ಜೆಡಿಎಸ್ ಅಭ್ಯರ್ಥಿಯಿಂದ ನಾಮಪತ್ರ ಸಲ್ಲಿಕೆ
ಮುಂಡರಗಿ: ಸೆ. 29 ರಂದು ನಡೆಯಲಿರುವ ಹಮ್ಮಿಗಿ ಜಿಪಂ ಕ್ಷೇತ್ರದ ಉಪ ಚುನಾವಣೆಯ ನಾಮಪತ್ರ ಸಲ್ಲಿಕೆ ಬುಧವಾರ ಪ್ರಾರಂಭಗೊಂಡಿದೆ.
ಮೊದಲ ದಿನ ಜೆಡಿಎಸ್ ಅಭ್ಯರ್ಥಿಯಾಗಿ ಮಾಜಿ ಜಿಪಂ ಸದಸ್ಯ ವಿರೂಪಾಕ್ಷಪ್ಪ ಜೋಗಿನ ವಿಶೇಷ ಚುನಾವಣಾಧಿಕಾರಿ ಎಸ್.ಎಸ್. ಪಾಟೀಲ ಅವರಿಗೆ ನಾಮಪತ್ರ ಸಲ್ಲಿಸಿದರು. ನಂತರ ತಾಲೂಕು ಜೆಡಿಎಸ್ ಅಧ್ಯಕ್ಷ ಎಂ.ಜಿ. ವಡ್ಡಟ್ಟಿಯವರ ನಿವಾಸದಲ್ಲಿ ಪತ್ರಿಕಾಗೋಷ್ಠಿ ನಡೆಸಿ, ಈ ಹಿಂದೆ ತಾವು ಜಿಪಂ ಸದಸ್ಯರಾದ ಸಂದರ್ಭದಲ್ಲಿ ಮಾಡಿದ ಹತ್ತು ಹಲವಾರು ಅಭಿವೃದ್ಧಿ ಕೆಲಸಗಳು ಮತದಾರರ ಮುಂದಿವೆ. ಅದನ್ನು ಗಮನಿಸಿ ಮತದಾರರು ತಮಗೆ ಈ ಉಪ ಚುನಾವಣೆಯಲ್ಲಿ ಮತ್ತೊಮ್ಮೆ ಆಶೀರ್ವದಿಸಲಿದ್ದಾರೆ ಎಂದರು.
ತಾಲೂಕು ಜೆಡಿಎಸ್ ಅಧ್ಯಕ್ಷ ಎಂ.ಜಿ. ವಡ್ಡಟ್ಟಿ ಮಾತನಾಡಿ, ಹಮ್ಮಿಗಿ ಭಾಗದಲ್ಲಿ ಶಿಂಗಟಾಲೂರು ಏತನೀರಾವರಿ ಯೋಜನೆಯಲ್ಲಿ ಭೂಮಿ ಕಳೆದುಕೊಂಡ ರೈತರಿಗೆ ಅಂದಿನ ಸಿಎಂ ಎಚ್.ಡಿ. ಕುಮಾರಸ್ವಾಮಿ ರೈತರು ಕೇಳಿದಷ್ಟು ಪರಿಹಾರ ಒದಗಿಸಿದ್ದಾರೆ. ಹೀಗಾಗಿ ಹಮ್ಮಿಗಿ ಭಾಗದ ಜನರಿಗೆ ಜೆಡಿಎಸ್ ಬಗ್ಗೆ ಸಾಕಷ್ಟು ಪ್ರೀತಿ, ವಿಶ್ವಾಸವಿದೆ. ಆದ್ದರಿಂದ ಬರುವ ಉಪಚುನಾವಣೆಯಲ್ಲಿ ಇಲ್ಲಿನ ಮತದಾರರು ಜೆಡಿಎಸ್ ಅಭ್ಯರ್ಥಿ ಪರ ಮತ ನೀಡಲಿದ್ದಾರೆ ಎಂದರು. ಈ ಸಂದರ್ಭದಲ್ಲಿ ಬಿ.ಎಸ್. ಹಿರೇಗೌಡ್ರ, ಶಿವನಗೌಡ ಗೌಡ್ರ, ಬಸವರಾಜ ದೇಸಾಯಿ, ಮಾರುತಿ ಹೊಸಮನಿ, ಮಾರುತಿ ಕವಲೂರ, ಉಮೇಶ ಹಿರೇಗೌಡ್ರ ಮುಂತಾದವರು ಉಪಸ್ಥಿತರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

