ಶಿಕ್ಷಕರು ಬದ್ಧತೆಯಿಂದ ಕಾರ್ಯನಿರ್ವಹಿಸಲಿ: ಡಾ. ತೋಂಟದ ಶ್ರೀ
ಮುಂಡರಗಿ: ಗುಣಾತ್ಮಕ ಶಿಕ್ಷಣ ನೀಡಲು ಶಿಕ್ಷಕರು ಬದ್ಧತೆಯಿಂದ ಕಾರ್ಯನಿರ್ವಹಿಸಬೇಕೆಂದು ಜ. ಡಾ. ತೋಂಟದ ಸಿದ್ಧಲಿಂಗ ಮಹಾಸ್ವಾಮಿಗಳು ಹೇಳಿದರು.
ಅವರು ಗುರುವಾರ ಗದಗ ಜಿಪಂ, ಮುಂಡರಗಿ ತಾಪಂ, ಸಾರ್ವಜನಿಕ ಶಿಕ್ಷಣ ಇಲಾಖೆ ಹಾಗೂ ಮುಂಡರಗಿಯ ಶಿಕ್ಷಕರ ದಿನಾಚರಣೆ ಸಮಿತಿ ಇವುಗಳ ಆಶ್ರಯದಲ್ಲಿ ಪಟ್ಟಣದ ತೋಂಟದಾರ್ಯ ಮಠದ ಆವರಣದಲ್ಲಿ ಏರ್ಪಡಿಸಿದ್ದ ಡಾ. ಸರ್ವಪಲ್ಲಿ ರಾಧಾಕೃಷ್ಣನ್ ಅವರ ಜನ್ಮದಿನೋತ್ಸವ ಹಾಗೂ ಶಿಕ್ಷಕರ ದಿನಾಚರಣೆ ಕಾರ್ಯಕ್ರಮದ ಸಾನ್ನಿಧ್ಯ ವಹಿಸಿ ಮಾತನಾಡಿದರು. ಹಣ, ಜಾತಿ, ದೈಹಿಕ ಬಲ, ರಾಜಕೀಯ ಬಲ ಇವೆಲ್ಲವುಗಳಿಗಿಂತ ಜ್ಞಾನ ಹೆಚ್ಚು ಶಕ್ತಿಯುತವಾದದ್ದು, ಅಂತಹ ಜ್ಞಾನವನ್ನು ಮಕ್ಕಳಿಗೆ ತುಂಬುವಂತಹ ಶಿಕ್ಷಕರ ಕಾರ್ಯ ಮೆಚ್ಚುವಂತದ್ದು ಎಂದರು.
ರೋಣ ಶಾಸಕ ಜಿ.ಎಸ್. ಪಾಟೀಲ ಮಾತನಾಡಿ, ಡಾ. ಸರ್ವಪಲ್ಲಿ ರಾಧಾಕೃಷ್ಣನ್ ಅವರ ತತ್ವಾದರ್ಶಗಳು ಇಂದಿನ ಶಿಕ್ಷಕರು ಮೈಗೂಡಿಸಿಕೊಳ್ಳಬೇಕು ಎಂದರು. ಶಿರಹಟ್ಟಿ ಶಾಸಕ ರಾಮಕೃಷ್ಣ ದೊಡ್ಡಮನಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಇದೇ ಸಂದರ್ಭದಲ್ಲಿ 15ಕ್ಕೂ ಹೆಚ್ಚು ತಾಲೂಕು ಮಟ್ಟದ ಉತ್ತಮ ಶಿಕ್ಷಕರನ್ನು ಹಾಗೂ ಸೇವಾ ನಿವೃತ್ತಿ ಹೊಂದಿದ ಶಿಕ್ಷಕರನ್ನು ಸನ್ಮಾನಿಸಲಾಯಿತು. ಹೇಮಂತಗೌಡ ಪಾಟೀಲ, ಕೊಟ್ರೇಶ ಅಂಗಡಿ, ಧ್ರವಕುಮಾರ ಹೊಸಮನಿ, ಡಿ.ಡಿ. ಮೋರನಾಳ, ಸೊಲಬಣ್ಣ ಜೋಬಾಳಿ, ಆನಂದಗೌಡ ಪಾಟೀಲ, ಬಸವರಾಜ ರಾಮೇನಹಳ್ಳಿ, ಬಸವರಾಜ ಬಿಸನಳ್ಳಿ, ರಾಮಣ್ಣ ಬಳ್ಳಾರಿ, ಎಂ.ಡಿ. ಬಾವಿಮನಿ, ಜಿ.ಎನ್. ಕಮ್ಮಾರ, ಅಶೋಕ ಹುಬ್ಬಳ್ಳಿ, ದೇವಪ್ಪ ರಾಮೇನಹಳ್ಳಿ, ತಹಸೀಲ್ದಾರ್ ಎಸ್.ಆರ್. ಶಿರಕೋಳ ಸೇರಿದಂತೆ ಅನೇಕರು ಇದ್ದರು. ತಾಪಂ ಕಾರ್ಯನಿರ್ವಾಹಕ ಅಧಿಕಾರಿ ಡಿ. ಮೋಹನ್ ಸ್ವಾಗತಿಸಿದರು. ಮಂಜುನಾಥ ಇಟಗಿ, ಎ.ಕೆ. ಮುಲ್ಲಾನವರ ನಿರೂಪಿಸಿದರು. ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ಎ. ರಡ್ಡೇರ ವಂದಿಸಿದರು. ಇದಕ್ಕೂ ಮುನ್ನ ಪಟ್ಟಣದ ಗಣೇಶ ದೇವಸ್ಥಾನದಿಂದ ಸರ್ವಪಲ್ಲಿ ರಾಧಾಕೃಷ್ಣನ್ ಭಾವಚಿತ್ರದ ಮೆರವಣಿಗೆಯನ್ನು ಜ.ಡಾ. ಅನ್ನದಾನೀಶ್ವರ ಶ್ರೀ ಉದ್ಘಾಟಿಸಿದರು.
ಹಣ, ಜಾತಿ, ದೈಹಿಕ ಬಲ, ರಾಜಕೀಯ ಬಲ ಇವೆಲ್ಲವುಗಳಿಗಿಂತ ಜ್ಞಾನ ಹೆಚ್ಚು ಶಕ್ತಿಯುತವಾದದ್ದು, ಅಂತಹ ಜ್ಞಾನವನ್ನು ಮಕ್ಕಳಿಗೆ ತುಂಬುವಂತಹ ಶಿಕ್ಷಕರ ಕಾರ್ಯ ಮೆಚ್ಚುವಂತದ್ದು
ತೋಂಟದ ಡಾ. ಸಿದ್ಧಲಿಂಗ ಶ್ರೀ
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

