ಗದಗ

ಹಾಸ್ಟೆಲ್ ಸುಧಾರಿಸಿ: ಪ್ರತಿಭಟನೆ

Published On :

ಕನ್ನಡಪ್ರಭ ವಾರ್ತೆ, ಗದಗ, ಸೆ. 6
ಪ.ಜಾ., ಪ.ಪಂ., ಹಿಂದುಳಿದ ವರ್ಗ ವಿದ್ಯಾರ್ಥಿಗಳ ವಸತಿ ನಿಲಯಗಳ ಸಮಗ್ರ ಸುಧಾರಣೆಗೆ ಆಗ್ರಹಿಸಿ ಎಬಿವಿಪಿ ವತಿಯಿಂದ ಶುಕ್ರವಾರ ಸಂಜೆ ನಗರದ ಮಹಾತ್ಮಾಗಾಂಧಿ ವೃತ್ತದಲ್ಲಿ ಪ್ರತಿಭಟನೆ ನಡೆಸಿ, ತಹಸೀಲ್ದಾರ್ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು.
ಈ ಸಂದರ್ಭದಲ್ಲಿ ಸಂಘಟನೆಯ ಶಿವಾನಂದ ಬಿರಾದಾರ, ಮಹಾಂತೇಶ ಮಾಳಗಿ ಮಾತನಾಡಿ, ಹಿಂದಿನ ಸರ್ಕಾರ ವಿದ್ಯಾರ್ಥಿಗಳಿಗೆ ರು. 850-1000 ಊಟದ ಖರ್ಚುನ್ನು ನೀಡುವುದಾಗಿ ಬಜೆಟ್‌ನಲ್ಲಿ ಘೋಷಣೆ ಮಾಡಿತ್ತು, ಆದರೆ ಸದ್ಯದ ಸರ್ಕಾರ ಈ ಯೋಜನೆಯನ್ನು ರದ್ದು ಮಾಡಿದ್ದು, ಇದರಿಂದ ವಿದ್ಯಾರ್ಥಿಗಳಿಗೆ ತೀವ್ರ ತೊಂದರೆಯಾಗುತ್ತಿದೆ. ಇದರೊಟ್ಟಿಗೆ ಸಂಘಟನೆಯು ಈಗಾಗಲೇ ಸರ್ಕಾರಕ್ಕೆ 27 ಪ್ರಮುಖ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಮನವಿ ಮಾಡಲಾಗಿದೆ. ಸರ್ಕಾರ ನಮ್ಮ ನ್ಯಾಯಯುತ ಬೇಡಿಕೆಗಳನ್ನು ಕೂಡಲೇ ಈಡೇರಿಸಬೇಕು ಎಂದು ಆಗ್ರಹಿಸಿದರು.
ಈ ಸಂದರ್ಭದಲ್ಲಿ ಶಿಲ್ಪಾ ಬಂಡಿಹಾಳ, ಹುತ್ತಪ್ಪ ಮಾರನಸಬಸರಿ, ಮೈಲಾರಪ್ಪ ಚಲವಾದಿ, ಬಸವರಾಜ ಒಕ್ಕೂರ, ಭೀಮೇಶ ಕುಡಗಂಟಿ, ಮೈಲಾರಪ್ಪ ಹರಿಜನ, ಉಮೇಶ ತಗಡಿನಮನಿ, ಮಾಂತೇಶ ಮಂಡಜ್ಜನವರ, ಮಂಜುನಾಥ ರಾಠೋಡ, ಮಂಜುನಾಥ ನಾಯಕ ಸೇರಿದಂತೆ ಸಂಘಟನೆಯ ಹಲವಾರು ಕಾರ್ಯಕರ್ತರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.
--

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.