ಯುವಕರು ಕ್ರೀಡೆಯಲ್ಲಿ ಪಾಲ್ಗೊಳ್ಳಿ
ಕನ್ನಡಪ್ರಭ ವಾರ್ತೆ, ಗದಗ, ಸೆ.2
ಗ್ರಾಮೀಣ ಯುವಕರು ಸ್ಥಳೀಯ ಮಟ್ಟದಲ್ಲಿ ಯಾವುದಾದರೂ ಒಂದು ಕ್ರೀಡೆಯ ತಂಡವನ್ನು ಕಟ್ಟಿಕೊಂಡು ಆ ತಂಡವು ಜಿಲ್ಲಾ ಮಟ್ಟದಲ್ಲಿ ಇಲ್ಲವೇ ರಾಜ್ಯ ಮಟ್ಟದಲ್ಲಿ ಹೆಸರು ಮಾಡುವಂತಹ ಪ್ರವೃತ್ತಿಯನ್ನು ಬೆಳೆಸಿಕೊಳ್ಳುವುದು ಅವಶ್ಯವಾಗಿದೆ. ಆ ನಿಟ್ಟಿನಲ್ಲಿ ಯುವಕರು ಕಾರ್ಯಪ್ರವೃತ್ತರಾಗಿ ಕ್ರೀಡೆಗಳಲ್ಲಿ ಹೆಚ್ಚು ಭಾಗವಹಿಸಬೇಕು ಎಂದು ಅಂದಾನಯ್ಯ ಕುರ್ತಕೋಟಿಮಠ ಹೇಳಿದರು.
ಅವರು ಸೋಮವಾರ ತಾಲೂಕಿನ ನಾರಾಯಣಪುರ ಗ್ರಾಮದಲ್ಲಿ ಕಲ್ಯಾಣ ಬಸವೇಶ್ವರ ದೇವರ ಜಾತ್ರಾ ನಿಮಿತ್ತವಾಗಿ ಕವಿ ಚಾಮರಸ ಯುವಕ ಮಂಡಳದವರು ಆಯೋಜಿಸಿದ್ದ ವಾಲಿಬಾಲ್ ಪಂದ್ಯಾವಳಿಯನ್ನು ಉದ್ಘಾಟಿಸಿ ಮಾತನಾಡಿದರು.
ಕ್ರೀಡಾಪಟುಗಳು ಕ್ರೀಡೆಯಲ್ಲಿ ಕ್ರೀಡಾ ಮನೋಭಾವನೆಯಿಂದ ಭಾಗವಹಿಸಿ ಸೋಲು ಗೆಲುವನ್ನು ಸಮನಾಗಿ ಸ್ವೀಕರಿಸಬೇಕು. ಗೆದ್ದೆವೆಂದು ಬೀಗದೇ ಕ್ರೀಡೆಯಲ್ಲಿ ಕ್ರೀಡಾಸ್ಫೂರ್ತಿಯನ್ನು ತೋರಿಸಬೇಕು. ಇದರಿಂದ ಕ್ರೀಡಾಪಟುಗಳಲ್ಲಿ ಪರಸ್ಪರ ಪ್ರೀತಿ ಸ್ನೇಹ ಬೆಳೆಯುವುದು. ಸೌಹಾರ್ದ ವಾತಾವರಣ ಮೂಡುವುದು. ಇದರಿಂದ ಸದೃಢ ದೇಶವನ್ನು ಕಟ್ಟಲು ಸಾದ್ಯವಾಗುವುದು. ಕಾರಣ ಗ್ರಾಮೀಣ ಪ್ರದೇಶಗಳಲ್ಲಿ ದೇಶಿಯ ಕ್ರೀಡೆಗಳನ್ನು ಹೆಚ್ಚು ಹೆಚ್ಚು ಆಯೋಜಿಸಬೇಕು. ಇದರಿಂದ ಯುವಕರು ಮಾನಸಿಕ ಹಾಗೂ ಆರೋಗ್ಯವಂತರಾಗಲು ಸಾಧ್ಯ. ಯುವಕರಿಗೆ ಜವಾಬ್ದಾರಿಯನ್ನು ಕೊಟ್ಟರೇ ಅವರು ಉತ್ತಮ ರೀತಿಯಿಂದ ಕ್ರೀಡಾ ಚಟುವಟಿಕೆಗಳನ್ನು ಆಯೋಜಿಸುತ್ತಾರೆ. ಅದಕ್ಕಾಗಿ ಹಿರಿಯುರು ಅವರಿಗೆ ಪ್ರೋತ್ಸಾಹವನ್ನು ನೀಡಬೇಕು. ಇದರಿಂದ ಕ್ರೀಡೆಗಳು ಸಹ ಬೆಳೆಯುವುದು ಅಲ್ಲದೇ ಯುವಕರು ಬೆಳವಣಿಗೆಗೂ ಸಾಧ್ಯವಾಗುವುದು. ಇದರಿಂದ ಯುವಕರು ಉತ್ತಮ ಹವ್ಯಾಸಗಳನ್ನು ಬೆಳೆಸಿಕೊಳ್ಳಬೇಕು. ಅದರಲ್ಲಿಯೂ ಕ್ರೀಡೆ ಹವ್ಯಾಸವನ್ನು ಬೆಳೆಸಿಕೊಂಡರೇ ಇನ್ನೂ ಉತ್ತಮ. ಉತ್ತಮ ಯುವಕರಿಂದ ಸದೃಢ ದೇಶ ನಿರ್ಮಾಣವಾಗಲು ಸಾಧ್ಯ ಎಂದರು.
ಈ ಸಂದರ್ಭದಲ್ಲಿ ವಾಲಿಬಾಲ್ ಕ್ರೀಡಾಪಟುಗಳು ಹಾಗೂ ಗ್ರಾಮಸ್ಥರು ಪಾಲ್ಗೊಂಡಿದ್ದರು. ಸುರೇಶ ಬಡಿಗೇರ ನಿರೂಪಿಸಿ, ವಂದಿಸಿದರು.
ಗ್ರಾಮೀಣ ಪ್ರದೇಶಗಳಲ್ಲಿ ದೇಶಿಯ ಕ್ರೀಡೆಗಳನ್ನು ಹೆಚ್ಚು ಹೆಚ್ಚು ಆಯೋಜಿಸಬೇಕು. ಇದರಿಂದ ಯುವಕರು ಮಾನಸಿಕ ಹಾಗೂ ಆರೋಗ್ಯವಂತರಾಗಲು ಸಾಧ್ಯ.
-ಅಂದಾನಯ್ಯ ಕುರ್ತಕೋಟಿಮಠ
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

