ಗದಗ

ಶಿಕ್ಷಕರು ರಾಜಕೀಯದಿಂದ ದೂರವಿರಲಿ

Published On :

ನರಗುಂದ:  ಶಿಕ್ಷಕ ವೃತ್ತಿ ಅತ್ಯಂತ ಪವಿತ್ರವಾಗಿದ್ದು, ಈ ವೃತ್ತಿಯಲ್ಲಿರುವವರು ರಾಜಕೀಯದಿಂದ ದೂರವಿರಬೇಕು ಎಂದು ಶಾಸಕ ಬಿ.ಆರ್. ಯಾವಗಲ್ ಹೇಳಿದರು.
ಅವರು ಗುರುವಾರ ತಾಲೂಕು ಮಟ್ಟದ ಶಿಕ್ಷಕರ ದಿನಾಚರಣೆ ಅಂಗವಾಗಿ ತಾಲೂಕಿನ ಕೊಣ್ಣೂರ ಗ್ರಾಮದ ಕೆಇಎಸ್ ಪದವಿ ಪೂರ್ವ ಮಹಾವಿದ್ಯಾಲಯದಲ್ಲಿ ಜಿಪಂ, ಸಾಶಿ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ ನರಗುಂದ ಇವುಗಳ ಆಶ್ರಯದಲ್ಲಿ ಏರ್ಪಡಿಸಲಾಗಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದರು.
ಪ್ರತಿಯೊಬ್ಬ ಶಿಕ್ಷಕನ ಕೈಯಲ್ಲಿ ಈ ದೇಶಕ್ಕೆ ಉತ್ತಮ ಪ್ರಜೆಗಳನ್ನು ರೂಪಿಸುವ ಶಕ್ತಿ ಇದೆ. ಇತ್ತೀಚಿನ ದಿನಗಳಲ್ಲಿ ಕೆಲವು ಶಿಕ್ಷಕರು ತಮ್ಮ ವೃತ್ತಿ ಮರೆತು ರಾಜಕೀಯ ಮಾಡುವುದು ಹೆಚ್ಚು ಕಂಡು ಬರುತ್ತಿದೆ. ಅಂತವರು ಮುಂದಿನ ದಿನಗಳಲ್ಲಿ ಅವುಗಳನ್ನೆಲ್ಲಾ ಕೈ ಬಿಟ್ಟು ಮಕ್ಕಳಿಗೆ ಉತ್ತಮ ವಿದ್ಯೆ ಕೊಡಲು ಮುಂದಾಗಬೇಕು ಎಂದರು. ಈ ಸಂದರ್ಭದಲ್ಲಿ ತಾಲೂಕಿನಲ್ಲಿ ಉತ್ತಮ ಶಿಕ್ಷಕರಾಗಿ ಸೇವೆ ಸಲ್ಲಿಸಿದವರಿಗೆ ಸನ್ಮಾನ ಕಾರ್ಯಕ್ರಮ ಜರುಗಿತು. ಸಾನ್ನಿಧ್ಯವನ್ನು ನರಗುಂದ ಪತ್ರಿವನ ಮಠದ ಸಿದ್ದವೀರ ಶ್ರೀಗಳು ವಹಿಸಿ ಆಶೀರ್ವಚನ ನೀಡಿದರು. ಧಾರವಾಡ ಬಾಲ ವಿಕಾಸ ಅಕಾಡೆಮಿ ಮಾಜಿ ಅಧ್ಯಕ್ಷ ಶಂಕರ ಹಲಗತ್ತಿ, ಜಿಪಂ ಸದಸ್ಯ ಶಾಂತಾ ದಂಡಿನ, ತಾಪಂ ಅಧ್ಯಕ್ಷ ಗುರಪ್ಪ ಆದಪ್ಪನವರ, ಉಪಾಧ್ಯಕ್ಷ ಗುರುದೇವಿ ಶಾನವಾಡಮಠ, ಗ್ರಾಪಂ ಅಧ್ಯಕ್ಷ ರೇಣವ್ವ ತೋಟದ, ಉಪಾಧ್ಯಕ್ಷ ಎಸ್.ಎಸ್. ಸಾಲಿಗೌಡ್ರ, ಸಿದ್ಧನಗೌಡ್ರ ಯಲ್ಲಪ್ಪಗೌಡ್ರ, ಸುವರ್ಣಾ ಪಾಟೀಲ, ಹೇಮಂತ ರಾಯರಡ್ಡಿ, ಮಾರುತಿ ಮೇಟಿ, ವಿ.ಟಿ. ಕಲ್ಲೂರ, ವೈ.ಎಫ್. ಪಾಟೀಲ, ರಾಜುಗೌಡ ಕೆಂಚನಗೌಡ್ರ ಹಾಜರಿದ್ದರು. ಕ್ಷೇತ್ರ ಶಿಕ್ಷಣಾಧಿಕಾರಿ ಮಂಗಳಾ ಪಾಟೀಲ ಸ್ವಾಗತಿಸಿದರು. ಶಹಜಾನ ಮುದಕವಿ ನಿರೂಪಿಸಿದರು. ಮುಖ್ಯೋಪಾಧ್ಯಾಯ ಎಂ.ಎಂ .ಅರ್ಭಣದ ವಂದಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.