ಗದಗ

ಸುರಕ್ಷತೆಗೆ ತಂತ್ರಜ್ಞಾನ ಅವಶ್ಯ

Published On :

ಗದಗ: ಜೀವನ ಮತ್ತು ಆಸ್ತಿ ಸಂರಕ್ಷಣೆ ಹಾಗೂ ಸುರಕ್ಷತೆಗೆ ಅತ್ಯಾಧುನಿಕ ತಂತ್ರಜ್ಞಾನ ಅವಶ್ಯ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆಯ ನಿವೃತ್ತ ಜಂಟಿ ನಿರ್ದೇಶಕ ಎಸ್.ಎನ್. ಖಾಜಿ ಅಭಿಪ್ರಾಯಪಟ್ಟರು.
ಅವರು ಶುಕ್ರವಾರ ನಗರದಲ್ಲಿ ಸಿಸಿಟಿವಿ ಸೆಪ್ಟಿ ಲಾಕರ್ಸ್ ಕೊನಕ್ಸ್ ಮಳಿಗೆಯ ಉದ್ಘಾಟನಾ ಸಮಾರಂಭದಲ್ಲಿ ಪಾಲ್ಗೊಂಡು ಮಾತನಾಡಿದರು. ಕಳ್ಳತನ ಮತ್ತು ವಂಚನೆಯಂತಹ ಘಟನೆಗಳನ್ನು ಕಂಡುಹಿಡಿಯಲು ಅತ್ಯಾಧುನಿಕ ತಂತ್ರಜ್ಞಾನ ಬಳಕೆ ಮಾಡುವುದು ಇಂದಿನ ದಿನಗಳಲ್ಲಿ ಅನಿವಾರ್ಯವಾಗಿದೆ ಎಂದರು.
ಉದ್ಘಾಟಿಸಿ ಮಾತನಾಡಿದ ಮುಸ್ಲಿಂ ಸಮಾಜದ ಯುವ ಮುಖಂಡ ರಜಾಕ್ ಡಂಕೇದ್, ವಿಜ್ಞಾನ ಮತ್ತು ತಂತ್ರಜ್ಞಾನ ಇಂದು ಸಾಕಷ್ಟು ಅಭಿವೃದ್ಧಿ ಹೊಂದಿದೆ. ಇದರ ಸದ್ಬಳಕೆ ಆಗಬೇಕು ಎಂದರು.
ನಗರಸಭೆ ಮಾಜಿ ಸದಸ್ಯ ಸಿರಾಜ್ ಬಳ್ಳಾರಿ, ಗಣ್ಯರಾದ ಮೌಲಾನ ಶಮಶುದ್ದೀನ್, ಝಾಕೀರ್ ಮುಜಾವರ, ಜುನೇದ ಉಮಚಗಿ, ಮೆಹಬೂಬ ಕಾಗದಗಾರ ಮುಂತಾದವರು ಪಾಲ್ಗೊಂಡಿದ್ದರು.
ಪ್ರಾರಂಭದಲ್ಲಿ ಕುರಾಣ ಪಠಣವಾಯಿತು. ಎ.ಎಲ್. ಬಿಜಾಪುರ ನಿರೂಪಿಸಿದರು. ಮುಸ್ತಾಕ ಬಿಜಾಪುರ ವಂದಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.