ಕಲಕೇರಿ ಶಾಲೆಗೆ ವೀರಾಗ್ರಣಿ ಪ್ರಶಸ್ತಿ
ಮುಂಡರಗಿ: ತಾಲೂಕಿನ ಕಲಕೇರಿ ಗ್ರಾಮದಲ್ಲಿ ಈಚೆಗೆ ನಡೆದ ಕಲಕೇರಿ-ಹಿರೇವಡ್ಡಟ್ಟಿ ಕ್ಲಸ್ಟರ್ ಮಟ್ಟದ ಕ್ರೀಡಾಕೂಟದಲ್ಲಿ ಕಲಕೇರಿಯ ಸರ್ಕಾರಿ ಮಾದರಿ ಕನ್ನಡ ಗಂಡು ಮಕ್ಕಳ ಶಾಲೆಯ ವಿದ್ಯಾರ್ಥಿಗಳು ವೀರಾಗ್ರಣಿ ಪ್ರಶಸ್ತಿ ಪಡೆದುಕೊಂಡಿದ್ದಾರೆ.
ಮಹಾದೇವಪ್ಪ ನಾರಣ್ಣವರ 100 ಮೀ ಓಟದಲ್ಲಿ ಪ್ರಥಮ, 800 ಮೀ ಅಡತಡೆ ಓಟದಲ್ಲಿ ಪ್ರಥಮ ಹಾಗೂ ಉದ್ದ ಜಿಗಿತದಲ್ಲಿ ದ್ವಿತೀಯ ಸ್ಥಾನ ಪಡೆದು ವೈಯಕ್ತಿಕ ವೀರಾಗ್ರಣಿ ಪ್ರಶಸ್ತಿ ಪಡೆದುಕೊಂಡಿದ್ದಾನೆ. ರಾಜು ಹಾರೋಗೇರಿ-200 ಮೀ ಓಟದಲ್ಲಿ ತೃತೀಯ, ಶಾನು ಮಕಾಂದಾರ-400 ಮೀ. ಓಟದಲ್ಲಿ ತೃತೀಯ, ನಜೀರಸಾಬ ಗದ್ದಿಕೆರಿ-600 ಮೀ. ಓಟದಲ್ಲಿ ದ್ವಿತೀಯ, ಸಂತೋಷ ಲಮಾಣಿ-ಗುಂಡು ಎಸೆತದಲ್ಲಿ ತೃತೀಯ, ಸುರೇಶ ಲಮಾಣಿ-ಎತ್ತರ ಜಿಗಿತದಲ್ಲಿ ತೃತೀಯ ಸ್ಥಾನ ಪಡೆದು ಶಾಲೆಗೆ ಕೀರ್ತಿ ತಂದಿದ್ದಾರೆ. ಗುಂಪು ಆಟದಲ್ಲಿ ಬಾಲಕರ ವಿಭಾದಲ್ಲಿ ಖೋಖೋ, ವ್ಹಾಲಿಬಾಲ್, ಥ್ರೋಬಾಲ್ ಪ್ರಥಮ, 4್ಢ100 ರಿಲೇಯಲ್ಲಿ ದ್ವಿತೀಯ ಸ್ಥಾನ ಪಡೆದುಕೊಂಡಿದ್ದಾರೆ. ಶಾಲೆಯ ವಿದ್ಯಾರ್ಥಿಗಳ ಈ ಸಾಧನೆಗೆ ಶಾಲೆಯ ಮುಖ್ಯೋಪಾಧ್ಯಾಯರು, ಶಿಕ್ಷಕರು, ಸಿಬ್ಬಂದಿಗಳು ಹಾಗೂ ಗ್ರಾಮಸ್ಥರು ಅಭಿನಂದನೆ ಸಲ್ಲಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

