ಗದಗ

ಕ್ರೀಡೆಯಲ್ಲಿ ಗೆಲುವಿನಷ್ಟೇ ಸೋಲು ಸ್ವೀಕರಿಸಿ

Published On :

ಕನ್ನಡಪ್ರಭ ವಾರ್ತೆ, ಗದಗ, ಸೆ. 3
ಕ್ರೀಡೆಯಲ್ಲಿ ಗೆಲುವಿಗೆ ಕೊಟ್ಟಷ್ಟೆ ಮಹತ್ವವನ್ನು ಸೋಲಿಗೆ ಕೊಡಬೇಕು. ಗೆಲುವಿನಷ್ಟೆ, ಸೋಲನ್ನು ಸ್ವೀಕರಿಸಿದಾಗ ಮಾತ್ರ ಪ್ರಾಮಾಣಿಕ ಆಟಗಾರನಾಗಲು ಸಾಧ್ಯವೆಂದು ಡಿವೈಎಸ್‌ಪಿ ವಿ.ವಿ. ಕುಂಬಾರ ಹೇಳಿದರು.
ಅವರು ಮಂಗಳವಾರ ನಗರದ ಕೆ.ವಿ.ಎಸ್.ಆರ್. ಕಾಲೇಜಿನಲ್ಲಿ ಕರ್ನಾಟಕ ವಿಶ್ವವಿದ್ಯಾಲಯ ಧಾರವಾಡ, ಕನಕದಾಸ ಶಿಕ್ಷಣ ಸಮಿತಿಯ ಆಶ್ರಯದಲ್ಲಿ ಹಮ್ಮಿಕೊಂಡ ಕವಿವಿ ಮಟ್ಟದ ಪುರುಷ ಹಾಗೂ ಮಹಿಳೆಯರ ಏಕವಲಯ ಗುಡ್ಡಗಾಡು ಓಟದ ಸ್ಪರ್ಧೆಯ ಚಾಲನಾ ಕಾರ್ಯಕ್ರಮದಲ್ಲಿ ಮಾತನಾಡಿದರು.
ಕ್ರೀಡೆಯಿಂದ ಕ್ರೀಡಾಪಟು ಕೇವಲ ದೈಹಿಕ ಬೆಳವಣಿಗೆಯನ್ನಷ್ಟೆ ಹೊಂದಬಾರದು. ಬದಲಾಗಿ ಮಾನಸಿಕ ಬೆಳವಣಿಗೆಯನ್ನು ಹೊಂದುವ ಮೂಲಕ ಉತ್ತಮ ಚಾರಿತ್ರ್ಯವನ್ನು ಮೈಗೂಡಿಸಿಕೊಳ್ಳಬೇಕು. ಕ್ರೀಡಾಪಟುಗಳು ಉತ್ತಮ, ಆರೋಗ್ಯಕರ ಸ್ಪರ್ಧಾತ್ಮಕ ಮನೋಭಾವನೆಯನ್ನು ಹೊಂದಬೇಕು. ಸತತ ಪರಿಶ್ರಮ, ದೈಹಿಕ ಶ್ರಮದಿಂದ ಮಾತ್ರ ಉತ್ತಮ ಕ್ರೀಡಾಪಟುವಾಗಲು ಸಾಧ್ಯವಾಗುತ್ತದೆ. ಹಾಗಾಗಿ ನಿರಂತರ ಅಭ್ಯಾಸದಲ್ಲಿ ತೊಡಗುವ ಮೂಲಕ ಕ್ರೀಡಾ ಸಾಧನೆಯನ್ನು ಮಾಡಿ ಎಂದು ಶುಭ ಹಾರೈಸಿದರು.
ಅಥ್ಲೆಟಿಕ್ಸ್ ತರಬೇತುದಾರರಾದ ಶಕುಂತಲಾ ಹಿರೇಮಠ ಮಾತನಾಡಿ, ವ್ಯಕ್ತಿಯ ಯಶಸ್ಸು ಹಾಗೂ ಶ್ರೇಯಸ್ಸಿನಲ್ಲಿ ಕ್ರೀಡೆಗಳ ಪಾತ್ರ ಮಹತ್ವದ್ದಾಗಿದೆ. ಹಂತ-ಹಂತವಾಗಿ ಗುಡ್ಡಗಾಡು ಓಟವನ್ನು ಹಮ್ಮಿಕೊಳ್ಳುವ ಮೂಲಕ ಅಂತರ ಕಾಲೇಜು ಹಂತದಲ್ಲಿ ನಡೆದ ಸ್ಪರ್ಧೆಯಲ್ಲಿ ಆಯ್ಕೆಯಾದ ವಿದ್ಯಾರ್ಥಿಗಳಿಗೆ ಅಂತರ್ ವಿಶ್ವ ವಿದ್ಯಾಲಯ ಪಂದ್ಯಾವಳಿಯಲ್ಲಿ ಭಾಗವಹಿಸಲು ಅವಕಾಶ ನೀಡಲಾಗುವುದು. ಈ ನಿಟ್ಟಿನಲ್ಲಿ ವಿದ್ಯಾರ್ಥಿಗಳು ನಿರಂತರ ಅಭ್ಯಾಸದೊಂದಿಗೆ ಕ್ರೀಡೆಯಲ್ಲಿ ಭಾಗವಹಿಸುವ ಮೂಲಕ ವಿಶ್ವವಿದ್ಯಾಲಯಕ್ಕೆ ಕೀರ್ತಿ ತರಬೇಕು ಎಂದರು. ಗುಡ್ಡಗಾಡು ಓಟಕ್ಕೆ ಸಂಸ್ಥೆಯ ಸಂಸ್ಥಾಪಕ ಅಧ್ಯಕ್ಷ ಡಾ. ಬಿ.ಎಫ್. ದಂಡಿನ ಚಾಲನೆ ನೀಡಿದರು. ದೈಹಿಕ ಶಿಕ್ಷಣದ ನಿವೃತ್ತ ನಿರ್ದೇಶಕ ವಿ.ಎಚ್.ಕಲಾದಗಿ ಮಾತನಾಡಿದರು. ಈ ಸಂದರ್ಭದಲ್ಲಿ ಶಕುಂತಲಾ ಹಿರೇಮಠ, ವಿ.ಎಚ್. ಕಲಾದಗಿ, ಡಿ.ಆರ್.ಕೊಳೆ ಅವರನ್ನು ಸನ್ಮಾನಿಸಲಾಯಿತು. ಗುಡ್ಡಗಾಡು ಓಟ ಸ್ಪರ್ಧೆಯಲ್ಲಿ ರಾಜ್ಯದ 25ಕ್ಕೂ ಹೆಚ್ಚು ಕಾಲೇಜುಗಳ ವಿದ್ಯಾರ್ಥಿಗಳು ಭಾಗವಹಿಸಿದ್ದರು. ಪ್ರಾಚಾರ್ಯ ಕೆ.ಎನ್. ಕಾರಭಾರಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಪ್ರೊ. ಬಿ.ವಿ.ರಾಧಾಕೃಷ್ಣ ನಿರೂಪಿಸಿದರು. ಡಾ. ಕೆ.ಎನ್.ಕಾರಭಾರಿ ವಂದಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.