ಕ್ರೀಡೆ ವ್ಯಕ್ತಿತ್ವ ವಿಕಸನಕ್ಕೆ ಸಹಕಾರಿ
ಗಜೇಂದ್ರಗಡ: ಕ್ರೀಡೆಗಳು ವ್ಯಕ್ತಿತ್ವ ವಿಕಸನಕ್ಕೆ ರಹದಾರಿಯಾಗಿವೆ. ಈ ನಿಟ್ಟಿನಲ್ಲಿ ಐತಿಹಾಸಿಕ ಹಿನ್ನೆಲೆಯುಳ್ಳ ಚದುರಂಗದಾಟ ಅತ್ಯಂತ ಮಹತ್ವ ಪಡೆದುಕೊಂಡಿದೆ ಎಂದು ಮುಖ್ಯೋಪಾಧ್ಯಾಯ ಎಂ.ಡಿ. ಸರಕಾವಸ ಹೇಳಿದರು.
ಅವರು ಈಚೆಗೆ ಸ್ಥಳೀಯ ಸರ್ಕಾರಿ ಉರ್ದು ಪ್ರೌಢ ಶಾಲೆಯಲ್ಲಿ ಖ್ಯಾತ ಕ್ರೀಡಾಪಟು ಧ್ಯಾನ್ಚಂದ ಜನ್ಮದಿನದ ಪ್ರಯುಕ್ತ ಮಹೇಂದ್ರಸಿಂಗ್ ಧೋನಿ ಕ್ರೀಡಾ ಸಂಘದಿಂದ ನಡೆದ ರಾಷ್ಟ್ರೀಯ ಕ್ರೀಡಾ ದಿನಾಚರಣೆ ಯಲ್ಲಿ ಮಾತನಾಡಿದರು. ಇತ್ತೀಚೆಗೆ ಕ್ರಿಕೆಟ್ ವಿಶ್ವದ ಅತ್ಯಂತ ಯಶಸ್ವಿ ಕ್ರೀಡೆಯಾಗಿದೆ. ಯುವಕರು ಕ್ರಿಕೆಟ್ ಜತೆಗೆ ಗ್ರಾಮೀಣ ಸೊಗಡಿನ ಕಬಡ್ಡಿ, ಖೋಖೊದಂತಹ ಕ್ರೀಡೆಗಳಲ್ಲಿ ಭಾಗವಹಿಸಿ, ದೇಶಿ ಕ್ರೀಡೆಗಳನ್ನು ಕಲಿತು ವಿದ್ಯಾರ್ಥಿಗಳು ಬೌದ್ಧಿಕ ಶಕ್ತಿ ವೃದ್ಧಿಸಿಕೊಳ್ಳಿ ಎಂದರು. ದೈಹಿಕ ಶಿಕ್ಷಕ ಎಸ್.ವಿ. ಮಠದ ಮಾತನಾಡಿ, ವಿದ್ಯಾರ್ಥಿಗಳು ಪಠ್ಯದ ಜತೆಗೆ ಕ್ರೀಡೆಗಳಲ್ಲಿ ಪಾಲ್ಗೊಳ್ಳುವುದರ ಮೂಲಕ ತಮ್ಮಲ್ಲಿರುವ ಕಲಾ ನೈಪುಣ್ಯತೆ ಸಾದರಪಡಿಸಲು ಸಿಕ್ಕ ಅವಕಾಶ ಸದ್ವಿನಿಯೋಗ ಪಡಿಸಿಕೊಳ್ಳಿ ಎಂದರು. 10ನೇ ತರಗತಿ ವಿದ್ಯಾರ್ಥಿಗಳಾದ ನಭಿಸಾಬ ಅಮರಾವತಿ, ಸಭಿಯಾ ಆಲೂರ, ಫರೀದಾ ನಂದಿಹಾಳ, ಸಂಗಡಿಗರು ಆಡಿದ ಚದುರಂಗದಾಟ ಸಮಾರಂಭದ ಗಮನ ಸೆಳೆಯಿತು. ಎಸ್.ಎಂ. ಮತ್ತೆ, ಎ.ಎಂ. ಕೊಪ್ಪಳ, ಬಿ.ಎ. ಡಾಲಾಯತ್, ಎಸ್.ಎಂ. ಡಂಬಳ ಮುಂತಾದವರು ಉಪಸ್ಥಿತರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

