತ ಸಾಗುವ ಛಲ ಹಾಗೂ ಕ್ರೀಡಾ ಮನೋಭಾವನೆಯನ್ನು ಬೆಳೆಸಿಕೊಳ್ಳುವಂತೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಶರಣಪ್ಪ ಎಸ್.ಡಿ. ಹೇಳಿದರು.
ಅವರು ಭಾನುವಾರ ಸಂಜೆ ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಒಲಂಪಿಕ್ ಸ್ಪೋರ್ಟ್ಸ್ ಕ್ಲಬ್ ಗದಗ, ಗದಗ ಜಿಲ್ಲಾ ಅಮೆಚೂರ ಸೈಕ್ಲಿಂಗ್ ಅಸೋಶಿಯೇಶನ್ ಇವರ ಆಶ್ರಯದಲ್ಲಿ ಆಯೋಜಿಸಲಾಗಿದ್ದ 8ನೇ ರಾಜ್ಯಮಟ್ಟದ ರೋಡ್ ಸೈಕ್ಲಿಂಗ್ ಸ್ಪರ್ಧೆಯ ಸಮಾರೋಪ ಸಮಾರಂಭದಲ್ಲಿ ಪ್ರಶಸ್ತಿ ವಿತರಿಸಿ ಮಾತನಾಡಿದರು.
ಕ್ರೀಡೆ ದೇಹ ಸದೃಢತೆಗೆ ಸಹಕಾರಿಯಾಗಿದ್ದು, 2 ದಿನಗಳಿಂದ ನಗರದಲ್ಲಿ ಜರುಗಿದ ಪಂದ್ಯಾವಳಿಯಲ್ಲಿ ಪಾಲ್ಗೊಂಡು ಪಡೆದ ಅನುಭವಗಳು ರಾಜ್ಯ ಮತ್ತು ರಾಷ್ಟ್ರಮಟ್ಟದ ಕ್ರೀಡೆಗೆ ಸದ್ಬಳಕೆಯಾಗಲಿ. ಕ್ರೀಡಾಪಟುಗಳು ತಮ್ಮಲ್ಲಿರುವ ಪ್ರತಿಭೆಯನ್ನು ಸದುಪಯೋಗಪಡಿಸಿಕೊಳ್ಳಲು ದೊರೆತ ವೇದಿಕೆ ಮುಂದಿನ ಕ್ರೀಡಾ ಭವಿಷ್ಯಕ್ಕೆ ನಾಂದಿಯಾಗಲಿದೆ ಎಂದರು.
ಅಂತರಾಷ್ಟ್ರೀಯ ಸೈಕ್ಲಿಂಗ್ ತರಬೇತುದಾರ ಎಸ್.ಎಂ. ಕುರಣಿ ಮಾತನಾಡಿ, ಶಿಸ್ತು ಮತ್ತು ಸಂಯಮ ಕ್ರೀಡಾಪಟುವಿನ ಯಶಸ್ಸಿನ ಮೆಟ್ಟಿಲಾಗಿದ್ದು, ಹರಿಯಾಣಾ ರಾಜ್ಯದ ಕುರುಕ್ಷೇತ್ರದಲ್ಲಿ ಅಕ್ಟೋಬರ್‌ನಲ್ಲಿ ಜರುಗುವ 18 ನೇ ರಾಷ್ಟ್ರಮಟ್ಟದ ರೋಡ್ ಸೈಕ್ಲಿಂಗ್ ಸ್ಪರ್ಧೆಗೆ ಆಯ್ಕೆಯಾಗಿರುವ ರಾಜ್ಯ ತಂಡದ ಪ್ರತಿನಿಧಿಗಳು ಉತ್ತಮ ಪ್ರತಿಭೆ ತೋರಿಸುವ ಮೂಲಕ ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಹೆಸರು ಬರಲು ಶ್ರಮಿಸಲಿ ಎಂದರು. ಡಿವೈಎಸ್‌ಪಿ ಅನಿತಾ ಹದ್ದಣ್ಣವರ, ವಿಜಯಕುಮಾರ ಗಡ್ಡಿ, ಅಂತಾರಾಷ್ಟ್ರೀಯ ಕುಸ್ತಿಪಟು ಪ್ರೇಮಾ ಹುಚ್ಚಣ್ಣವರ, ರಾಜ್ಯ ಸೈಕ್ಲಿಂಗ್ ಸಂಸ್ಥೆಯ ಉಪಾಧ್ಯಕ್ಷ ಜಿ.ವಿ. ಪಾಟೀಲ, ಐಡಿಯಾ ಕಂಪನಿಯ ವಲಯ ವ್ಯವಸ್ಥಾಪಕ ಪ್ರಶಾಂತ ಪಾಟೀಲ, ಅಂತಾರಾಷ್ಟ್ರೀಯ ತರಬೇತುದಾರ ರಾಜೇಸಾಬ ಅತ್ತಾರ ಮುಂತಾದವರು ಉಪಸ್ಥಿತರಿದ್ದರು. ಒಲಂಪಿಕ್ ಸ್ಪೋರ್ಟ್ಸ್ ಕ್ಲಬ್‌ನ ಅಧ್ಯಕ್ಷ ಡಾ. ಗುರುಪ್ರಸಾದ ಸ್ವಾಗತಿಸಿದರು. ಬಿ.ಪಿ. ಜೈನರ್ ನಿರೂಪಿಸಿದರು. ವೈ.ಕೆ. ಚೌಡಾಪುರ ವಂದಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.