ಮಹಿಳಾ ಸಾಕ್ಷರತೆಯಿಂದ ದೇಶದ ಅಭಿವೃದ್ಧಿ: ಅಮಾತಿಗೌಡ್ರ
ರೋಣ: ಮಹಿಳೆಯರು ಸಾಕ್ಷರರಾದರೇ ದೇಶದ ಅಭಿವೃದ್ಧಿಯಾಗುವುದರಲ್ಲಿ ಸಂದೇಹವಿಲ್ಲ. ಆ ನಿಟ್ಟಿನಲ್ಲಿ ಪ್ರತಿಯೊಬ್ಬರೂ ಅಕ್ಷರ ಜ್ಞಾನ ಸಂಪಾದಿಸಬೇಕು ಎಂದು ಪ್ರೌಢಶಾಲಾ ಶಿಕ್ಷಕರ ಸಂಘದ ತಾಲೂಕು ಅಧ್ಯಕ್ಷ ವಿ.ಎನ್.ಅಮಾತಿಗೌಡ್ರ ಹೇಳಿದರು.
ಅವರು ಈಚೆಗೆ ಪಟ್ಟಣದ ತಾಪಂ ಕಚೇರಿ ಆವರಣದಲ್ಲಿ ಜರುಗಿದ ವಿಶ್ವ ಸಾಕ್ಷರತಾ ದಿನಾಚರಣೆ ಕಾರ್ಯಕ್ರಮದಲ್ಲಿ ಸಾಕ್ಷರತಾ ಧ್ವಜಾರೋಹಣ ನೆರವೇರಿಸಿ ಮಾತನಾಡಿದರು. ಶಿಕ್ಷಣದಿಂದ ಸರ್ವಾಂಗೀಣ ಪ್ರಗತಿಯಾಗುತ್ತದೆ. ವ್ಯಕ್ತಿಯ ವ್ಯಕ್ತಿತ್ವ ವಿಕಸನಗೊಳ್ಳಲು ಶಿಕ್ಷಣ ಅತ್ಯಂತ ಮಹತ್ವದ್ದಾಗಿದೆ. ವ್ಯಕ್ತಿ ರಾಜಕೀಯ, ಸಾಮಾಜಿಕ, ಆರ್ಥಿಕ, ವೈಜ್ಞಾನಿಕ, ಔದ್ಯೋಗೀಕ, ತಾಂತ್ರಿಕ, ಯಾಂತ್ರಿಕ ಕ್ಷೇತ್ರದ ಬಗ್ಗೆ ತಿಳಿವಳಿಕೆ ಮೂಡಬೇಕಾದಲ್ಲಿ ಶಿಕ್ಷಣ ಅತ್ಯಗತ್ಯವಾಗಿದೆ. ಪ್ರತಿಯೊಬ್ಬರೂ ಅಕ್ಷರಸ್ಥರಾಗಬೇಕು ಎಂದು ಸರ್ಕಾರ ಸಾಕ್ಷರತಾ ಅಭಿಯಾನ, 1ರಿಂದ 14 ವರ್ಷದೊಳಗಿನ ಮಕ್ಕಳಿಗೆ ಉಚಿತ ಮತ್ತು ಕಡ್ಡಾಯ ಶಿಕ್ಷಣ ಕಲ್ಪಿಸಿದೆ. ಅಲ್ಲದೆ ವಯಸ್ಕರಿಗೆ ರಾತ್ರಿ ಶಾಲೆ ತರೆದಿದೆ ಎಂದರು. ತಾಲೂಕು ಸಾಕ್ಷರತಾ ಸಂಯೋಜಕ ಜಿ.ಬಿ. ಹಾವನಗಿ ಸಾಕ್ಷರ ಪ್ರತಿಜ್ಞಾವಿಧಿ ಬೋಧಿಸಿದರು. ತಾಪಂ ವ್ಯವಸ್ಥಾಪಕಿ ಎಸ್.ವಿ. ಜೋಗರಡ್ಡಿ, ವೀರಣ್ಣ ಯಾಳಗಿ, ಸುರೇಶ ಐಹೊಳ್ಳಿ, ವೆಂಕನಗೌಡ ಪಾಟೀಲ, ಸಂಗಪ್ಪ ಶಲವಡಿ, ಗೋದಿಗನೂರ, ಅರಳಿಕಟ್ಟಿ, ಸಂಗಮೇಶ, ಮಂಜುನಾಥ ಮುಂತಾದವರು ಇದ್ದರು. ಎ.ಕೆ. ನಾಲ್ವಾಡದ ಸ್ವಾಗತಿಸಿ, ವಂದಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

