ಶಿಕ್ಷಕರಲ್ಲಿ ನೈತಿಕತೆ, ಪ್ರಾಮಾಣಿಕತೆ ಕ್ಷೀಣ
ಶಿರಹಟ್ಟಿ: ಶಿಕ್ಷಕರಲ್ಲಿ ಇಂದು ನೈತಿಕತೆ ಕ್ಷೀಣಿಸುತ್ತಿರುವುದು ದೇಶಕ್ಕೆ ಮಾರಕವಾಗಿದೆ. ವಿದ್ಯಾರ್ಥಿಗಳ ಭವಿಷ್ಯ ರೂಪಿಸುವ ಶಿಕ್ಷಕರಲ್ಲಿ ನೈತಿಕತೆ ಮತ್ತು ಪ್ರಾಮಾಣಿಕತೆಗೆ ಡಾ. ಎಸ್. ರಾಧಾಕೃಷ್ಣನ್ ಮಾದರಿಯಾಗಲಿ ಎಂದು ಶಾಸಕ ರಾಮಕೃಷ್ಣ ದೊಡ್ಡಮನಿ ಅಭಿಪ್ರಾಯಪಟ್ಟರು.
ಅವರು ಗುರುವಾರ ಸಾರ್ವಜನಿಕ ಶಿಕ್ಷಣ ಇಲಾಖೆ, ಜಿಪಂ ಗದಗ, ತಾಪಂ ಶಿರಹಟ್ಟಿ, ಪಪಂ ಶಿರಹಟ್ಟಿ, ಪುರಸಭೆ ಲಕ್ಷ್ಮೇಶ್ವರ, ಗ್ರಾಪಂ ಬೆಳ್ಳಟ್ಟಿ ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ ಶಿರಹಟ್ಟಿ ಇವರ ಆಶ್ರಯದಲ್ಲಿ ಶಾಸಕರ ಮಾದರಿ ಪ್ರಾಥಮಿಕ ಕನ್ನಡ ಹೆಣ್ಣು ಮಕ್ಕಳ ಶಾಲೆ ಬೆಳ್ಳಟ್ಟಿಯಲ್ಲಿ ಏರ್ಪಡಿಸಲಾಗಿದ್ದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಇಡೀ ದೇಶದ ಭವಿಷ್ಯವೇ ಶಿಕ್ಷಕರ ಕೈಯಲ್ಲಿದೆ. ಶಿಕ್ಷಕರು ತಮಗಿರುವ ಹೊಣೆಗಾರಿಕೆಯ ಗಂಭೀರತೆಯನ್ನು ಅರ್ಥಮಾಡಿಕೊಳ್ಳಬೇಕು. ಇತ್ತೀಚಿನ ದಿನಗಳಲ್ಲಿ ಶಿಕ್ಷಕರಲ್ಲಿ ನೈತಿಕತೆ ಕಡಿಮೆಯಾಗುತ್ತಿದೆ ಎನ್ನುವ ಮಾತು ಎಲ್ಲೆಡೆ ಕೇಳಿಬರುತ್ತಿದೆ. ಇದನ್ನು ಅರಿತು ಶಿಕ್ಷಕ ಸಮೂಹ ಮತ್ತು ಭಾವಿ ಶಿಕ್ಷಕರು ಸಾಮಾಜಿಕ ಜವಾಬ್ದಾರಿಯನ್ನು ಅರಿತು ಕೆಲಸ ನಿರ್ವಹಿಸಬೇಕು. ಸಂಸ್ಕಾರ ಎನ್ನುವುದು ಶಿಕ್ಷಕರ ಪ್ರತಿ ನಡೆ ನುಡಿಯಲ್ಲೂ ಕಾಣುವಂತಾಗಬೇಕು ಎಂದರು. ಗ್ರಾಪಂ ಅಧ್ಯಕ್ಷ ತಿಮ್ಮರಡ್ಡಿ ಮರಡ್ಡಿ, ತಾಪಂ ಸದಸ್ಯ ತಿಮ್ಮರಡ್ಡಿ ಅಳವಂಡಿ ಮಾತನಾಡಿದರು. ಬನ್ನಿಕೊಪ್ಪ ಬ್ರಹನ್ಮಠದ ಸುಜ್ಞಾನದೇವ ಶಿವಾಚಾರ್ಯ ಶ್ರೀಗಳು ಆಶೀರ್ವಚನ ನೀಡಿದರು. ಕ್ಷೇತ್ರ ಶಿಕ್ಷಣಾಧಿಕಾರಿ ಆರ್.ಎಸ್. ಬುರಡಿ ಮಾತನಾಡಿದರು. ಎ.ವೈ. ನವಲಗುಂದ ಉಪನ್ಯಾಸ ನೀಡಿದರು. ಜಿಪಂ ಸದಸ್ಯ ಎಂ.ಎಸ್. ದೊಡ್ಡಗೌಡರ, ಕಮಲವ್ವ ಸಜ್ಜನರ, ನಿರ್ಮಲಾ ಬರದೂರ, ತಾಪಂ ಅಧ್ಯಕ್ಷೆ ಸುನಂದಾ ಬಿದರಳ್ಳಿ, ಉಪಾಧ್ಯಕ್ಷೆ ಶಾರದಾ ಕವಲೂರ, ಗ್ರಾಪಂ ಉಪಾಧ್ಯಕ್ಷೆ ಅಕ್ಕಮ್ಮ ಗುತ್ತೆಮ್ಮನವರ, ಸ್ಥಾಯಿ ಸಮಿತಿ ಅಧ್ಯಕ್ಷ ಕೋಟೆಪ್ಪ ವರ್ದಿ, ಸದಸ್ಯ ನಿಂಬಣ್ಣ ಮಡಿವಾಳರ, ಗ್ರಾಪಂ ಸದಸ್ಯ ಶಿವನಗೌಡ ಪಾಟೀಲ, ದೇವರಡ್ಡಿ ಅಳವಂಡಿ, ಇಒ ವೈ.ಎಲ್. ಹಂಪಣ್ಣ ಮುಂತಾದವರು ಉಪಸ್ಥಿತರಿದ್ದರು. ನಿವೃತ್ತ ಶಿಕ್ಷಕರನ್ನು ಸನ್ಮಾನಿಸಲಾಯಿತು. ಗಡ್ಡದ್ದೇವರಮಠ ಸ್ವಾಗತಿಸಿದರು. ಕೋಡಬಾಳ ನಿರೂಪಿಸಿದರು. ಜಯಶ್ರೀ ಗುಡಿ ವಂದಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

