ಜಿಲ್ಲಾ ಉತ್ತಮ ಶಿಕ್ಷಕರಾಗಿ ಕೃಷ್ಣಪ್ಪ ಲಮಾಣಿ
ಲಕ್ಷ್ಮೇಶ್ವರ: ಸಮೀಪದ ಶಿಗ್ಲಿ ಗ್ರಾಮದ ಗ್ರಾಮಭಾರತಿ ಶಿಕ್ಷಣ ಸಮಿತಿಯ ಎಸ್.ಎಸ್. ಕೂಡ್ಲಮಠ ಮಾಧ್ಯಮಿಕ ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕ ಕೃಷ್ಣಪ್ಪ ಲಮಾಣಿ ಇವರು 2013-14ನೇ ಸಾಲಿನ ಗದಗ ಜಿಲ್ಲಾ ಉತ್ತಮ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾಗಿರುತ್ತಾರೆ.
16 ವರ್ಷಗಳಿಂದ ಎಸ್.ಎಸ್. ಕೂಡ್ಲಮಠ ಪ್ರೌಢಶಾಲೆಯಲ್ಲಿ ದೈಹಿಕ ಶಿಕ್ಷಣ ಶಿಕ್ಷಕರಾಗಿ ಮಕ್ಕಳಲ್ಲಿ ಕ್ರೀಡಾ ಸ್ಫೂರ್ತಿ ತುಂಬಿ ಉತ್ತಮ ತರಬೇತಿ ನೀಡುವ ಮೂಲಕ ರಾಜ್ಯ ಮತ್ತು ರಾಷ್ಟ್ರೀಯ ಮಟ್ಟದ ಕ್ರೀಡೆಗಳಲ್ಲಿ ಭಾಗವಹಿಸುವಂತೆ ಮಾಡಿ ಪ್ರಾಮಾಣಿಕ ಸೇವೆ ಸಲ್ಲಿಸಿದ್ದಾರೆ. ಭಾರತ ಸ್ಕೌಟ್ ಮತ್ತು ಗೈಡ್ನ ತಾಲೂಕು ಸಂಸ್ಥೆಯ ಕಾರ್ಯದರ್ಶಿ ಮತ್ತು ವಿವಿಧ ಸಂಘ ಸಂಸ್ಥೆಗಳ ನಿರ್ದೇಶಕರಾಗಿ ಸೇವೆ ಸಲ್ಲಿಸಿರುವ ಇವರನ್ನು ಜಿಲ್ಲಾ ಸಾಜನಿಕ ಶಿಕ್ಷಣ ಇಲಾಖೆಯು ಜಿಲ್ಲಾ ಉತ್ತಮ ಶಿಕ್ಷಕ ಪ್ರಶಸ್ತಿಯನ್ನು ನೀಡಿ ಗೌರವಿಸಿದೆ.
ಪ್ರಶಸ್ತಿ ಪುರಸ್ಕೃತ ಶಿಕ್ಷಕ ಕೃಷ್ಣಪ್ಪ ಲಮಾಣಿ ಅವರನ್ನು ಸಂಸ್ಥೆಯ ಅಧ್ಯಕ್ಷ ಡಾ. ವೈ.ಎಫ್.ಹಂಜಿ ಹಾಗೂ ಆಡಳಿತ ಮಂಡಳಿಯ ಸರ್ವ ಸದಸ್ಯರು, ಮುಖ್ಯೋಪಾಧ್ಯಾಯ ಎನ್.ಎನ್. ನೆಗಳೂರ, ಶಿಕ್ಷಕರು ಹಾಗೂ ಸಿಬ್ಬಂದಿ ವರ್ಗ, ವಿದ್ಯಾರ್ಥಿಗಳು ಅಭಿನಂದಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

