ಗ್ರಾಮೀಣ ಮಕ್ಕಳ ಶಿಕ್ಷಣ ಅಭಿವೃದ್ಧಿ ಅವಶ್ಯ: ಸಚಿವ ಎಚ್.ಕೆ. ಪಾಟೀಲ್
ಕನ್ನಡಪ್ರಭ ವಾರ್ತೆ, ಗದಗ, ಸೆ. 6
ಗ್ರಾಮೀಣ ಪ್ರದೇಶದ ಮಕ್ಕಳ ಶಿಕ್ಷಣದ ಅಭಿವೃದ್ಧಿ ದೃಷ್ಠಿಯಿಂದ ತಾಂತ್ರಿಕ ಇಲಾಖೆ ಹೊಸ ಟ್ರೇಡ್ಗಳನ್ನು ಪ್ರಾರಂಭಿಸಲು ಮುಂದಾಗಬೇಕು ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಚ್.ಕೆ. ಪಾಟೀಲ ಹೇಳಿದರು.
ಅವರು ಗುರುವಾರ ನಗರದ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ನಡೆದ ರಾಷ್ಟ್ರೀಯ ಸೇವಾ ಯೋಜನೆ, ಯುವ ರೆಡ್ ಕ್ರಾಸ್ ಘಟಕ, ವಿದ್ಯಾರ್ಥಿ ಸಂಘ ಉದ್ಘಾಟನೆ ಹಾಗೂ ಶಿಕ್ಷಕರ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ಹೊಸ-ಹೊಸ ಟ್ರೇಡ್ಗಳನ್ನು ಪ್ರಾರಂಭಿಸುವ ಮೂಲಕ ಮಕ್ಕಳಿಗೆ ತಾಂತ್ರಿಕ ಶಿಕ್ಷಣದಲ್ಲಿ ಉತ್ತಮ ಭವಿಷ್ಯ ಕಂಡುಕೊಳ್ಳಲು ಸಾಧ್ಯವಾಗುತ್ತದೆ. ದೇಶದ ಅಭಿಯಂತರರಿಗೆ ಭಾರೀ ಬೇಡಿಕೆ ಇದೆ. ಹಾಗಾಗಿ ಜಗತ್ತಿನಲ್ಲಿ ಭಾರತದ ಅಭಿಯಂತರು ಉತ್ತಮ ಕೆಲಸಗಳಿಂದಾಗಿ ಹೆಸರಾಗಿದ್ದಾರೆ. ಇಂದು ಕೇವಲ ಕಂಪ್ಯೂಟರ್ ಮುಂದೆ ಕುಳಿತು ಮಾಡುವುದಷ್ಟೇ ಕೆಲಸವಲ್ಲ. ಬದಲಾಗಿ ಕಾರ್ಖಾನೆಗಳಲ್ಲಿ ಶ್ರಮವಹಿಸಿ ಕೆಲಸ ಮಾಡುವವರ ಅವಶ್ಯಕತೆಯೂ ಇದೆ. ಮಾನವ ಸಂಪನ್ಮೂಲ ದೇಶದ ಆಸ್ತಿಯಾಗಿದ್ದರಿಂದ ಇಂದು ನಾವೂ ದೇಶದ ಜನಸಂಖ್ಯೆಯನ್ನು ಹತೋಟಿಗೆ ತರಲು ಚಿಂತಿಸುತ್ತಿಲ್ಲ. ಈ ಬಗ್ಗೆ ಚಿಂತಿಸಬೇಕಾದ ಅವಶ್ಯಕತೆ ಎಲ್ಲರ ಮೇಲಿದೆ ಎಂದರು.
ನಿವೃತ್ತ ಪ್ರಾಚಾರ್ಯ ಕೆ.ಬಿ. ತಳಗೇರಿ ಮಾತನಾಡಿ, ವಿದ್ಯಾರ್ಥಿಗಳು ಜೀವನದಲ್ಲಿ ಉತ್ತಮ ಸಾಧನೆ ಮಾಡಲು ಡಾ. ರಾಧಾಕೃಷ್ಣನ್ ಅವರ ಆದರ್ಶಗಳೇ ರ್ಸ್ಫೂದಾಯಕವಾಗಿವೆ. ಪ್ರತಿಯೊಬ್ಬರೂ ಜೀವನದಲ್ಲಿ ಗುರಿ ಮುಟ್ಟುವ ಉದ್ದೇಶದಿಂದ ಉತ್ತಮ ಕನಸುಗಳನ್ನು ಕಟ್ಟಿಕೊಂಡು ಸಾರ್ಥಕ ಬದುಕು ಸಾಗಿಸುವಂತಾಗಬೇಕು. ಕಾಲೇಜು ಹಂತದಲ್ಲಿ ರಾಷ್ಟ್ರೀಯ ಸೇವಾ ಘಟಕ, ರೆಡ್ಕ್ರಾಸ್, ವಿದ್ಯಾರ್ಥಿ ಸಂಘದಂತಹ ಸಂಘಟನೆ ವಿದ್ಯಾರ್ಥಿಗಳಲ್ಲಿ ಸೇವಾ ಮನೋಭಾವನೆಯನ್ನು ಬೆಳೆಸುತ್ತದೆ ಎಂದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಎಚ್.ಯು. ತಳವಾರ ವಹಿಸಿದ್ದರು. ಅತಿಥಿಗಳಾಗಿ ಆಗಮಿಸಿದ್ದ ಹರ್ಷವರ್ಧನ ಶೀಲವಂತರ ಪ್ರಾಸ್ತಾವಿಕವಾಗಿ ಮಾತನಾಡಿದರು. ಬಿ.ಎ. ಬ್ಯಾಳಿ, ಪ್ರಾಚಾರ್ಯ ರಾಜೇಶ ಹೊಂಗಲ ಸೇರಿದಂತೆ ಕಾಲೇಜಿನ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

