ಅಂಗನವಾಡಿಗಳಿಂದ ಮಕ್ಕಳಿಗೆ ಮೂಲಶಿಕ್ಷಣ
ಕನ್ನಡಪ್ರಭ ವಾರ್ತೆ, ಗದಗ, ಸೆ. 8
ಅಂಗನವಾಡಿ ಕೇಂದ್ರಗಳಲ್ಲಿ ದೊರೆಯುವ ಶಿಕ್ಷಣವು ಮಕ್ಕಳಿಗೆ ಮೂಲ ತಳಹದಿಯ ಶಿಕ್ಷಣವಾಗಿದೆ. ಇಲ್ಲಿ ಸಿಗುವ ಉತ್ತಮ ಶಿಕ್ಷಣದಿಂದ ಮಕ್ಕಳು ಉತ್ತಮ ಪ್ರಜೆಗಳಾಗಲು ಸಾಧ್ಯ ಎಂದು ಗ್ರಾಪಂ ಸದಸ್ಯ ಮುಡಿಯಪ್ಪ ಶಿಂಗ್ಟಾಲಕೇರಿ ಹೇಳಿದರು.
ಅವರು ಗುರುವಾರ ಸಮೀಪದ ಕೋಟುಮಚಗಿ ಗ್ರಾಮದ 278ನೇ ಅಂಗನವಾಡಿ ಕೇಂದ್ರದಲ್ಲಿ ನೇತ್ರಾವತಿ ಸ್ವ-ಸಹಾಯ ಸಂಘ ಮತ್ತು ರೇಣುಕಾದೇವಿ ಸ್ವ-ಸಹಾಯ ಸಂಘಗಳ ಆಶ್ರಯದಲ್ಲಿ ಡಾ. ಸರ್ವಪಲ್ಲಿ ರಾಧಾಕೃಷ್ಣನ್ ಅವರ 125ನೇ ಜನ್ಮ ದಿನಾಚರಣೆಯ ಅಂಗವಾಗಿ ಹಮ್ಮಿಕೊಳ್ಳಲಾಗಿದ್ದ ಅಂಗನವಾಡಿ ಶಿಕ್ಷಕಿಗೆ ಸನ್ಮಾನ ಸಮಾರಂಭದಲ್ಲಿ ಮಾತನಾಡಿದರು.
ಅಂಗನವಾಡಿ ಮಕ್ಕಳಿಗೆ ಉತ್ತಮ ಶಿಕ್ಷಣವನ್ನು ಕೊಡುವ ಉದ್ದೇಶಗಳಿಂದ ಸರ್ಕಾರಗಳು ಸಾಕಷ್ಟು ಯೋಜನೆಗಳನ್ನು ಜಾರಿಗೆ ತಂದಿವೆ. ಅವುಗಳನ್ನು ಸಮರ್ಪಕವಾಗಿ ತಿಳಿದುಕೊಂಡು ಎಲ್ಲ ಮಕ್ಕಳಿಗೂ ಸರ್ಕಾರದ ಯೋಜನೆಗಳು ಸಿಗುವಂತೆ ಮಾಡುವ ಮಹತ್ತರವಾದ ಜವಾಬ್ದಾರಿಯು ಅಂಗನವಾಡಿ ಶಿಕ್ಷಕಿಯರ ಮೇಲಿದೆ. ಇಂತಹ ಜವಾಬ್ದಾರಿಯನ್ನು ಅರಿತುಕೊಂಡು ಪುಟ್ಟ ಮಕ್ಕಳಿಗೆ ಶಿಕ್ಷಣವನ್ನು ನೀಡುವುದು ಅಂಗನವಾಡಿ ಶಿಕ್ಷಕಿಯರ ಕೆಲಸವಾಗಿದೆ ಎಂದರು.
ಗ್ರಾಮ ಪಂಚಾಯಿತಿ ಸದಸ್ಯ ಎಂ.ಆರ್. ಬೂದಿಹಾಳ ಮುಂತಾದವರು ಮಾತನಾಡಿದರು.
ಸಮಾರಂಭದ ಅಧ್ಯಕ್ಷತೆ ಯಲ್ಲಪ್ಪ ಗುರಿಕಾರ ವಹಿಸಿದ್ದರು. ಇದೇ ಸಂದರ್ಭದಲ್ಲಿ ಅಂಗನವಾಡಿಯ ಶಿಕ್ಷಕಿ ದೇವವ್ವ ಕಮ್ಮಾರ ಅವರನ್ನು ಸ್ವಸಹಾಯ ಸಂಘಗಳ ವತಿಯಿಂದ ಸನ್ಮಾನಿಸಲಾಯಿತು. ಮಂಡಳ ಪಂಚಾಯಿತಿಯ ಮಾಜಿ ಸದಸ್ಯ ಮಾರುತಿ ಪೂಜಾರ, ರೋಶನಬಿ ಬಳಗಾನೂರ, ಸುಶಿಲಮ್ಮ ಶಿಂಗ್ಟಾಲಕೇರಿ, ರೇಣುಕಾ ಮಂಗಳಗಟ್ಟಿ, ಶಾಂತಮ್ಮ ಜಗ್ಗಲ, ದೇವಕ್ಕ ಜಗ್ಗಲ, ಈರಮ್ಮ ಕೊಪ್ಪದ, ಪ್ರೇಮಾ ಮಲಕಶೆಟ್ಟಿ ಮುಂತಾದವರು ಉಪಸ್ಥಿತರಿದ್ದರು. ಅಕ್ಕಮ್ಮ ಕುರಿ ಸ್ವಾಗತಿಸಿ, ವಂದಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

